Compulsory voting is essential for the survival of democracy: Ny.Bhola Pandit

ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯ ಮತದಾನ ಅವಶ್ಯ: ನ್ಯಾ.ಭೋಲಾ ಪಂಡಿತ್

ಬೆಂ.ಗ್ರಾ.ಜಿಲ್ಲೆ: 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡುವದು ಅವಶ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಮೂರ್ತಿ ಭೋಲಾ ಪಂಡಿತ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ʼʼರಾಷ್ಟ್ರೀಯ ಮತದಾರರ ದಿನಾಚರಣೆʼʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ದೇಶದಲ್ಲಿ 2024 ರ ಮತದಾರರ ಪಟ್ಟಿ ಪ್ರಕಾರ 27 ಕೋಟಿಯಷ್ಟು ಯುವ ಮತದಾರರು ಇದ್ದಾರೆ. ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ. ನಮ್ಮ ಒಂದು ಮತದಿಂದ ದೇಶಕ್ಕೆ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಶಕ್ತಿವಿದೆ. ಯಾರು ಮತ ಚಲಾಯಿಸದೆ ಅತ್ಯಮೂಲ್ಯವಾದ ಹಕ್ಕಿನಿಂದ ವಂಚಿವರಾಗಬಾರದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಮಾತನಾಡಿ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತ ಚಲಾಯಿಸಬೇಕು.

ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು. ಯುವ ಮತದಾರರ ನೋಂದಾಯಿಸಲು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ ಎಂದು ಹೇಳಿದರು.

ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು.
ಮತದಾನವನ್ನು ಹಬ್ಬದಂತೆ ಯುವ ಜನತೆ ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.

ಶಾಲಾ ಮಕ್ಕಳು ತಮ್ಮ ಪೋಷಕರು ಹಾಗೂ ಸುತ್ತಮುತ್ತಲಿನ ಜನರಲ್ಲಿ ಮತ ಚಲಾಯಿಸುವ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ, ಎಲ್ಲಾ ಪ್ರಜೆಗಳಿಗೆ ಮತದಾನ ಹಕ್ಕು ಮಾತ್ರವಲ್ಲ, ಅದು ಜವಾಬ್ದಾರಿ. ಜಿಲ್ಲೆಯಲ್ಲಿನ 18 ವರ್ಷ ತುಂಬಿದ ಎಲ್ಲಾ ಪ್ರಜೆಗಳು ಕೂಡ ಮತದಾರರಾಗಿ ನೊಂದಣಿ ಮಾಡಿಸಿಕೊಂಡು ಮತದಾನ ಮಾಡಬೇಕು.

ಪ್ರತಿಯೊಂದು ಬಾರಿ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯ ನೀಡಲಾಗಿದೆ ಎಂದು ಹೇಳಿದರು.

ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ

ಜಿಲ್ಲೆಯಲ್ಲಿ 9 ಲಕ್ಚದ 5 ಸಾವಿರ ರಷ್ಟು ಮತದಾರರು ಇದ್ದು, ಯುವ ಮತದಾರರು ಹೆಚ್ಚಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನದ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಮತದಾರರಲ್ಲಿ ಪ್ರೇರಿಪಿಸಲಾಗುತ್ತಿದೆ. ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಭೋದಿಸಿದ್ದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಯಲ ಆಂಜನಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಕಾರಿಗಳು, ವಿವಿಧ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!