Doddaballapura: Anganwadi worker's accident case

Doddaballapura: ಪೊಲೀಸರಿಗೆ ಸವಾಲಾದ ಅಂಗನವಾಡಿ ಕಾರ್ಯಕರ್ತೆ ಅಪಘಾತ ಪ್ರಕರಣ

ದೊಡ್ಡಬಳ್ಳಾಪುರ, (Doddaballapura): ಅಪರಿಚಿತ ವಾಹನ ಮೇಲರಿದ ಪರಿಣಾಮ (Accident) ಅಂಗನವಾಡಿ ಕಾರ್ಯಕರ್ತೆ ಸಾವನಪ್ಪಿರುವ ಘಟನೆ ತಾಲೂಕಿನ ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಸಂಭವಿಸಿದೆ‌

ಮೃತ ಅಂಗನವಾಡಿ ಕಾರ್ಯಕರ್ತೆಯನ್ನು ಶಾಮಲಾ ದೇವಿ (30 ವರ್ಷ) ಎಂದು ಗುರುತಿಸಲಾಗಿದೆ.

ಹೊಸಹಳ್ಳಿ ಸಮೀಪದ ಉಜ್ಜನಿ ಕಾಲೋನಿಯ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಸುತ್ತಿದ್ದ ಶ್ಯಾಮಲ ದೇವಿ ಅವರು ಕಂಟನಕುಂಟೆಯಲ್ಲಿ ವಾಸವಿದ್ದರು.

ಇಂದು ಶನಿವಾರವಾದ ಕಾರಣ ಅಂಗನವಾಡಿಯಲ್ಲಿ ಕರ್ತವ್ಯ ಮುಗಿಸಿ, ಕಂಟನಕುಂಟೆಯ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ, ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ನೆಲಕ್ಕೆ ಬಿದ್ದ ಶಾಮಲ ಅವರ ಮೇಲೆ ಹರಿದು ಪರಾರಿಯಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಶಾಮಲ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರಿಗೆ ಸವಾಲು

ಘಟನೆ ಕುರಿತು ತನಿಖೆ ಆರಂಭಿಸಿರುವ ಪೊಲೀಸರಿಗೆ ಪರಾರಿಯಾಗಿರುವ ವಾಹನವನ್ನು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಅಪಘಾತ ಸಂಭವಿಸಿದ ವ್ಯಾಪ್ತಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಇಲ್ಲದೆ ಇರುವುದು, ಪ್ರತ್ಯಕ್ಷದರ್ಶಿಗಳು ಇಲ್ಲದೆ ಇರುವ ಕಾರಣ ವಾಹನ ಪತ್ತೆ ಮಾಡುವುದು ಸಮಸ್ಯೆಯಾಗಿದೆ ಎನ್ನಲಾಗಿದೆ.

ಈ ಕುರಿತು ತೀವ್ರ ತನಿಖೆ ಕೈಗೊಂಡಿರುವ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ನೇತೃತ್ವದ ಪೊಲೀಸರು ಪರಾರಿಯಾಗಿರುವ ವಾಹನದ ಪತ್ತೆಗೆ ಬಲೆ ಬೀಸಿದ್ದಾರೆ.

ಮೂಲಗಳ ಅನ್ವಯ ಟ್ರಕ್ ಅಪಘಾತ ಮಾಡಿದೆ ಎಂದು ಪೊಲೀಸರು ಶಂಕಿಸಿದ್ದಾರೆಂದು ತಿಳಿದುಬಂದಿದೆ.

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!