Have the terms and conditions of the Reserve Bank been explained to the borrowers in their native language?

ಮೈಕ್ರೋ ಫೈನಾನ್ಸ್ ಹಾವಳಿ: CM ಖಡಕ್ ಪ್ರಶ್ನೆಗೆ ಕಂಪನಿ ಅಧಿಕಾರಿಗಳು ಸುಸ್ತು

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ (CM) ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು.

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು…

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ: ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಪ್ರಶ್ನಿಸಿದರು‌

ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?

ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?

ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು.

ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.

ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿk ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ?: ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದ ಸಿಎಂ.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ: ಕಂಪನಿಗಳಿಗೆ ಕೇಳಿದರು.

ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರಿಂದ ಬಂತು.

ಸಚಿವರ ತಕರಾರು

ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿಕೆ ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ಗುಡುಗಿದರು.

ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

ಮುಖ್ಯಾಂಶಗಳು:

• ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ.

• ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ.

• ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.

• ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು.

• ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ.

• Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

• ಸಾಲ ವಸೂಲಾತಿ ಕುರಿತಾಗಿ ಆರ್‌ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ.

• ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್‌ ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!