School timings starting tomorrow have changed!

ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಸುಗ್ರಿವಾಜ್ಞೆ..!

ಬೆಂಗಳೂರು: ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ( Ordinance) ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದರು.

ಬೆಂಗಳೂರು ಅರಮನೆ ಮೈದಾನದ ಒಟ್ಟು 472 ಎಕರೆ 16 ಗುಂಟೆ ಜಾಗಕ್ಕೆ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಕಂಡಿಕೆ 8 ಮತ್ತು 9ರಲ್ಲಿ ರೂ.11.00 ಕೋಟಿಗಳನ್ನು ನಿಗದಿಗೊಳಿಸಲಾಗಿತ್ತು.13-3-1997 ರಂದು ಸದರಿ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯವು ಎತ್ತಿಹಿಡಿದಿರುತ್ತದೆ.

27 ವರ್ಷಗಳ ನಂತರ ಈ ವ್ಯಾಜ್ಯ ಮುಂಚೂಣಿಗೆ ಬಂದಿದ್ದು, 1996 ರಲ್ಲಿ 472 ಎಕರೆ 16 ಗುಂಟೆ ಜಾಗಕ್ಕೆ ರೂ.11.00 ಕೋಟಿಗಳನ್ನು (ಪ್ರತಿ ಎಕರೆಗೆ 2.30ಲಕ್ಷ ರೂ. ಅಂದಾಜು ಮೊತ್ತ)ನಿಗದಿಗೊಳಿಸಲಾಗಿತ್ತು.

1996ರ ಈ ಕಾಯ್ದೆಗೆ ಮಾನ್ಯ ಸರ್ವೋಚ್ಛ ನ್ಯಾಯಾಲಯದಿಂದ ಯಾವುದೇ ತಡೆಯಾಜ್ಞೆ ಇಲ್ಲ. ಆದರೆ, ದಿನಾಂಕ: 10.12.2024ರ ಮಾನ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಮತ್ತುಇತರೆ ಪ್ರಕರಣಗಳಲ್ಲಿ ಕರ್ನಾಟಕ ಸ್ಟಾಂಪ್ ಕಾಯ್ದೆಯ ಸೆಕ್ಷನ್ 45ಬಿ ಗೆ ಅನುಗುಣವಾಗಿ ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಂತಹ ಪ್ರದೇಶಗಳಿಗೆ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಬೆಂಗಳೂರು ಅರಮನೆ ಜಾಗವನ್ನು ಮೌಲ್ಯೀಕರಿಸಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ನೀಡುವಂತೆ ನಿರ್ದೇಶಿಸಿದೆ.

ರಾಜ್ಯದಲ್ಲಿ ಕೇವಲ 2 ಕಿ.ಮೀ ರಸ್ತೆ ಅಭಿವೃದ್ಧಿಗೆ ರೂ.3014.00 ಕೋಟಿ ಅಂದರೆ ಪ್ರತಿ ಎಕರೆಗೆ ರೂ.200.00 ಕೋಟಿ ನೀಡಿದರೆ ಆರ್ಥಿಕ ಪರಿಸ್ಥಿತಿ ಗಂಡಾಂತರ ಉಂಟಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗದೇ ಪ್ರಗತಿ ವಿರೋಧವಾದ ಕ್ರಮವಾಗುತ್ತದೆ.

1996ರ ಕಾಯ್ದೆಗೆ ಪೂರಕವಾದ ಈ ಸುಗ್ರಿವಾಜ್ಞೆಯನ್ನು ರಾಜ್ಯಪಾಲರಿಗೆ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವರು ತಿಳಿಸಿದರು.

ಮಾರುಕಟ್ಟೆ ಮೊತ್ತ ಒಂದು ಕಡೆಯಾದರೆ, ಸರ್ಕಾರ ಈಗಾಗಲೇ ಪಡೆದಿರುವುದಕ್ಕೆ ನಿಗದಿ ಮಾಡಿರುವ ಮೊತ್ತ ಬೇರೆಯಿದೆ. ಅಭಿವೃದ್ಧಿ ಕಾಮಗಾರಿಗಳು ಜಾರಿಯಲ್ಲಿರುವಾಗ ಈ ವ್ಯಾಜ್ಯದಿಂದ ಕರ್ನಾಟಕ ಸರ್ಕಾರ ಸುಮಾರು 3014 ಕೋಟಿ ರೂಪಾಯಿ ಗಳನ್ನು 15.36 ಗಂಟೆ ಭೂಮಿಗೆ ಕೊಡಬೇಕಾಗಿ ಬರುತ್ತದೆ. ಇದು ಅತ್ಯಂತ ಅವ್ಯವಹಾರಿಕ. ಇದನ್ನು ಜಾರಿ ಮಾಡಿದರೆ ಅಭಿವೃದ್ಧಿಗೆ ಗಂಡಾಂತರ ಬರಲಿದೆ.

3014 ಕೋಟಿ ಕಡಿಮೆ ಮೊತ್ತವಲ್ಲ. ಈ ಮೊತ್ತವನ್ನು ಕೊಡಲಾಗುವುದಿಲ್ಲವಾದ್ದರಿಂದ ಅರಮನೆಯ ಭೂಮಿಯನ್ನು ತೆಗೆದುಕೊಳ್ಳುವುದು ಅಥವಾ ಬಿಡುವುದರ ಬಗ್ಗೆ ಅಧ್ಯಾದೇಶದ ಮೂಲಕ ನಿರ್ಧಾರ ಮಾಡಲು ಅಧ್ಯಾದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಬೊಕ್ಕಸವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಹಿಂದೆ ಮಾಡಿರುವ ಕಾನೂನು ಅನ್ವಯ ಅದನ್ನು ಮುಂದುವರೆಸುವ ದೃಷ್ಟಿಯಿಂದ ಅಧ್ಯಾದೇಶ ಹೊರಡಿಸಿದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ಕಾರ್ಯಕಲಾಪ ನಿರ್ಣಯಗಳ ಪ್ರಕಾರ ಯಾವುದಾದರೂ ನಿರ್ಣಯ ಅಥವಾ ಪ್ರಸ್ತಾವನೆಗಳನ್ನು .ನಮ್ಮ ನಿರ್ಧಾರ ರಾಜ್ಯ ಸರ್ಕಾರದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ.

ಸುಗ್ರಿವಾಜ್ಞೆ ಜಾರಿ

ಸುಗ್ರಿವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಮೊದಲು ಕೈಗೊಂಡ ಯಾವುದೇ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶ: ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಈ ಸುಗ್ರಿವಾಜ್ಞೆ ಅವಕಾಶ ಕಲ್ಪಿಸುತ್ತದೆ ಎಂದು ಸಚಿವರು ವಿವರಿಸಿದರು.

15 ಎಕರೆಗೆ 3000 ಕೋಟಿಗಳನ್ನು ಕೊಡಲು ಸಾಧ್ಯವಿಲ್ಲ. 11 ಎಕರೆ ಜಾಗವನ್ನು 1996ರಲ್ಲಿಯೇ ಕೋಟಿಗಳನ್ನು ಕೊಟ್ಟು ಪಡೆಯಲಾಗಿದೆ. ಈ ಸಮಸ್ಯೆಗಳು ವ್ಯಾಜ್ಯಗಳು ಪರಿಹಾರವಾಗದ ಕಾರಣ ಉಂಟಾಗಿದೆ. ಟಿ.ಡಿ.ಆರ್ ಕೊಡದಿರಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

2011ರಲ್ಲಿ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ ಆಸ್ತಿಯ 15 ಎಕರೆ 39 ಗುಂಟೆ ಜಾಗವನ್ನು ಬಳಸಿಕೊಂಡು ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಯನ್ನು ಅಗಲೀಕರಣಗೊಳಿಸುವ ಸಂಬಂಧ ಮಧ್ಯಂತರ ಅರ್ಜಿ ದಾಖಲಿಸಿದಾಗ ಸದರಿ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯವು 2014 ರಲ್ಲಿ ಟಿ.ಡಿ.ಆರ್ ನಿಯಮಗಳ ಪ್ರಕಾರ ಟಿ.ಡಿ.ಆರ್ ಷರತ್ತಿಗೊಳಪಡಿಸಿ, ಜಾಗವನ್ನು ಬಳಸಿಕೊಳ್ಳಲು ಅನುಮತಿ ನೀಡಿರುತ್ತದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿಗದಿಪಡಿಸಿರುವ ಭೂಸ್ವಾಧಿನ ಮೊತ್ತವು ರಾಜ್ಯದ ಮೇಲೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದ್ದು, ಆರ್ಥಿಕ ಶಿಸ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆರ್ಥಿಕ ಶಿಸ್ತಿನ ತತ್ವಗಳನ್ನು ಅನುಸರಿಸದೇ ಅಂತಹ ಮೂಲಸೌಕರ್ಯ ಯೋಜನೆಗಳ ಮೇಲೆ ನೀತಿ-ನಿರ್ಣಯಗಳನ್ನು ತೆಗೆದುಕೊಳ್ಳುವುದು ಕಷ್ಟಸಾಧ್ಯ.

ನೀತಿ-ನಿಯಮಕ ವಿಷಯಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಿರ್ಧರಿಸುವಾಗ ರಾಜ್ಯದ ಆರ್ಥಿಕ ನೀತಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಕಾರ್ಯಸಾಧುವಲ್ಲದ ಯಾವುದೇ ಯೋಜನೆಯು ಸಾರ್ವಜನಿಕ ಹಿತಾಸಕ್ತಿಗೆ ಮತ್ತು ಸಾರ್ವಜನಿಕ ನೀತಿಗೆ ವಿರುದ್ಧವಾಗಿರುತ್ತದೆ.

ಸರ್ವೋಚ್ಛ ನ್ಯಾಯಾಲಯದಲ್ಲಿ ಸಿವಿಲ್ ಅಪಿಲ್ನಲ್ಲಿ ರಾಜ್ಯದ ಪರವಾಗಿ ಆದೇಶವಾದಲ್ಲಿ ಮಾರಾಟ ಅಥವಾ ಇನ್ನಾವುದೇ ರೀತಿಯಲ್ಲಿ ಬಳಕೆಯಾದ ಟಿ.ಡಿ.ಆರ್ ಗಳನ್ನು ಹಿಂಪಡೆಯಲಾಗಲೀ ಅಥವಾ ಮರುಪಡೆಯಲಾಗಲೀ ಅಸಾಧ್ಯವಾಗುವುದರಿಂದ ಸುಗ್ರಿವಾಜ್ಞೆಯ ಮೂಲಕ ಅಧಿಕಾರ ಪಡೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಕರ್ನಾಟಕ ಸರ್ಕಾರ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ

“ಅಧ್ಯಾದೇಶಗಳು ಒಳಗೊಂಡಂತೆ ಶಾಸನಗಳ ಪ್ರಸ್ತಾವಗಳು, ಆದರೆ ಪೂರ್ಣವಾಗಿ ಔಪಚಾರಿಕ ಸ್ವರೂಪದ ಅಥವಾ ಅತೀ ಕಡಿಮೆ ಪ್ರಾಮುಖ್ಯತೆ ಹೊಂದಿರುವ ವಿಷಯಗಳೆಂದು ಮುಖ್ಯಮಂತ್ರಿಯವರು ಅಭಿಪ್ರಾಯ ಪಡುವ ಪ್ರಸ್ತಾವಗಳನ್ನು ಹೊರತುಪಡಿಸಿ” ಎಂಬ ನಿಯಮವನ್ನು ತಿದ್ದುಪಡಿ ಮಾಡಿ ತುರ್ತು ಸಂದರ್ಭಗಳಲ್ಲಿ ರಾಜ್ಯ ಸಚಿವ ಸಂಪುಟದ ಪೂರ್ವಾನುಮೋದನೆ ಇಲ್ಲದೇ ರಾಜ್ಯ ವಿಧಾನ ಮಂಡಲದಲ್ಲಿ ವಿಧೇಯಕಗಳನ್ನು ಮಂಡಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡುತ್ತದೆ. ಇಂತಹ ಪ್ರಸ್ತಾವನೆಗಳಿಗೆ ಘಟನೋತ್ತರ ಮಂಜೂರಾತಿ ಪಡೆಯಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡುತ್ತದೆ.

ಅಭಿವೃದ್ಧಿ ಕಾಮಗಾರಿಗಳಿಗೆ ದೊಡ್ಡ ಮೊತ್ತದ ಹಣ ಕೊಟ್ಟು ರಾಜ್ಯದ ಬೊಕ್ಕಸಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ನ್ಯಾಯಯುತವಾದ ಅಭಿವೃದ್ಧಿ ಕೆಲಸಗಳಾಗಲು ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಮುಖ್ಯಮಂತ್ರಿಗಳು ನಿರ್ಧಾರ ಮಾಡಿ ಬಿಲ್ ಅಥವಾ ಅಧ್ಯಾದೇಶ ಕಳಿಸುವ ಸಂದರ್ಭ ಬಂದಾಗ ಸಚಿವ ಸಚಿವ ಸಂಪುಟ ದಲ್ಲಿಟ್ಟು ನಂತರವೇ ಹೋಗಬೇಕಿತ್ತು.

ರಾಜ್ಯಪಾಲರು ಮುಖ್ಯಮಂತ್ರಿಗಳ ಹಂತದಲ್ಲಿಯೇ ಆಗಬಹುದು ಎಂದಾದರೆ Transaction of Business Rules ನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಸಲಹೆ ಕೊಟ್ಟ ಮೇರೆಗೆ ವ್ಯವಹಾರ ಸುಗಮ ನಿರ್ವಹಣೆ -Transaction of Business Rules ನ್ನು ತಿದ್ದುಪಡಿ ಮಾಡಿ ಅದರ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್

ಮೈಕ್ರೋ ಫೈನಾನ್ಸ್ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಮುಖ್ಯಮಂತ್ರಿಗಳು ನಾಳೆಯೇ ಈ ಕುರಿತು ತುರ್ತು ಸಭೆ ಕರೆದಿದ್ದಾರೆ. ವಿಶೇಷ ಕಾನೂನು ರಚಿಸಲು ಹಾಗೂ ಶೋಷಣೆಯ ಪ್ರಕರಣಗಳನ್ನು ಮಟ್ಟ ಹಾಕಲು ಏನು ಮಾಡಬೇಕೆಂದು ನಿರ್ಧರಿಸಬೇಕಿದೆ.

ಮೈಕ್ರೊ ಫೈನಾನ್ಸ್ ಏಜೆನ್ಸಿಗಳಿಂದಾಗುತ್ತಿರುವ ಶೋಷಣೆಯ ಬಗ್ಗೆ ಕಾನೂನು ರಚಿಸಲು ಸಾಧ್ಯವಾಗಿಲ್ಲ.

ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ ರೆಗ್ಯೂಲೇಶನ್ ಆಫ್ ಮನಿ ಲೆಂಡಿಂಗ್ ಬಿಲ್ ರೂಪಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ನಾಳೆ ಇದನ್ನು ಮಂಡನೆ ಮಾಡಿ ಹಲವಾರು ವಿಷಯಗಳ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು ಎಂದರು.

ರಾಜ್ಯಪಾಲರು ಹಲವಾರು ಬಿಲ್ಲುಗಳನ್ನು ಹಿಂತಿರುಗಿಸಿರುವ ಬಗ್ಗೆ ಸ್ಪಷ್ಟೀಕರಣ ನೀಡಲಾಗುವುದು ಎಂದು ಸಚಿವರು ಇದೆ ಸಂದರ್ಭದಲ್ಲಿ ತಿಳಿಸಿದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!