Everyone should read the Constitution; Minister Santhosh S. Lad

ಬಡವರ ಏಳಿಗೆಗಾಗಿ ಕರ್ನಾಟಕ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ; ಸಚಿವ ಸಂತೋಷ ಎಸ್.ಲಾಡ್

ಧಾರವಾಡ: ಭಾರತದ ಸಂವಿಧಾನವನ್ನು (Constitution) ಪ್ರತಿಯೊಬ್ಬರು ಓದಬೇಕು. ಸಂವಿಧಾನ ಪೀಠಿಕೆಯಲ್ಲಿ ಹೇಳಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ದೇಶದ ಅಭಿವೃದ್ಧಿಗೆ ವಿಶೇಷವಾಗಿ ಯುವ ಸಮೂಹ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೆರಿಸಿ ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು.

ಭಾರತ ದೇಶವು ಎಲ್ಲ ಧರ್ಮದವರಿಗೂ ಸೇರಿದ್ದು, ಯಾವುದೇ ಪಕ್ಷ, ಧರ್ಮಗಳಿಗೆ ಮೀಸಲಾಗಿಲ್ಲ. ಡಾ.ಬಿ.ಆರ್.ಅಂಬೇಡ್ಕರ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರ ಸಮಗ್ರ ಅಭಿವೃದ್ಧಿಗೆ ಮತ್ತು ಸಮಾಜದ ಹಿತಕ್ಕೆ ಪೂರಕವಾದ ಅಂಶಗಳನ್ನು ನೀಡಿದೆ.

ಪ್ರತಿಯೊಬ್ಬರು ಪ್ರತಿದಿನ ಸಂವಿಧಾನ ಪೀಠಿಕೆಯನ್ನು ಓದುಬೇಕು. ಪಿಠೀಕೆಯಲ್ಲಿ ಇರುವ ಮೌಲ್ಯಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಪ್ರಗತಿ

ಕರ್ನಾಟಕ ಸರ್ಕಾರ ಬಡವರ ಏಳಿಗೆಗಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 3.22 ಲಕ್ಷ ಮಹಿಳೆಯರು ಪ್ರತಿ ದಿನ ಉಚಿತವಾಗಿ ಪ್ರಯಾಣ ಮಾಡಿದ್ದು, ರೂ. 67.33 ಲಕ್ಷ ಮೊತ್ತದ ಸೇವೆಯನ್ನು ಪಡೆದಿದ್ದಾರೆ. ಇಲ್ಲಿಯವರೆಗೆ ರೂ. 383.75 ಕೋಟಿ ಶಕ್ತಿ ಯೋಜನೆಗೆ ವೆಚ್ಚವಾಗಿರುತ್ತದೆ.

ಗೃಹಲಕ್ಷ್ಮೀ ಯೋಜನೆಯಲ್ಲಿ 3,87,201 ಮಹಿಳೆಯರಿಗೆ ರೂ.1,065 ಕೋಟಿ ಗಳನ್ನು ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಲ್ಲಿ 4,94,943 ಬಳಕೆದಾರರಿಗೆ ರೂ.359.57 ಕೋಟಿ ಗಳ ನೆರವನ್ನು ನೀಡಲಾಗಿದೆ.

ಅನ್ನಭಾಗ್ಯ ಯೋಜನೆಯಲ್ಲಿ 3,50,324 ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ಹಾಗೂ ತಲಾ ರೂ.170 ಗಳನ್ನು ನೇರವಾಗಿ ಡಿ.ಬಿ.ಟಿ ಮೂಲಕ ನೀಡಲಾಗಿದೆ. ಇಲ್ಲಿಯವರೆಗೆ ರೂ. 276.64 ಕೋಟಿಗಳ ನೆರವು ನೀಡಲಾಗಿದೆ. ಮತ್ತು ಯುವ ನಿಧಿ ಯೋಜನೆಯಲ್ಲಿ 4,388 ಫಲಾನುಭವಿಗಳಿಗೆ ರೂ.5.77 ಕೋಟಿ ಗಳ ನೆರವನ್ನು ನೀಡಲಾಗಿದೆ ಎಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.

ವಿವಿಧ ಯೋಜನೆಗಳಡಿ ಅಭಿವೃದ್ಧಿ

ಗ್ರಾಮೀಣ ಕುಡಿಯುವ ನೀರಿನ ಯೋಜನೆಯಲ್ಲಿ 2,01,116 ಮನೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಸ್ವಚ್ಛ ಭಾರತ ಯೋಜನೆಯಡಿ 2024-25ನೇ ಸಾಲಿನಲ್ಲಿ 4,548 ವೈಯುಕ್ತಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಜಿಲ್ಲೆಯಲ್ಲಿರುವ 1,33,684 ಅಂಗನವಾಡಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.

1,86,760 ಶಾಲಾ ಮಕ್ಕಳಿಗೆ ಪ್ರತಿ ದಿನ ಬಿಸಿಯೂಟ ಹಾಗು ಬಿಸಿ ಹಾಲು ನೀಡಲಾಗುತ್ತಿದೆ. ಜನನಿ ಸುರಕ್ಷಾ ಯೋಜನೆಯಡಿ 16,258 ಗರ್ಭಿಣಿ ಸ್ತ್ರೀಯರಿಗೆ ಹೆರಿಗೆ ಭತ್ಯೆ ವಿತರಿಸಲಾಗಿದೆ ಎಂದು ಸಚಿವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳ ಸೌಲಭ್ಯವನ್ನು 8,903 ವಿದ್ಯಾರ್ಥಿಗಳು ಪಡೆದಿದ್ದು, ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದೆ. ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿ ರೂ.30.87 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. 8,520 ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳ ಸೌಲಭ್ಯವನ್ನು ಪಡೆದಿದ್ದು, ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದೆ ಎಂದರು.

ಜಿಲ್ಲೆಯಲ್ಲಿ ಈ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದು, ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಒಟ್ಟು 4.78 ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. 69,573 ರೈತರಿಗೆ ರೂ.48.45 ಕೋಟಿಗಳ ಬೆಳೆ ಪರಿಹಾರವನ್ನು ವಿತರಿಸಲಾಗಿದೆ.

ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಈವರೆಗೂ ರೂ.914.75 ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ನರೇಗಾ ಯೋಜನೆಯಲ್ಲಿ 102 ಗ್ರಾಮ ಪಂಚಾಯತಿಗಳಲ್ಲಿ ಕೂಸಿನ ಮನೆಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಇತಿಹಾಸದ ಸ್ಮರಣೆ

ದೇಶದ ಇತಿಹಾಸದಲ್ಲಿ ಆಗಸ್ಟ್ 15 ಮತ್ತು ಜನವರಿ 26 ಅತ್ಯಂತ ಪ್ರಮುಖ ದಿನಗಳಾಗಿವೆ. ಇವೆರಡೂ ದಿನಗಳನ್ನು ನಾವೆಲ್ಲರೂ ರಾಷ್ಟ್ರೀಯ ಹಬ್ಬಗಳಾಗಿ ಸಡಗರದಿಂದ ಆಚರಿಸುತ್ತೇವೆ. ಆದರಲ್ಲೂ 1950ರ ಜನವರಿ 26 ಮೂರು ಮುಖ್ಯ ಘಟನೆಗೆ ಸಾಕ್ಷಿಯಾಗಿದೆ. ಮುಖ್ಯವಾಗಿ, ಭಾರತ ದೇಶವನ್ನು ಗಣರಾಜ್ಯವೆಂದು ಘೋಷಿಸಲಾಯಿತು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಜಾರಿಗೊಳಿಸಲಾಯಿತು.

ಸಾರಾನಾಥದಲ್ಲಿರುವ ಅಶೋಕನ ಕಾಲದ ಸಿಂಹ ಶಿಖರ ಮತ್ತು ಸತ್ಯಮೇವ ಜಯತೆ ಅನ್ನು ರಾಷ್ಟ್ರ ಲಾಂಛನವನ್ನಾಗಿ ಮಾಡಲಾಯಿತು.

ಗಣರಾಜ್ಯೋತ್ಸವ ಭಾರತದ ಒಂದು ರಾಷ್ಟ್ರೀಯ ಹಬ್ಬ. ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ದಿನವಾಗಿದೆ. ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ಪಿತಾಮಹ ಎನ್ನುತ್ತಾರೆ.

ನಮ್ಮ ಸ್ವಾತಂತ್ರ್ಯ ಹೋರಾಟಗಾರರು, ನಮ್ಮ ನಾಯಕರು ಮತ್ತು ನಮ್ಮ ಸಂವಿಧಾನದ ರಚನೆಗೆ ಕೊಡುಗೆ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನು ನೆನಪಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳೋಣ ಎಂದು ಸಚಿವರು ತಿಳಿಸಿದರು.

ನಾವು ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳಿರುವಂತೆ ಮೂಲಭೂತ ಕರ್ತವ್ಯಗಳು ಸಹ ಇರುತ್ತವೆ. ಭಾರತ ದೇಶವನ್ನು ಇನ್ನಷ್ಟು ಅಭಿವೃದ್ಧಿಯತ್ತ ಸಾಗಿಸೋಣ.

ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದು ಮಾತ್ರವಲ್ಲದೆ ಸಾಮಾಜಿಕ ಸಾಮರಸ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ಬೆಳೆಯುತ್ತಿರುವ ಭಾರತಕ್ಕಾಗಿ ಕೆಲಸ ಮಾಡಲು ನಾವು ಇಂದು ಪ್ರತಿಜ್ಞೆ ಮಾಡೋಣ ಎಂದು ಸಚಿವ ಸಂತೋಷ ಲಾಡ್ ನುಡಿದರು.

ಒಂದು ದೇಶವಾಗಿ ನಾವು ಸಾಕಷ್ಟು ಆರ್ಥಿಕ ಸುಧಾರಣೆಗಳು ಮತ್ತು ಯಶಸ್ಸನ್ನು ಕಂಡಿದ್ದರೂ, ಬಡತನ ಮತ್ತು ನಿರುದ್ಯೋಗದಂತಹ ಸವಾಲುಗಳು ಈಗಲೂ ನಮ್ಮ ಮುಂದಿವೆ. ಈ ಸವಾಲುಗಳನ್ನು ಎದುರಿಸಿ ಹೊರಬರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಚಿವರು ತಿಳಿಸಿದರು.

ಆಕರ್ಷಕ ಪಥ ಸಂಚಲನ

ಜಿಲ್ಲಾಡಳಿತದಿಂದ ಇಂದು ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ, ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಶಿಸ್ತುಬದ್ದವಾಗಿ ಪಥಸಂಚಲನ ಮಾಡುವದರೊಂದಿಗೆ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿ, ಕಾರ್ಯಕ್ರಮದಲ್ಲಿ ನೆರೆದ ಸಾರ್ವಜನಿಕರ ಗಮನ ಸೆಳೆದರು.

ಪಥ ಸಂಚಲನದ ಸ್ಪರ್ಧೆಯಲ್ಲಿ ಎನ್.ಎ.ಮುತ್ತಣ್ಣ ಪೊಲೀಸ್ ಮಕ್ಕಳ ವಸತಿ ಶಾಲೆ-ಪ್ರಥಮ, ಸೇಂಟ್ ಜೊಸೆಪ್ಸ್ ಶಾಲೆ-ದ್ವಿತೀಯ ಹಾಗೂ ಕೆ.ಎನ್.ಕೆ. ಹೈಸ್ಕೂಲ್ ಶಾಲೆಗಳು ತೃತೀಯ ಸ್ಥಾನ ಪಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವರಿಂದ ಹಾಗೂ ಜಿಲ್ಲಾಧಿಕಾರಿಗಳಿಂದ ವಿಜೇತರು ಪ್ರಮಾಣ ಪತ್ರ, ಬಹುಮಾನ ಮತ್ತು ಪಾರಿತೋಷಕ ಪಡೆದುಕೊಂಡರು.

ಸಂವಿಧಾನ ಪೀಠಿಕೆಯ ಸಾಮೂಹಿಕ ವಾಚನ

ಇಂದಿನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಶ್ರೇಷ್ಟತೆಯನ್ನು ಸಾರುವ ಸಂವಿಧಾನ ಪೀಠಿಕೆಯ ಸಾಮೂಹಿಕ ವಾಚನ ಜರುಗಿತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಗಣರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಗಳಿಗೆ, ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

ಜಿಲ್ಲೆಯ ಸಾಧಕರಿಗೆ ಸನ್ಮಾನ

ಜಿಲ್ಲಾಡಳಿತದಿಂದ ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವದ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದಿವಗಂತ ರೋಹಿತ ಕುಂಬಾರ ಇವರ ಅಂಗಾಂಗ ದಾನ ಮಾಡಿದ ಕುಟುಂಬಕ್ಕೆ, ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿಶೇಷ ಸೇವೆ ಸಲ್ಲಿಸಿದ್ದಾಕ್ಕಾಗಿ ಶ್ರೀ ಸಿದ್ಧಾರೋಢ ಟ್ರಸ್ಟ್‍ಗೆ ಹಾಗೂ ಇಸ್ಕಾನ ಸಂಸ್ಥೆಗಳಿಗೆ ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಸನ್ಮಾನಿಸಿ, ಪ್ರಮಾಣ ಪತ್ರದೊಂದಿಗೆ ಗೌರವಿಸಿದರು.

ಭಾಷಣ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣೆ

ಗಣರಾಜ್ಯೋತ್ಸವದ ನಿಮಿತ್ತ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಭಾಷಣ ಸ್ಪರ್ಧೆಯ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಕೆ.ಜೆ.ಎಸ್.ಗರಗ ಶಾಲೆಯ ಸಂಜನಾ ಕರಲಿಂಗನವರ, ಬೆಂಗೇರಿ ಸೇಂಟ್ ಮೈಕಲ್ ಶಾಲೆಯ ಧ್ವನಿ ಪವಾರ, ಭಾರದ್ವಾಡದ ಸ.ಉ.ಹಿ.ಪ್ರಾ ಶಾಲೆಯ ತಹಶೀನ ಅತ್ತಾರ, ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಜಿ.ಎಚ್.ಎಸ್.ಕುರವಿನಕೊಪ್ಪ ಶಾಲೆಯ ದೇವಕ್ಕ ರಾಮಜಿ, ದಾಸ್ತಿಕೊಪ್ಪದ ಆದರ್ಶ ವಿದ್ಯಾಲಯ ಶಾಲೆಯ ಸಂಜನಾ ಧನಿಗೊಂಡ, ಕಲಘಟಗಿಯ ಸ.ಉ.ಹಿ.ಪ್ರಾ ಶಾಲೆಯ ಸೈನಾಜ ಗುರನಳ್ಳಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.

ಶಾಲಾ ಮಕ್ಕಳಿಂದ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮ

ಶಾಲಾ ಶಿಕ್ಷಣ ಇಲಾಖೆಯ ವಿವಿಧ ಮಾಧ್ಯಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ನಿಮಿತ್ತ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಸಾಮೂಹಿಕ ನೃತ್ಯ, ದೇಶ ಭಕ್ತಿಗೀತೆ, ಗಾಯನ ಮತ್ತು ಛದ್ಮವೇಷದಾರಿಗಳಾಗಿ ವಿವಿಧ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.

ಬಾಸೆಲ್ ಮಿಶನ್ ಬಾಲಕರ ಪ್ರೌಢಶಾಲೆಯಿಂದ ನನ್ನ ನೆಲ ನನ್ನ ಜಲ ಎಂಬ ಸಮೂಹ ನೃತ್ಯ, ಧಾರವಾಡ ನಾರಾಯಣಪೂರದ ಯುವ ಡ್ಯಾನ್ಸ್ ಅಕಾಡೆಮಿಯ ರಮೇಶ ಪಾಟೀಲ ಮತ್ತು ತಂಡದಿಂದ ಭಾರತಾಂಬೆಯ ಮಕ್ಕಳು ನಾವು ನೀವು ಎಂಬ ದೇಶ ಭಕ್ತಿ ಗೀತೆಗೆ ಸಮೂಹ ನೃತ್ಯ, ಪ್ರಜೆಂಟೇಶನ ಪಿ.ಯು. ಕಾಲೇಜು ವಿದ್ಯಾರ್ಥಿಗಳಿಂದ ಕುಚ್ ಕರಿಯೇ ಹಾಡಿಗೆ ಸಮೂಹ ನೃತ್ಯ, ಹುಬ್ಬಳ್ಳಿಯ ಸ್ವರ್ಣ ಮಯೂರಿ ಸಾಂಸ್ಕøತಿಕ ಸಂಸ್ಥೆಯ ಚನ್ನಯ್ಯ ವಸ್ತ್ರದ ಮತ್ತು ತಂಡದವರಿಂದ ಒಂದೇ ಮಾತರಂ ಯಕ್ಷಗಾನ ಶೈಲಿಯ ಸಮೂಹ ನೃತ್ಯ ಹಾಗೂ ಧಾರವಾಡ ವಿದ್ಯಾರಣ್ಯ ಕಾಲೇಜು ವಿದ್ಯಾರ್ಥಿಗಳಿಂದ ಪುಲ್ವಾಮಾದಾಳಿಯ ದೇಶಭಕ್ತಿಗೀತೆಗೆ ಸಮೂಹ ನೃತ್ಯವನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವೀರಣ್ಣ ಮತ್ತಿಗಟ್ಟಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಉಪಪೊಲೀಸ್ ಆಯುಕ್ತರಾದ ರವೀಶ ಸಿ.ಆರ್., ಮತ್ತು ಮಾನಿಂಗ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ.ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾ ನಿರ್ದೇಶಕ ದೀಪಕ ಮಡಿವಾಳರ.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ ದೇಸಾಯಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ಧಾರವಾಡ ತಹಶೀಲ್ದಾರ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಗರದ 150 ಕ್ಕೂ ಹೆಚ್ಚು ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!