Doddaballapura: Proposition of Social Justice Aspiration of the Constitution AC N. Durgashree

Doddaballapura: ಸಾಮಾಜಿಕ ನ್ಯಾಯದ ಪ್ರತಿಪಾದನೆ ಸಂವಿಧಾನದ ಆಶಯ – ಎಸಿ ಎನ್.ದುರ್ಗಾಶ್ರೀ

ದೊಡ್ಡಬಳ್ಳಾಪುರ (Doddaballapura): ಅತಿ ದೊಡ್ಡ ಗಣತಂತ್ರ ದೇಶವಾಗಿರುವ ಭಾರತದ ಲಿಖಿತ ಸಂವಿಧಾನ ಹಲವು ತಿದ್ದುಪಡಿಗಳಾಗಿದ್ದರೂ ಸಹ ಇಂದು ಜಗತ್ತಿನಲ್ಲಿಯೇ ಶ್ರೇಷ್ಟ ಸಂವಿಧಾನವಾಗಿದೆ. ಸಾಮಾಜಿಕ, ಆರ್ಥಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನತೆಯನ್ನು ಸಾರುವ ನಮ್ಮ ಸಂವಿಧಾನದ ಆಶಯಗಳನ್ನು ನೆರವೇರಿಸಬೇಕಿರುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ ಹೇಳಿದರು.

ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಾಮಾಜಿಕ ನ್ಯಾಯ ಹಾಗೂ ಏಕತೆ, ಸಮಗ್ರತೆಗಳನ್ನು ಅಳವಡಿಸಿಕೊಂಡು ದೇಶವನ್ನು ಮುನ್ನಡೆಸುವ ನಿಟ್ಟಿನಲ್ಲಿ ರೂಪಿತವಾಗಿರುವ ಭಾರತದ ಸಂವಿಧಾನದಲ್ಲಿ ನೀಡಲಾಗಿರುವ ಮೀಸಲಾತಿಯಿಂದಾಗಿ ಇಂದು ದೇಶದಲ್ಲಿ ಅಮೂಲಾಗ್ರ ಬದಲಾವಣೆಗಳಾಗಿವೆ.

18 ವರ್ಷ ತುಂಬಿದವರಿಗೆ ಮತದಾನದ ಹಕ್ಕು, ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಅಕಾರ ವಿಕೇಂದ್ರೀಕರಣ, ಪ್ರಜಾತಂತ್ರ ವ್ಯವಸ್ಥೆಯ 4ನೇ ಅಂಗವಾದ ಮಾಧ್ಯಮಗಳೂ ಸೇರಿದಂತೆ ಎಲ್ಲರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ವಾಕ್ ಸ್ವಾತಂತ್ರ್ಯದ ಹಕ್ಕು ಸಂವಿಧಾನದ ಕೊಡುಗೆಯಾಗಿದೆ.

ಚುನಾವಣೆಗಳಲ್ಲಿನ ಮೀಸಲಾತಿಯಿಂದಾಗಿ ಹಿಂದುಳಿದ ಸಮುದಯದವರು ಅಕಾರಕ್ಕೆ ಬರಲು ನೆರವಾಗಿದೆ. ಜಾತ್ಯಾತೀತ ಪರಿಕಲ್ಪನೆ, ಸಮಾನತೆ ಹಾಗೂ ಮೂಲಭೂತ ಹಕ್ಕುಗಳನ್ನು ನೀಡಿರುವ ಸಂವಿಧಾನದ ಆಶಯಗಳಿಗೆ ದಕ್ಕೆ ಬಾರದಂತೆ ಸಮಾನತೆ, ಬ್ರಾತೃತ್ವದ ಮೂಲಕ ಬಾಳ್ವೆ ನಡೆಸುವ ಮೂಲಕ ಕುವೆಂಪು ಅವರ ವಿಶ್ವ ಮಾನವ ಸಂದೇಶವನ್ನು ಎತ್ತಿ ಹಿಡಿಯಬೇಕಿದೆ ಎಂದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಲಕ್ಷ್ಮೀದೇವಮ್ಮ, ಉಮಾಪತಿ, ಶ್ವೇತಾ.ಡಿ.ಎಂ (ಶಿಕ್ಷಣ ಕ್ಷೇತ್ರ), ವೆಂಕಟಲಕ್ಷ್ಮಮ್ಮ (ಕೃಷಿ ಕ್ಷೇತ್ರ), ಎಲ್.ಆನಂದ್‌ಕುಮಾರ್ (ಪತ್ರಿಕೋದ್ಯಮ), ನಿಥಿನ್ ಗೌಡ(ಕ್ರೀಡೆ), ಖುಷಿಪ್ರಿಯಾ ಮತ್ತು ಸುಧಾ.ಜಿ(ಕ್ರೀಡೆ -ಯೋಗ), ಕೃಷ್ಣ.ಕೆ.ಎಸ್.(ಜನಪದ), ತೇಜಸ್ವಿನಿ.ಕೆ.ಜಿ (ಭರತ ನಾಟ್ಯ) ಅವರನ್ನು ಸನ್ಮಾನಿಸಲಾಯಿತು.

ಲೆಪ್ಟಿನೆಂಟ್ ಪ್ರವೀಣ್ ನೇತೃತ್ವದಲ್ಲಿ ಎನ್.ಸಿ.ಸಿ, ಸೇವಾದಳ, ಪೊಲೀಸ್ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಹಾಗೂ ಬ್ಯಾಂಡ್ ಸೆಟ್‌ನ್ನೊಳಗೊಂಡ ಆಕರ್ಷಕ ಪಥಸಂಚಲನ ನಡೆಯಿತು.

ಉಪವಿಭಾಧಿಗಾಕಾರಿ ಎನ್.ದುರ್ಗಾಶ್ರೀ ಗೌರವ ವಂದನೆ ಸ್ವೀಕರಿಸಿದರು.

ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆದವು.
ಸಮಾರಂಭದಲ್ಲಿ ಶಾಸಕ ಧೀರಜ್ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಮಿತ್ರ.ಕೆ.ಆನಂದ್, ಉಪಾಧ್ಯಕ್ಷ ಎಂ.ಮಲ್ಲೇಶ್, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೌರಾಯುಕ್ತ ಕಾರ್ತಿಕ್ ಈಶ್ವರ್, ತಾಲೂಕು ಪಂಚಾಯಿತಿ ಕಾರ್‍ಯ ನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ಬಿಇಓ ಸೈಯದ್ ಅನೀಸ್ ಸೇರಿದಂತೆ ನಗರಸಭೆ ಸದಸ್ಯರು ಹಾಜರಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!