Hg

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಆರ್‌.ಅಶೋಕ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ.

ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ.

ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆಗಿದೆ. ನಿಗಮಗಳಿಗೆ 1,700 ಕೋಟಿ ರೂ. ನೀಡಬೇಕಿದ್ದು, 643 ಕೋಟಿ ರೂ. ನೀಡಲಾಗಿದೆ. ಅಂದರೆ ಎಲ್ಲ‌ ನಿಗಮಗಳಿಗೆ ಒಟ್ಟು 1,055 ಕೋಟಿ ರೂ. ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿವೆ ಎಂದರು.

ಪ್ರತಿ ಬಜೆಟ್‌ನಲ್ಲೂ ಅನುದಾನ ಶೇ.20 ರಷ್ಟು ಹೆಚ್ಚಾಗಬೇಕು. 2022-23 ರಲ್ಲಿ ಬಿಜೆಪಿ ಸರ್ಕಾರ ಕೃಷಿ ಇಲಾಖೆಗೆ 7,288 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ ಸರ್ಕಾರ 5,035 ಕೋಟಿ ರೂ. ನೀಡಿದೆ. ಅಂದರೆ 2,253 ಕೋಟಿ ರೂ. ಕೊರತೆಯಾಗಿದೆ.

ಇದು ರೈತರ ಬದುಕಿನ ಮೇಲೆ ಪರಿಣಾಮ ಬೀರಿದೆ. ತೋಟಗಾರಿಕಾ ಇಲಾಖೆಗೆ ಬಿಜೆಪಿ 1,374 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 1,207 ಕೋಟಿ ರೂ. ನೀಡಿದೆ. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಸಹಕಾರಿ ಎಲ್ಲ ಸೇರಿ ಬಿಜೆಪಿ 15,383 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 14,768 ಕೋಟಿ ರೂ. ನೀಡಿದೆ. ಇದರಿಂದ 614 ಕೋಟಿ ರೂ. ಕೊರತೆಯಾಗಿದೆ. ಕಂದಾಯ ಇಲಾಖೆಗೆ ಬಿಜೆಪಿ 1534 ಕೋಟಿ ರೂ.ನೀಡಿದರೆ, ಕಾಂಗ್ರೆಸ್‌ನಿಂದ 940 ಕೋಟಿ ರೂ. ನೀಡಲಾಗಿದೆ. 594 ಕೋಟಿ ರೂ. ಕೊರತೆಯಾಗಿದೆ.

ಲೋಕೋಪಯೋಗಿ ಇಲಾಖೆಗೆ ಬಿಜೆಪಿ 12,410 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ನಿಂದ 9,699 ಕೋಟಿ ರೂ. ನೀಡಲಾಗಿದೆ. 2,710 ಕೋಟಿ ರೂ. ಕೊರತೆಯಾಗಿದೆ. ನೀರಾವರಿಗೆ ಬಿಜೆಪಿ 19,610 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 16,834 ಕೋಟಿ ರೂ. ನೀಡಿದೆ. ಇದರಿಂದ 2755 ಕೋಟಿ ರೂ. ಕೊರತೆಯಾಗಿದೆ ಎಂದು ತಿಳಿಸಿದರು.

ರೌಡಿಗಳಿಗೆ ಉದ್ಯೋಗ‌ ಸಿಕ್ಕಿದೆ

ಮೈಕ್ರೋ ಫೈನಾನ್ಸ್‌ನ ಮೀಟರ್‌ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ‌ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಸಾಲ ನೀಡುತ್ತಿತ್ತು. ಈಗ ಕಾಂಗ್ರೆಸ್‌ ಸರ್ಕಾರ ನಿಗಮಗಳ ಮೂಲಕ ಸಾಲ ನೀಡದೆ, ಜನರು ಅನಿವಾರ್ಯವಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋಗಿದ್ದಾರೆ ಎಂದು ದೂರಿದರು.

ಮೈಕ್ರೋ ಫೈನಾನ್ಸ್‌ನಲ್ಲಿ 10 ಜನರ ಗುಂಪು ರಚಿಸಿ, ಪ್ರತಿಯೊಬ್ಬರಿಗೂ 50 ಸಾವಿರ ರೂ. ಸಾಲ ನೀಡುತ್ತಾರೆ. ಒಬ್ಬರಿಗೆ ಉಳಿದವರು ಶೂರಿಟಿ ಕೊಡಬೇಕಾಗುತ್ತದೆ. ಪ್ರತಿ ತಿಂಗಳು ಅಧಿಕ ಬಡ್ಡಿ ಕಟ್ಟಬೇಕಾಗುತ್ತದೆ. 50 ಸಾವಿರ ರೂ. ಸಾಲ ಪಡೆದರೆ 67 ಸಾವಿರ ರೂ. ವಾಪಸ್‌ ನೀಡಬೇಕು. ಎರಡು ತಿಂಗಳು ಕಟ್ಟಲಿಲ್ಲವೆಂದರೆ ರೌಡಿಗಳು ಮನೆಗೆ ಹೋಗಿ ಗಲಾಟೆ ಮಾಡುತ್ತಾರೆ. ಅನೇಕ ಹಳ್ಳಿಗಳಲ್ಲಿ ಜನರು ಮನೆ ಬಿಟ್ಟು ವಲಸೆ ಹೋಗಿದ್ದಾರೆ ಎಂದರು.

ಕೋಟೆ ಲೂಟಿಯಾದ ನಂತರ ಬಾಗಿಲು ಹಾಕಿದರು ಎಂಬಂತೆ, ಸಿಎಂ ಸಿದ್ದರಾಮಯ್ಯ ಈಗ ಹೊಸ ಕಾನೂನು ತರಲು ಮುಂದಾಗಿದ್ದಾರೆ. ನೋಟಿಸ್‌ ಕೊಡದೆ ಜನರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಇಂತಹ ಸಮಯದಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಪೊಲೀಸರು ಕೂಡ ಇದಕ್ಕೆ ಸಹಕಾರ ನೀಡಿದ್ದಾರೆ. ಕಂಟ್ರೋಲ್‌ ರೂಮ್‌ ರೂಪಿಸಿದರೂ ಅದರಿಂದ ಜನರಿಗೆ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಸಾಲ ಮನ್ನಾ ಬಗ್ಗೆ ಹೇಳಿದ್ದರಿಂದ ಡಿಸಿಸಿ ಬ್ಯಾಂಕ್‌ಗಳಿಗೆ ನಷ್ಟವಾಗಿದೆ. ಸಾಲ ಪಡೆದವರು ಕಾಂಗ್ರೆಸ್‌ ಸರ್ಕಾರವನ್ನು ನಂಬಿಕೊಂಡು ಕೂತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಕಿತ್ತುಕೊಳ್ಳುತ್ತಾರೆಂದು ಪ್ರಧಾನಿ ಮೋದಿ ಹೇಳಿದ್ದು ಈಗ ನಿಜವಾಗಿದೆ. ಗೃಹಲಕ್ಷ್ಮಿಯ ಹಣ ಮಹಿಳೆಯರಿಗೆ ನಿಜವಾಗಿಯೂ ಸಿಕ್ಕಿದ್ದರೆ ಏಕೆ ಮೈಕ್ರೋ ಫೈನಾನ್ಸ್‌ಗೆ ಹೋಗುತ್ತಾರೆ ಎಂದು ಪ್ರಶ್ನೆ ಮಾಡಿದರು.

ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಿಸಲು ಕೇಂದ್ರ ಸರ್ಕಾರ ಹಣ ಕೊಡಬೇಕಿದೆ. ಇದರ ಜೊತೆಗೆ ಬೆಂಗಳೂರಿಗೆ ಅನುದಾನ ನೀಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೇಳಿದ್ದಾರೆ. ಈಗ ಮೈಕ್ರೋ ಫೈನಾನ್ಸ್‌ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಂತೆ. ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡುವುದಾದರೆ ಇಲ್ಲಿ ಕಾಂಗ್ರೆಸ್‌ ಏಕೆ ಅಧಿಕಾರದಲ್ಲಿದೆ? ಎಂದು ಪ್ರಶ್ನೆ ಮಾಡಿದರು.

ಏಕರೂಪ ನಾಗರಿಕ ಸಂಹಿತೆ

ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಎಲ್ಲರೂ ಸಮಾನ ಎಂಬ ಭಾವನೆ ಬೆಳೆಯುತ್ತದೆ. ಬೇರೆ ದೇಶಗಳಲ್ಲಿ ಎಲ್ಲ ನಾಗರಿಕರು ಒಂದೇ ಎಂದು ಪರಿಗಣಿಸಲಾಗುತ್ತದೆ. ಅದೇ ರೀತಿ ಭಾರತದಲ್ಲೂ ಹಿಂದೂಗಳಿಗೆ ಇರುವ ಕಾನೂನು ಎಲ್ಲ ಧರ್ಮೀಯರಿಗೆ ಅನ್ವಯವಾಗಬೇಕು ಎಂದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]