ಹೊನ್ನಾಳಿ: ಫೈನಾನ್ಸ್ ಕಂಪನಿ ಸಿಬ್ಬಂದಿಗಳ ಕಿರುಕುಳ ತಾಳದೇ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ (Suicide) ಶರಣಾಗಿದ್ದ ಶಿಕ್ಷಕಿ ಪುಷ್ಪಲತಾ (46 ವರ್ಷ) ಅವರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿಯ ದುರ್ಗಿಗುಡಿ ಪ್ರದೇಶದ ನಿವಾಸಿಯಾಗಿರುವ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ ಅವರು ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರು ಸೋಮವಾರ ಬೆಳಿಗ್ಗೆಯಿಂದಲೂ ಶೋಧ ಕಾರ್ಯ ನಡೆಸಿದ್ದರು.
ಸಾಲ ಪಡೆದಿದ್ದ ಫೈನಾನ್ಸ್ ಕಂಪನಿಯ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಪುಷ್ಪಲತಾ ಅವರು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ತುಮ್ಮಿನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.