Vote for Karnataka tableau

ದೆಹಲಿಯ ಗಣರಾಜ್ಯೋತ್ಸವ: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಓಟ್ ಮಾಡಿ.. link ಇಲ್ಲಿದೆ

ನವದೆಹಲಿ (Link): ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!