Doddaballapura: Govt school children trek on Makali Hill

Doddaballapura: ಸರ್ಕಾರಿ ಶಾಲಾ ಮಕ್ಕಳಿಗೆ ಮಾಕಳಿ ಬೆಟ್ಟದಲ್ಲಿ ಚಾರಣ.. ಎರಡು ದಿನಗಳ ಪರಿಸರ ಪಾಠ

ದೊಡ್ಡಬಳ್ಳಾಪುರ (Doddaballapura): ಯುವ ಸಂಚಲನ ಚಾರಿಟೆಬಲ್ ಟ್ರಸ್ಟ್, ಐ.ಆರ್.ಡಿ ಹಾಗೂ ಟಿ.ಡಿ.ಯು ಸಂಸ್ಥೆ ಸಹಯೋಗದಲ್ಲಿ ತಾಲೂಕಿನ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ತಮ್ಮ ಸುತ್ತಮುತ್ತಲಿನ ಮುತ್ತಲಿನ ನೈಸರ್ಗಿಕ ಸಂಪನ್ಮೂಲ ಪರಿಚಯಿಸುವ ಹಾಗೂ ಅವುಗಳ ವೈಜ್ಞಾನಿಕ ಮಾಹಿತಿ ತಿಳಿಸುವ ‘ಚಾರಣದೊಂದಿಗೆ ಪರಿಸರ ಮಾಹಿತಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಎರಡು ದಿನಗಳ ಈ ಚಾರಣದಲ್ಲಿ ಭಾಗವಹಿಸಿದ್ದ ದೊಡ್ಡಬಳ್ಳಾಪುರ ವಲಯ ಅರಣ್ಯ ಸಂರಕ್ಷಣ ಅಧಿಕಾರಿ ಕೃಷ್ಣಗೌಡ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಬೇಸಿಗೆಯಲ್ಲಿ ಕಾಡು, ಬೆಟ್ಟಗಳಿಗೆ ಬೆಂಕಿ ಬೀಳುತ್ತಿರುವುದು ಮಾನವ ನಿರ್ಮಿತವಾಗಿದೆ. ಇದರ ಬಗ್ಗೆ ಮಕ್ಕಳು ಇಂದಿನಿಂದಲೇ ಅರಿವು ಬೆಳೆಸಿಕೊಳ್ಳಬೇಕು.

ಕಾಡಿಗೆ ಬೆಂಕಿ ಬೀಳುವುದರಿಂದ ಆಗುವ ಪರಿಸರದ ಹಾನಿ ಯಾರಿಂದಲೂ ಸರಿಪಡಿಸಲು ಸಾಧ್ಯವಿಲ್ಲ. ಅಪಾರ ಪ್ರಮಾಣದ ಸಸ್ಯ ಸಂಪತ್ತು, ಜೀವಸಂಕುಲ ನಾಶವಾಗುತ್ತದೆ. ಈ ಪರಿಸರ ನಷ್ಟದ ಬಗ್ಗೆ ಈಗಿನಿಂದಲೇ ತಿಳಿವಳಿಕೆ ಮೂಡಿಸಬೇಕು.

ನಾಲ್ಕು ಗೋಡೆ ನಡುವೆ ಕುಳಿತು ಪರಿಸರ ಪ್ರಾಮುಖ್ಯತೆ ಪಾಠ ಹೇಳುವುದಕ್ಕಿಂತಲೂ ಚಾರಣದೊಂದಿಗೆ ಪ್ರಾಯೋಗಿಕವಾಗಿ ತಿಳಿಸುವ ಮಾಹಿತಿ ಜೀವನದುದ್ದಕ್ಕೂ ಮನಸ್ಸಿನಲ್ಲಿ ಉಳಿಯಲಿದೆ ಎಂದರು.

ಬೆಟ್ಟದ ಚಾರಣ ನುಡುವೆ ವಿದ್ಯಾರ್ಥಿಗಳು ಸಂಗ್ರಹಿಸಿದ್ದ ಹೂವು, ಎಲೆ, ಹುಲ್ಲು, ಕಾಯಿ ಕುರಿತು ಮಾಹಿತಿ ನೀಡಿದ ಟಿ.ಡಿ.ಯು ಉಪನ್ಯಾಸಕ ಡಾ.ಅಬ್ದುಲ್ ಕರೀಂ, ಪರಿಸರದಲ್ಲಿ ಯಾವುದೂ ವ್ಯರ್ಥವಲ್ಲ. ಯಾವುದೂ ಅನಗತ್ಯ ಎನ್ನುವುದು ಇಲ್ಲ. ಎಲ್ಲಕ್ಕೂ ಒಂದೊಂದು ರೀತಿ ಮಹತ್ವ ಇದ್ದೇ ಇರುತ್ತದೆ.

ವಿದ್ಯಾರ್ಥಿ ಜೀವನದಲ್ಲಿ ನಮಗೆ ರೀತಿ ಕಾಡಿನಲ್ಲಿ ಸುತ್ತಾಡುವ ಅವಕಾಶ ಸಿಗುತ್ತಿರಲಿಲ್ಲ. ಇಂದಿನ ಮಕ್ಕಳಿಗೆ ಈ ರೀತಿಯ ಅವಕಾಶವಿದ್ದರೂ ಉತ್ತಮ ಅರಣ್ಯ ಉಳಿದಿಲ್ಲ. ಅವುಗಳನ್ನು ಉಳಿಸಿಕೊಳ್ಳಬೇಕು ಎಂದು ಪಾಠ ಹೇಳುವುದಕ್ಕಿಂತಲೂ ಈಗ ಉಳಿದಿರುವ ಅಲ್ಪಸ್ವಲ್ಪ ಕಾಡು, ಬೆಟ್ಟ ತೋರಿಸಿ ಇವುಗಳನ್ನು ಉಳಿಸಿಕೊಳ್ಳುವ ಕಡೆಗೆ ವಹಿಸಬೇಕಿರುವ ಮಹತ್ವ ತಿಳಿಸಬೇಕು ಎಂದರು.

ಎ.ಆ‌ರ್.ಡಿ ಸಂಸ್ಥೆ ಮಾನವಶಾಸ್ತ್ರಜ್ಞ ಡಾ.ರೊಮೈನ್ ಸಿಮೆನೆಲ್ ಅವರು ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು ಸಸ್ಯಗಳ ಬಣ್ಣ, ಸಸ್ಯಗಳ ಔಷಧೀಯ ಉಪಯೋಗ ಕುರಿತು ಮಕ್ಕಳಿಗೆ ‘ನಲಿ ಕಲಿ’ ಪ್ರಯೋಗದೊಂದಿಗೆ ಬೆಟ್ಟದ ತಪ್ಪಲಿನ ಕಿರುಚಲು ಕಾಡಿನ ಮಹತ್ವದ ಬಗ್ಗೆ ತಿಳಿಸಿದರು.

‘ಚಾರಣದೊಂದಿಗೆ ಪರಿಸರ ಮಾಹಿತಿ’ ಉದ್ದೇಶ ಕುರಿತು ಮಾಹಿತಿ ನೀಡಿದ ಯುವ ಸಂಚಲನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಿದಾನಂದಮೂರ್ತಿ ಮಾಹಿತಿ ನೀಡಿ, ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ.

ಈ ಕಾರಣ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಪರಿಸರ ಶಿಕ್ಷಣ. ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ, ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳು, ಪರಿಸರ ಸಂರಕ್ಷಣೆ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದರು.

‘ಚಾರಣದೊಂದಿಗೆ ಪರಿಸರ ಮಾಹಿತಿ’ಯಲ್ಲಿ ಏಟ್ರಿಯ ಸಂಸ್ಥೆಯ ಸಸ್ಯ ವಿಜ್ಞಾನಿಗಳಾದ ಆರ್.ಗಣೇಶನ್‌, ವೈಷ್ಣವಿ, ಟಿ.ಡಿ.ಯುನಿವರ್ಸಿಟಿ ಅಮಿತ, ಅರುಣ್, ಸುದೇಶ್ನಾ ಪ್ರಧಾನ್, ಯುವ ಸಂಚಲನ ಚಾರಿಟೆಬಲ್ ಟ್ರಸ್ಟ್‌ನ ಮುರುಳಿ, ದಿವಾಕರ್ ನಾಗ್, ನವೀನ್.

ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ನರಸೀಯಪ್ಪ, ಮುಖ್ಯ ಶಿಕ್ಷಕ ಎಂ.ಸಿದ್ದರಾಮಪ್ಪ, ಸಹಶಿಕ್ಷಕರಾದ ಪುಟ್ಟಸಿದ್ದೇಗೌಡ, ಹನುಮಂತರಾಯಪ್ಪ, ನರಸಿಂಹಮೂರ್ತಿ, ಮನು, ನಾಗಮಣಿ, ಶ್ರೀನಿವಾಸ್, ಕಾವ್ಯ, ಮಾಲಾಶ್ರೀ ಇದ್ದರು.

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ ಪರಾರಿ!

ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ

ಮೊಮ್ಮಗನ ಜನ್ಮದಿನಕ್ಕೆ ತೆರಳಿದ್ದನ್ನೆ ಹೊಂಚು ಹಾಕಿರುವ ದುಷ್ಕರ್ಮಿಗಳು, ಮನೆಯ ಬಾಗಲು ಮೀಟಿ ಲಕ್ಷಾಂತರ ರೂ. ಒಡವೆ, ನಗದು ದೋಚಿ (Theft) ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ

[ccc_my_favorite_select_button post_id="115029"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!