Birthday celebration of Varakavi Da.Ra.Bendre

Doddaballapura: ವರಕವಿ ದ.ರಾ.ಬೇಂದ್ರೆಯವರ ಜನ್ಮ ದಿನಾಚರಣೆ

ದೊಡ್ಡಬಳ್ಳಾಪುರ ( Doddaballapura); ವರಕವಿ ದ.ರಾ.ಬೇಂದ್ರೆ ( Da.Ra.Bendre) ಅವರು ಜನಸಾಮಾನ್ಯರ ನೋವು-ನಲಿವುಗಳನ್ನು, ಚೆಲುವು-ಒಲವುಗಳನ್ನು ತಮ್ಮ  ಕವನಗಳಲ್ಲಿ ಮೂಡಿಸಿದರು. ಅವರಿಗೆ ಜೀವನವೇ ಕಾವ್ಯ, ಕಾವ್ಯವೇ ಜೀವನವಾಗಿತ್ತು ಎಂದು ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ (VS Hegde) ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ ನಡೆದ ವರಕವಿ ದ.ರಾ.ಬೇಂದ್ರೆಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 

ಕನ್ನಡ ಭಾಷೆಯ ಪದ ಸಂಪತ್ತು ಮತ್ತು ನಾದ ಸಂಪತ್ತು ಎರಡನ್ನೂ ಬಳಸುವ ಮೂಲಕ ಬೇಂದ್ರೆಯವರ ತಮ್ಮ ಕಾವ್ಯಗುಣದ ಸತ್ವವನ್ನು ಉನ್ನತಮಟ್ಟಕ್ಕೆ ಏರಿಸಿದವರು. ಇಂದರಿಂದಾಗಿ ಬೇಂದ್ರೆಯವರ ಕವಿತೆಗಳು ಸಹೃದಯರ ಮನಸ್ಸನ್ನು ಆರ್ಕಷಣೆಗೊಳಿಸಿವೆ ಎಂದರು. 

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ (D.Shreekantha) ಮಾತನಾಡಿ, ದ.ರಾ.ಬೇಂದ್ರೆ ಅವರು ಪ್ರಕೃತಿಯ ವರ್ಣನೆಗಳಿಂದ ಹಿಡಿದು ಸಾಮಾಜಿಕ ಪ್ರಜ್ಞೆಯ ತನಕ ಎಲ್ಲಾ ವಿಚಾರಗಳನ್ನು ಕವಿತೆಗಳಲ್ಲಿ ತಂದಿದ್ದಾರೆ. ಶಬ್ದಗಾರುಡಿಗಾರ ಬೇಂದ್ರೆ ತಮ್ಮ ಕವಿತೆಗಳ ಮೂಲಕ ಹೊಸಗನ್ನಡ ಕಾವ್ಯಕ್ಕೆ ಹೊಸತನ ನೀಡಿದರು ಎಂದರು.

ನಾಗದಳ ಸಂಘಟನೆಯ ನಟರಾಜು (Nataraju) ಮಾತನಾಡಿ, ಬೇಂದ್ರೆ ಅವರ ಕಾವ್ಯದಲ್ಲಿ  ದೇಸಿ ಸೊಗಡು, ಪ್ರಕೃತಿ, ಆಧ್ಯಾತ್ಮಿಕತೆಯ ಜೊತೆಗೆ ಸಾಮಾನ್ಯ ಮನುಷ್ಯ ಜೀವನದ ಸಾಮಾಜಿಕ ವ್ಯವಸ್ಥೆಯ ವಿವಿಧ ಆಯಾಮಗಳನ್ನು ತಮ್ಮ ಕಾವ್ಯದ ಮೂಲಕ ಬಿಂಬಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು,ಕೋಶಾಧ್ಯಕ್ಷ  ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು.

ಕಸಬಾ ಹೋಬಳಿ ಘಟಕ ಅಧ್ಯಕ್ಷ ದಾದಾಪೀರ್ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್,  ಕೋದಂಡರಾಮ್, ಎ.ಅಣ್ಣಯ್ಯ, ಕಲಾವಿದರುಗಳಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಪತ್ರಕರ್ತ ಮಂಜುನಾಥ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!