Daily story Work without happiness

ಹರಿತಲೇಖನಿ ದಿನಕ್ಕೊಂದು ಕಥೆ: ಅನಿಶ್ಚಿತತೆ.. ಹತಾಶೆಯ ನಡುವೆ

Daily story: ಗೋಪಾಲಣ್ಣ ವೃತ್ತಿಯಲ್ಲಿ ಮೇಷ್ಟ್ರು. ಅವರು ಹೇಳುತ್ತಿದ್ದರು, ‘ನಮ್ಮದೂ ಒಂದು ಕೆಲಸ ಏನ್ರೀ? ಹಾಡಿದ್ದೇ ಹಾಡು ಕಿಸಿಬಾಯಿದಾಸ ಎಂದ ಹಾಗೆ ಹೇಳಿದ್ದನ್ನೇ ಹೇಳುವುದು. ನನಗೆ ತಲೆ ಕೆಟ್ಟು­ಹೋಗಿದೆ’.

ರಾಜಪ್ಪ ವೃತ್ತಿಯಲ್ಲಿ ವೈದ್ಯರು. ಅವರಿಗೂ ತಮ್ಮ ಕೆಲಸದ ಬಗ್ಗೆ ಬೇಜಾರು. ‘ನಾವೆಲ್ಲ ಜೀತದಾಳುಗಳು ಸರ್. ನಮ್ಮದು ಎನ್ನುವ ಸಮಯ­ವೇನಾದರೂ ಇದೆಯೇ? ಭಾನುವಾರ, ರಜಾದಿನ ಯಾವುದೂ ನಮಗಿಲ್ಲ. ದಿನ ಬೆಳಗಾದರೆ ರೋಗಿಗಳ, ಅಳುಮು­ಖದವರ ಜೊತೆಗೆ ಏಗಿ, ಮಾತು ನನಗೆ ನಗೋದೇ ಮರೆತು ಹೋಗಿದೆ’.

ಮಾಜಿ ಮಂತ್ರಿ ಹಾಗೂ ಸದಾ ಚಟುವಟಿಕೆ­ಯಲ್ಲಿ ಇರುವ ರಾಜಕಾರಣಿ ಗುಂಡಣ್ಣ ಹೇಳುತ್ತಾರೆ, ‘ನಮ್ಮ ವೃತ್ತಿಯಲ್ಲಿ ಯಾವುದೂ ಗ್ಯಾರಂಟಿ ಇಲ್ಲ.

ನಮ್ಮದೇ­ನಿದ್ದರೂ ಸೀಜನಲ್ ಕೆಲಸ. ಐದು ವರ್ಷ ಅಧಿಕಾರದ ಪಲ್ಲಕ್ಕಿ ದೊರೆತರೆ ಮುಂದೆ ಅದೆಷ್ಟು ವರ್ಷ ಅಧಿಕಾರಕ್ಕೆ ಕಾಯ­ಬೇಕೋ? ಅದು ಮುಂದೆ ದೊರೆಯ­ದೆಯೇ ಹೋಗಬಹುದು. ಆದರೆ ನಮ್ಮ ಹಿಂಬಾಲಕರು ಒಂದೇ ಸಮನೆ ಪ್ರಾಣ ತೆಗೆ­ಯುತ್ತಾರೆ.

ನನಗೆ ಇದು ಸಾಕಾಗಿ ಹೋಗಿದೆ. ಎಲ್ಲವನ್ನೂ ಬಿಟ್ಟು ಸುಮ್ಮನೆ ಮನೆ­ಯಲ್ಲಿ ಕೂಡ್ರುವುದು ವಾಸಿ’. ಅದರೆ, ಮನೆಯಲ್ಲಿಯೇ ಕುಳಿತು ಮಕ್ಕಳನ್ನು ಬೆಳೆ­ಸುವ ಸೌಭಾಗ್ಯಮ್ಮನವರ ಅಭಿಪ್ರಾಯವೇ ಬೇರೆ.

‘ಛೇ, ಇದೊಂದು ಜೈಲು. ಹೊರ­ಗಿನ ಪ್ರಪಂಚದಲ್ಲಿ ಏನಾ­ಗುತ್ತದೆ ಎಂಬುದೇ ತಿಳಿಯದೆ ಮನೆ ಆಯ್ತು, ಕೆಲಸ ಆಯ್ತು ಎಂದುಕೊಂಡು ಜೀವನವಿಡೀ ಬಾವಿಯಲ್ಲಿಯ ಕಪ್ಪೆ­ಯಂತೆ ಕಳೆಯುವುದು ಯಾವ ಸುಖ?‘ ಎನ್ನುತ್ತಾರೆ ಅವರು.

ಹಾಗಾದರೆ ನಮ್ಮಲ್ಲಿ ಬಹಳಷ್ಟು ಜನ ತಮಗೆ ಇಷ್ಟ­ವಿಲ್ಲದ ಕೆಲಸವನ್ನೇ ಮಾಡುತ್ತ ಜನ್ಮ ಸವೆಸುತ್ತಾ­ರೆಯೇ? ಹೀಗೆ ಮನಸ್ಸಿಲ್ಲದೇ ಮಾಡಿದ ಕೆಲಸ ಪ್ರಯೋಜನವಾದೀತೇ? ಇದೇ ತರಹದ ಚಿಂತನೆ ಇಂಗ್ಲೆಂಡಿನ ಒಬ್ಬ ತರುಣನನ್ನು ಬಹುವಾಗಿ ಕಾಡಿತ್ತು.

ಆತ ಒಂದು ದಿನ ಮನೆಯಲ್ಲಿ ಏಕಾಂಗಿಯಾಗಿ ಕುಳಿತು ಚಿಂತಿಸಿದ. ಮನೆ ಶಾಂತ­ವಾಗಿತ್ತು. ಗಡಿಯಾರದ ಮುಳ್ಳಿನ ಸದ್ದು ಕೇಳುವಷ್ಟು ಶಾಂತ. ಆತನ ತಲೆಯಲ್ಲಿ ಒಂದೇ ಕೊರೆತ. ನನ್ನ ಕೆಲಸ ನನಗೆ ತೃಪ್ತಿ, ಸಂತೋಷ ತರದಿದ್ದರೆ ಅದನ್ನು ಮಾಡು­ವುದು ಏಕೆ?.

ಅನಿಶ್ಚಿತತೆ ಹಾಗೂ ಹತಾಶೆಗಳ ನಡುವೆ

ಆತ ಕಣ್ಣು ಮುಚ್ಚಿ ಕುರ್ಚಿಗೆ ತಲೆಯಾನಿಸಿ ತನ್ನ ಆಗಿ ಹೋದ ಬದುಕನ್ನೇ ಗಮನಿಸಿದ. ಇದುವರೆಗೆ ಏನು ಮಾಡಿದೆ ನಾನು? ನನ್ನ ಇಡೀ ಬದುಕೇ ಬಡತನ, ಅನಾರೋಗ್ಯ, ಅನಿಶ್ಚಿತತೆ ಹಾಗೂ ಹತಾಶೆಗಳ ನಡುವೆ ಹರಿದು ಹಂಚಿ ಹೋಗಿದೆ.

ತಾನು ಮೊದಲು ಪಾದ್ರಿಯಾಗಬೇಕೆಂದು ತರ­ಬೇತಿ ಪಡೆದು ಸೇರಿದ­ವನು. ಆದರೆ, ಅಲ್ಲಿ ಕಲಿಸಿದ ಧರ್ಮದ ಅತಿರೇಕದ ಹಾಗೂ ಅತ್ಯಂತ ಸಂಕುಚಿತ ಅರ್ಥವನ್ನು ಕಂಡು ರೋಸಿ ಅದನ್ನು ಬಿಟ್ಟು ಬಂದೆ. ನಂತರ ಶಿಕ್ಷಕ ವೃತ್ತಿಯನ್ನು ಸೇರಿದೆ.

ಆ ವೃತ್ತಿಗೆ ಬೇಕಾದ ತಾಳ್ಮೆ, ಪ್ರೀತಿಗಳ ಕೊರತೆ ನನ್ನಲ್ಲಿ ಇದ್ದಿದ್ದರಿಂದ ಅದನ್ನು ತೊರೆದು ನಿಂತೆ. ಆದಾದ ನಂತರ ಹತ್ತಾರು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿದರೂ ಯಾವುದರಲ್ಲಿಯೂ ಸಂತೋಷ ದಕ್ಕಲಿಲ್ಲ.

ಕೊನೆಗೆ ನಾನು ಬಯಸಿ ಕೈ ಹಿಡಿದದ್ದು ಈ ಬರಹ. ತನ್ನ ಬರವಣಿಗೆ ಸಂತೋಷ ಕೊಡುವುದ­ರೊಂದಿಗೆ ಅದನ್ನು ಓದಿದ ಸಹಸ್ರಾರು ಜನರಿಗೆ ನೀಡುತ್ತಿದ್ದ ಸಂತೋಷ, ತನ್ನಲ್ಲಿ ತೃಪ್ತಿಯನ್ನು ಹೆಚ್ಚಿಸಿತ್ತು.

ಆ ತರುಣನ ಹೆಸರು ಥಾಮಸ್ ಕಾರ್ಲೈಲ್. ಇಂಗ್ಲೆಂಡಿನಲ್ಲಿ ಹತ್ತೊಂಬ­ತ್ತನೇ ಶತಮಾನದಲ್ಲಿ ಮಿಂಚಿಹೋದ ಅಸಾಮಾನ್ಯ ಪ್ರತಿಭೆ ಕಾರ್ಲೈಲ್. ಆತನ ಬರವಣಿಗೆ ಅದೆಷ್ಟು ಜನರನ್ನು ಲೇಖಕ­ರಾಗಲು ಪ್ರಚೋದಿಸಿತ್ತೋ? ರಾಬರ್ಟ್‌ ಬ್ರೌನಿಂಗ್, ಡಿಕೆನ್ಸ್, ಟೆನಿಸನ್, ಥ್ಯಾಕರೆ ಇವರೆಲ್ಲ ಕಾರ್ಲೈಲ್‌ನಿಂದ ಪ್ರಭಾವಿತ­ರಾದವರು.

ರಸ್ಕಿನ್ ಮತ್ತು ಡಾರ್ವಿನ್‌ ಅವರಂತೂ ಈತನ ಶಿಷ್ಯರೇ ಆಗಿದ್ದರು. ಎಮರ್ಸನ್ ಮತ್ತು ಸರ್ ವಿಲಿಯಂ ಆಸ್ಲರ್ ಕೂಡ ಕಾರ್ಲೈಲ್ ತಮ್ಮ ಸಾಹಿತ್ಯ ನಿರ್ಮಾಣದ ಶಿಲ್ಪಿ ಎಂದು ಭಾವಿಸುತ್ತಿದ್ದರು.

ಕಾರ್ಲೈಲ್ ಬಹಳಷ್ಟು ಬರೆದಿ­ದ್ದರೂ ಪ್ರತಿಯೊಬ್ಬರೂ ಮೆಚ್ಚು­ವುದು ಅವನ ಎಂಟು ಪದಗಳ ಒಂದು ಸಾಲನ್ನು. ಆ ಸಾಲು ತುಂಬ ಸುಲಭ ಹಾಗೂ ಅತ್ಯಂತ ಮಾರ್ಮಿಕ. ‘ಬ್ಲೆಸೆಡ್ ಈಸ್ ಹೀ ಹೂ ಹ್ಯಾಸ್ ಪೌಂಡ್ ಹಿಸ್ ವರ್ಕ’. ಅಂದರೆ, ‘ತನಗೊಪ್ಪಿದ ಕೆಲಸವನ್ನು ಪಡೆದವನೇ ಧನ್ಯ’. ಇದರ ಅರ್ಥ ಬಹು ಆಳಕ್ಕೆ ಹೋಗುವಂಥದ್ದು.

ನಮ್ಮ ಬದುಕಿ­ನಲ್ಲಿ ನನಗೊಪ್ಪಿತವಾದ, ಮನಸ್ಸಿಗೆ ಹಿಡಿಸುವ ಕೆಲಸವನ್ನು ಹುಡುಕಿ­ಕೊಂಡು ಹೋಗಬೇಕು ಇಲ್ಲವೇ ದೊರೆತ ಕೆಲಸದಲ್ಲಿ ಸಂತೋಷವನ್ನು ಹುಡುಕ­ಬೇಕು.

ಸಂತೋಷವಿಲ್ಲದೆ ಮಾಡಿದ ಕೆಲಸದಿಂದ ಮಾಡಿದವನ ಸಮಯ ವ್ಯರ್ಥ ಹಾಗೂ ಉಳಿದವರಿಗೆ ಅಪ್ರಯೋಜಕ. ನಮ್ಮ ಕೆಲಸ ಸಣ್ಣದು, ಪ್ರಯೋಜನ­ವಿಲ್ಲದ್ದು ಎಂದು ಗೊಣ­ಗುವುದು ಬೇಡ. ಗೊಣಗಾಟ ಅಳು­ಬರು­ಕರ ಬದುಕು. ಮಾಡುವುದನ್ನೇ ಸೊಗಸಾಗಿ, ಉತ್ಸಾಹದಿಂದ, ಸಂತೋಷ­ದಿಂದ ಮಾಡೋಣ.

ಆ ಕೆಲಸ ಇನ್ನೊಂದು ಹತ್ತು ಜನರಿಗೆ ಸಂತೋಷ ಕೊಡಲಿ. ಅವರಿಗೆ ದೊರೆತ ಸಂತೋಷ ನಮ್ಮ ಹೃದಯದಲ್ಲಿ ತೃಪ್ತಿಯನ್ನು ಹತ್ತು ಪಟ್ಟು ಹೆಚ್ಚಿಸುತ್ತದೆ, ಬದುಕು ಧನ್ಯವಾ­ಗುತ್ತದೆ, ಎಲ್ಲರಿಗೂ ಪ್ರಿಯವಾಗುತ್ತದೆ ಆಲ್ಲವೇ? ಯೋಚಿಸಿ, ಚಿಂತಿಸಿ, ಆಲೋಚಿಸಿ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

AI ಚಿತ್ರ ಬಳಸಲಾಗಿದೆ..

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!