Don't commit suicide: The government is with you - Cmsiddaramaiah

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ – ಸಿಎಂ‌ ಸಿದ್ದರಾಮಯ್ಯ ಕರೆ

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕರೆ ನೀಡಿದರು.

ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ.

ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು.

ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ . ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ‌ ಅವರು ಮಾತು ಇವತ್ತಿಗೂ ಸತ್ಯ ಎಂದರು.

ಜಾತಿ-ಧರ್ಮದ ಅನಿಷ್ಠ ತಾರತಮ್ಯ

ಬಸವಣ್ಣನವರು 850 ವರ್ಷಗಳ ಹಿಂದೆ “ಇವ ನಾರವ ಎಂದು ಪ್ರಶ್ನಿಸದೆ, ಇವ ನಮ್ಮವ” ಎಂದು ಹೇಳಿ ಅಂದಿದ್ದರು. ಆದರೂ ಇವತ್ತಿಗೂ ನಾವು ಜಾತಿ ಕೇಳುವುದನ್ನು ನಿಲ್ಲಿಸಿಲ್ಲ, ಜಾತಿ-ಧರ್ಮದ ಅನಿಷ್ಠ ತಾರತಮ್ಯವನ್ನು ಇವತ್ತಿಗೂ ಕಾಣುತ್ತೇನೆ ಎಂದರು.

ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ. ಅದಕ್ಕೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯಗೊಳಿಸಿದೆ ಎಂದರು.

ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂಥಾ ಮೌಡ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗಾದಾಗ ಅವರ ವಿದ್ಯೆಗೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.

ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದರು.

ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು.

ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ ಎಂದರು.

ಬರಿ ಬಾಯಿ ಮಾತಿನಲ್ಲಿ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆಶಯಗಳು ಜಾರಿ ಆಗುವುದಿಲ್ಲ. ಆಶಯಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ಈ ಉದ್ದೇಶದಿಂದಲೇ ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು ಎಂದು ಕರೆ ನೀಡಿದರು.

ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದಾಗ ರಾಜ್ಯದ ಬೊಕ್ಕಸ ದಿವಾಳಿ ಆಗತ್ತೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯವರೇ ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಹೊಡೆದು ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಘೋಷಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಆರ್ಥಿಕ, ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ಹೋಗಲು ಸಾಧ್ಯ. ನಮ್ಮ ಗ್ಯಾರಂಟಿಗಳು ಪ್ರತೀ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಚಲನೆ ನೀಡಿವೆ. ಜನರ ಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿದ್ದರಿಂದಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಸದೃಢವಾಗಿದೆ ಎಂದರು.

ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದರು.

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ

ಮೈಕ್ರೋ ಫೈನಾನ್ಸ್ ಗಳ (micro finance) ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ. ಕಾನೂನು ಕ್ರಮ ತಗೊತೀವಿ ಎಂದು ಸಿದ್ದರಾಮಯ್ಯ ಅವರು ಕರೆ ನೀಡಿದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!