ಚಿಕ್ಕಬಳ್ಳಾಪುರ: ಗ್ರಾಮಪಂಚಾಯತಿ ಮಾಜಿ ಅಧ್ಯಕ್ಷರ ಪುತ್ರನನ್ನು ಬರ್ಬರವಾಗಿ ಕೊಲೆ (Murder) ಮಾಡಿ ಚರಂಡಿಗೆ ಎಸೆದು ಹೋಗಿರುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.
ತಾಲೂಕಿನ ಮರಸನಹಳ್ಳಿಯ ಹಾರೋಬಂಡೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಪುತ್ರನಾದ ಮಾರುತೇಶ್ ನನ್ನು ಬರ್ಬರವಾಗಿ ಕೊಲೆ (Murder) ಮಾಡಿ ಚರಂಡಿಗೆ ಬಿಸಾಕಿ ದುಷಅಕರ್ಮಿಗಳು ಪರಾರಿಯಾಗಿದ್ದಾರೆ.
ಪಾಳು ಬಿದ್ದ ಬಡಾವಣೆಯೊಂದರ ಚರಂಡಿಯಲ್ಲಿ ಮಾರುತೇಶ್ ಶವಪತ್ತೆಯಾಗಿದೆ.
ಘಟನಾ ಸ್ಥಳದಲ್ಲೇ ಬೈಕ್ ಹಾಗೂ ಮದ್ಯದ ಬಾಟಲಿಗಳು ಪತ್ತೆಯಾಗಿದೆ.
ಪ್ಲಂಬರ್ ಹಾಗೂ ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಮಾರುತೇಶ್ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಅವರು ಕೊಲೆಯಾದಂತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.