ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಸಿದ್ದೇನಾಯಕನಹಳ್ಳಿ ತಿರುವಿನ ಬಳಿ ಸಾರಿಗೆ ಬಸ್ ಅಪಘಾತಕ್ಕೀಡಾಗಿದ್ದು (Accident) ಕೆಲವರು ಗಾಯಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಿಂದ ಹಿಂದೂಪುರ ಮಾರ್ಗವಾಗಿ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ( KSRTC ) ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ನಡುವಿನ ವಿಭಜಕಕ್ಕೆ ಡಿಕ್ಕಿಹೊಡೆದಿದೆ.
ದ್ವಿಚಕ್ರ ವಾಹನ ಅಡ್ಡ ಬಂದ ವೇಳೆ ಬಸ್ ಚಾಲಕ ತಪ್ಪಿಸಲು ಮುಂದಾದ ಸಂದರ್ಭದಲ್ಲಿ, ನಿಯಂತ್ರಣ ತಪ್ಪಿದ ಬಸ್ ರಸ್ತೆ ನಡುವಿನ ಸಿಮೆಂಟ್ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ದ್ವಿಚಕ್ರ ವಾಹನ ಸಾವರ, ಹಾಗೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ರಸ್ತೆಯಲ್ಲಿ ಪದೇ ಪದೇ ಅಪಘಾತ ಸಂಭವಿಸಿದರು, ಅಧಿಕಾರಿಗಳು ಸೂಚನೆ ನೀಡಿದರು, ಮಾಧ್ಯಮಗಳು ವರದಿ ಮಾಡಿದರು.. ಗೋರ್ಕಲ್ಲ ಮೇಲೆ ಮಳೆ ಸುರಿದಂತಾಗಿದೆ.
ಈ ವ್ಯಾಪ್ತಿಯಲ್ಲಿ ಉಂಟಾಗುವ ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆಂದು ಸ್ಥಳೀಯರು ದೂರಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)