ಕ್ಯಾನ್ಸರ್.. ಭಯ ಬೇಡ, ಜಾಗೃತರಾಗಿರಿ: ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ

Cancer.. Don't be afraid, be aware: Dr. K. N. Anuradha

ಬೆಂ.ಗ್ರಾ.ಜಿಲ್ಲೆ: ಕ್ಯಾನ್ಸರ್ (Cancer ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆಯ ಮೂಲಕ ಗುಣಪಡಿಸಬಹುದಾಗಿದ್ದು, ಕ್ಯಾನ್ಸರ್ ರೋಗವನ್ನು ತಡೆಯಲು ಸಾರ್ವಜನಿಕರು ಜಾಗೃತರಾಗಿಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಸಿಇಒ ಡಾ.ಕೆ.ಎನ್ ಅನುರಾಧ (Dr. K. N. Anuradha) ಅವರು ಹೇಳಿದರು.

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬದಲಾದ ಜೀವನ ಶೈಲಿ, ಮನಸ್ಥಿತಿ, ಆಹಾರ ಪದ್ಧತಿಯಿಂದ ಕ್ಯಾನ್ಸರ್ ನಂತಹ ರೋಗಗಳು ಬರಲಾರಂಭಿಸಿತು. ಕ್ಯಾನ್ಸರ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಬರುತ್ತಿದ್ದೆ, ಯುವ ಸಮೂಹ ದುಶ್ಚಟಗಳಿಗೆ ದಾಸರಾಗದೆ ಉತ್ತಮ ಜೀವನ ನಡೆಸಿ ಎಂದರು.

ಪ್ರಸಕ್ತ ದಿನಗಳಲ್ಲಿ ಮಹಿಳೆಯರಲ್ಲೂ ಕೂಡ ಹೆಚ್ಚಾಗಿ ಕ್ಯಾನ್ಸರ್ ಕಂಡು ಬರುತ್ತಿದೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಕಂಡು ಬಂದಲ್ಲಿ ಭಯ ಪಡದೆ ಚಿಕಿತ್ಸೆ ಪಡೆಯಬೇಕು.

ಮೊದಲ ಹಂತದಲ್ಲೇ ಪತ್ತೆ ಹಚ್ಚಿದ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಮೂಲಕ ಪೂರ್ಣವಾಗಿ ಗುಣ ಪಡಿಸಬಹುದು. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಇಲಾಖೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಙರಾದ ಡಾ|| ಸೋನಿಯಾ ಅವರು ಮಾತನಾಡಿ ಕ್ಯಾನ್ಸರ್ ಬಂದರೆ ಸಾವು ಎಂಬ ಭಾವನೆ ಅನೇಕರಲ್ಲಿದೆ. ಆ ಮನೋಭಾವ ಹೋಗಬೇಕು.

ಕ್ಯಾನ್ಸ‌ರ್ ರೋಗಿಗಳು ಕೂಡ ಸಾವನ್ನು ಗೆದ್ದು ಎಲ್ಲರಂತೆ ಜೀವನ ನಡೆಸಬಹುದು. ಹಾಗೆ ಕ್ಯಾನ್ಸ‌ರ್ ಬಾರದ ಹಾಗೆ ತಡೆಯುವುದು ಕೂಡ ಅತೀ ಮುಖ್ಯ.

ಮಹಿಳೆಯರು ಗರ್ಭಕಂಠದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ಲಕ್ಷಣಗಳು ತಿಳಿದ ಕೂಡಲೇ ಆಸ್ಪತ್ರೆಗೆ ಪರೀಕ್ಷಿಸಬೇಕು. ಆದರೇ ಮಹಿಳೆಯರು ಮುಜುಗರ ಪಡುತ್ತಾ ಹಾಗೆ ಉಳಿಯುತ್ತಾರೆ.

ಯಾರು ಕೂಡ ಮುಜುಗರ ಪಡದೆ ಪ್ರಥಮ ಹಂತದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು. ಕ್ಯಾನ್ಸರ್ ಎಂದರೆ ಜನರು ಭಯ ಪಡುತ್ತಾರೆ. ಇದು ಒಂದು ಗುಣಪಡಿಸಬಹುದಾದ ಖಾಯಿಲೆ.

ಸಾರ್ವಜನಿಕರು ಕೂಡ ಆಧುನಿಕ ಜೀವನಶೈಲಿ, ಫಾಸ್ಟ್ ಫುಡ್, ಧೂಮಪಾನ, ಮಧ್ಯಪಾನ ಸೇವನೆಗಳಿಂದ ದೂರವಿರಿ. ನಿಯಮಿತ ಗುಣಮಟ್ಟದ ಆಹಾರ ಸೇವನೆ, ಮನೋ ಶೈಲಿ, ಉತ್ತಮ ಯೋಗಾಭ್ಯಾಸ ಜೀವನದಲ್ಲಿ ರೂಡಿಸಿಕೊಂಡಲ್ಲಿ ರೋಗಗಳು ಮನುಷ್ಯನ ಹತ್ತಿರ ಸುಳಿಯುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸುನೀಲ್ ಕುಮಾರ್ ಎಂ. ಸಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಹೇಮಾವತಿ ಎ.ವಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಡಾ.ರಾಜೇಶ್ವರಿ, ಸಮುದಾಯ ಆರೋಗ್ಯಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]