Exclusive Roundtable on KWIN-City Project

ಜಾಗತಿಕ ಹೂಡಿಕೆದಾರರ ಸಮಾವೇಶ: ದೊಡ್ಡಬಳ್ಳಾಪುರ ಬಳಿಯ `ಕ್ವಿನ್ ಸಿಟಿ’ ಕುರಿತು ಮಹತ್ವದ ಮಾಹಿತಿ ಇಲ್ಲಿದೆ..!

ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ (KWIN-City )ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್‌ ಟೇಬಲ್‌ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ (MB Patila) ತಿಳಿಸಿದ್ದಾರೆ.

ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಸಮಾವೇಶದ ಎರಡನೆಯ ದಿನವಾದ ಫೆ,13ರಂದು ಈ ಗೋಷ್ಠಿ ನಡೆಯಲಿದೆ. ಈ ಸಂದರ್ಭದಲ್ಲಿ ವಿದೇಶಗಳ 5-6 ಮತ್ತು ಭಾರತದ 7-8 ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಸಾಧ್ಯತೆ ಕೂಡ ಇದೆ.

ಈ ಸಂಬಂಧ ಮಾತುಕತೆ ಪ್ರಗತಿಯಲ್ಲಿದ್ದು, ಯಾವ ವಿ.ವಿ.ಗಳೊಂದಿಗೆ ಒಡಂಬಡಿಕೆ ಆಗಲಿದೆ ಎನ್ನುವುದನ್ನು ನಂತರದ ದಿನಗಳಲ್ಲಿ ಅಂತಿಮವಾಗಲಿದೆ.

ಯುಜಿಸಿ (UGC) ನಿಯಮಗಳ ಪ್ರಕಾರ, ಜಗತ್ತಿನ ಮೊದಲ 500 ಸ್ಥಾನಗಳಲ್ಲಿರುವ ವಿ.ವಿ.ಗಳು ಭಾರತದಲ್ಲಿ ತಮ್ಮ ಕ್ಯಾಂಪಸ್ಸನ್ನು ತೆರೆಯಲು ಅವಕಾಶವಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು’ ಎಂದಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕೋದ್ಯಮಗಳಲ್ಲಿನ ಹೂಡಿಕೆ ಬಗ್ಗೆ ಮಾತ್ರ ಗಮನವಿರುವುದಿಲ್ಲ. ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಯೂ ಸೇರಿದಂತೆ ಸಂಶೋಧನೆ ಮತ್ತು ಅದಕ್ಕೆ ಪೂರಕವಾಗಿರುವ ವಲಯಗಳಿಗೂ ಆದ್ಯತೆ ಇರಲಿದೆ.

ಕ್ವಿನ್ ಸಿಟಿ (KWIN-City) ಯೋಜನೆಯು ಭವಿಷ್ಯದ ನಗರಾಭಿವೃದ್ಧಿಯ ಪರಿಕಲ್ಪನೆ ಮತ್ತು ಜಾಗತಿಕ ಗುಣಮಟ್ಟದ ಉದ್ಯಮಶೀಲತೆ, ಕೌಶಲ ಮುಂತಾದವನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಒಂದೂವರೆ ಗಂಟೆ ಕಾಲದ ಈ ಗೋಷ್ಠಿಯಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪರಿಷ್ಟಿತ ವಿಶ್ವವಿದ್ಯಾಲಯಗಳಿಗೆ ಆಹ್ವಾನ

ಅಜೀಂ ಪ್ರೇಂಜಿ, ಪಿಇಎಸ್, ಎಂ ಎಸ್ ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿವಿ, ದಯಾನಂದ ಸಾಗರ್, ಚಾಣಕ್ಯ, ಸೆಂಟ್ ಜೋಸೆಫ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಅಮಿಟಿ, ಬಿಎಲ್ ಡಿಇ, ಕ್ರೈಸ್ಟ್, ಜೈನ್, ಕೆಎಲ್ಇ ಸೇರಿದಂತೆ ಇನ್ನೂ ಅನೇಕ ಪರಿಷ್ಟಿತ ವಿಶ್ವವಿದ್ಯಾಲಯಗಳಿಗೆ ಆಹ್ವಾನ ನೀಡಲಾಗಿದೆ.

ಜತೆಗೆ ಐಐಎಸ್ಸಿ, ಜವಾಹರಲಾಲ್ ನೆಹರು ಉನ್ನತ ವಿಜ್ಞಾನ ಸಂಶೋಧನಾ ಕೇಂದ್ರ, ನಿಮ್ಹಾನ್ಸ್, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ, ನ್ಯೂಯಾರ್ಕಿನ ಸೆಂಟ್ ಜಾನ್ ಯೂನಿವರ್ಸಿಟಿ, ಇಂಗ್ಲೆಂಡಿನ ಯೂನಿವರ್ಸಿಟಿ ಆಫ್ ಯಾರ್ಕ್, ವೆಲ್ಲೂರಿನ ವಿಐಟಿ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು, ಪಿಲಾನಿಯ ಬಿರ್ಲಾ ತಂತ್ರಜ್ಞಾನ ಮತ್ತು ವಿಜ್ಞಾನ ಸಂಸ್ಥೆ (ಬಿಟ್ಸ್), ಶಾಸ್ತ್ರ ಯೂನಿವರ್ಸಿಟಿ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗಳ ಪರಿಣತರೂ ಭಾಗವಹಿಸಲು ವಿಶ್ವಾಸ ಇದೆ ಎಂದು ಅವರು ನುಡಿದಿದ್ದಾರೆ.

ಮಿಗಿಲಾಗಿ ಅಜೀಂ ಪ್ರೇಂಜಿ, ಇನ್ಫೋಸಿಸ್, ರಿಲಯನ್ಸ್, ಅದಾನಿ, ಭಾರತಿ, ವಿಪ್ರೋ, ಬಯೋಕಾನ್, ಕೊಟಕ್ ಎಜುಕೇಶನ್, ಶಿವ ನಾಡಾರ್, ಬಜಾಜ್ ಮತ್ತು ಮಹೀಂದ್ರ ಪ್ರತಿಷ್ಠಾನಗಳು, ಟಾಟಾ ಟ್ರಸ್ಟ್, ಎಚ್.ಡಿ.ಎಫ್.ಸಿ. ಬ್ಯಾಂಕ್ ಪರಿವರ್ತನ್, ಆದಿತ್ಯ ಬಿರ್ಲಾ ಗ್ರೂಪ್ ಸಿಎಸ್ಆರ್ ಹಾಗೂ ಏಷ್ಯನ್ ಪೇಂಟ್ಸ್ ಸಿಎಸ್ಆರ್ ಸಂಸ್ಥೆಗಳ ಉನ್ನತ ಮಟ್ಟದ ಪ್ರತಿನಿಧಿಗಳು ಕೂಡ ಇದರಲ್ಲಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ ಎಂದು ಪಾಟೀಲ ವಿವರಿಸಿದ್ದಾರೆ.

ದೊಡ್ಡಬಳ್ಳಾಪುರ- ದಾಬಸ್‌ಪೇಟೆ ಮಧ್ಯೆ ಸುಮಾರು 5000 ಎಕರೆ ಪ್ರದೇಶದಲ್ಲಿ ಕ್ವಿನ್‌ ಸಿಟಿ (KWIN-City) ನಿರ್ಮಾಣ ಮಾಡುತ್ತಿದ್ದು, ಇದರಲ್ಲಿ ಶಿಕ್ಷಣ, ಆರೋಗ್ಯ, ಸಂಶೋಧನೆ ಮತ್ತು ನಾವೀನ್ಯತೆ ಕುರಿತಾದ ಪ್ರತಿಷ್ಠಿತ ಸಂಸ್ಥೆಗಳು ತಲೆ ಎತ್ತಲಿವೆ.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!