ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

Na.Ra.Lokesh met H.D. Kumaraswamy

ನವದೆಹಲಿ: ಕೇಂದ್ರ ಸರಕಾರವು ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ (Na.Ra.Lokesha) ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (HD Deve Gowda) ನಿವಾಸದಲ್ಲಿ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾದ ಲೋಕೇಶ್ ಅವರು ವೈಜಾಗ್ ಸ್ಟೀಲ್ ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದರು.

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ ಅವರು ಬಹುಮುಖ್ಯವಾಗಿ ವೈಜಾಗ್ ಸ್ಟೀಲ್ ಪುನಶ್ಚೇತನ ಯೋಜನೆ ಹಾಗೂ ಭವಿಷ್ಯದಲ್ಲಿ ಕಾರ್ಖಾನೆಯನ್ನು ಯಾವ ರೀತಿಯಲ್ಲಿ ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂಬ ಬಗ್ಗೆ ಸವಿಸ್ತಾರವಾಗಿ ಸಮಾಲೋಚನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಮಾಡಿದ್ದು, ಅದರಂತೆ ನಾವು ಉಕ್ಕು ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸಬೇಕಿದೆ.

ಅದರಲ್ಲಿಯೂ ಪರಿಸರ ಪೂರಕವಾದ ಗ್ರೀನ್ ಸ್ಟೀಲ್, ಸ್ಪೆಶಾಲಿಟಿ ಸ್ಟೀಲ್ ತಯಾರಿಕೆಯಲ್ಲಿ ಭಾರತ ಮುಂಚೂಣಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ವೈಜಾಗ್ ಸ್ಟೀಲ್ ಗೆ ಶಕ್ತಿ ತುಂಬಲು ಕೇಂದ್ರ ಸರಕಾರ ನಿರ್ಧರಿಸಿತು ಎಂದು ಲೋಕೇಶ್ ಅವರಿಗೆ ಸಚಿವರು ಹೇಳಿದರು.

ಪ್ಯಾಕೇಜ್ ಪರಿಣಾಮಕಾರಿ ಬಳಕೆ ಹಾಗೂ ನಿಗದಿತ ಗುರಿಯಂತೆ ಕಾರ್ಖಾನೆಯ ಮೂರು ಬ್ಲಾಸ್ಟ್ ಫರ್ ನೆಸ್ (ಊದು ಕುಲುಮೆ)ಗಳ ಮೂಲಕ ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ತಯಾರು ಮಾಡುವುದು ಕೇಂದ್ರದ ಗುರಿಯಾಗಿದೆ.

ಈ ಗುರಿ ಸಾಧನೆಗೆ ಆಂಧ್ರ ಪ್ರದೇಶದ ಸರಕಾರ ಹಾಗೂ ಕಾರ್ಮಿಕರ ಸಹಕಾರ ಅತ್ಯಗತ್ಯವಾಗಿ ಬೇಕಿದೆ ಎಂದು ಸಚಿವರು ಲೋಕೇಶ್ ಅವರಲ್ಲಿ ಒತ್ತಿ ಹೇಳಿದರು.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಲೋಕೇಶ್ ಅವರು ಕೇಂದ್ರ ಸಚಿವರಿಗೆ ಭರವಸೆ ನೀಡಿದರು.

ಕಾರ್ಖಾನೆಯ ಪುನಶ್ಚೇತನ ವಿಷಯದಲ್ಲಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತೋರಿದ ಬದ್ಧತೆಯ ಶ್ಲಾಘಿಸಿದ ಕೇಂದ್ರ ಸಚಿವರು, ತಮ್ಮ ಸಚಿವಾಲಯಗಳ ವತಿಯಿಂದ ಆಂಧ್ರ ಪ್ರದೇಶದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಲೋಕೇಶ್ ಅವರಿಗೆ ಹೇಳಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಚಿವರು ಹಾಗೂ ಲೋಕೇಶ್ ಅವರು ಸಮಾಲೋಚನೆ ನಡೆಸಿದರು. ತದ ನಂತರ ಮಾಜಿ ಪ್ರಧಾನಿ ದೇವೇಗೌಡರ ಜತೆಯಲ್ಲಿ ಎಲ್ಲರೂ ಮಧ್ಯಾಹ್ನದ ಭೋಜನ ಸ್ವೀಕರಿಸಿದರು. ಲೋಕೇಶ್, ರಾಮ್ ಮೋಹನ್ ನಾಯ್ಡು ಸೇರಿದಂತೆ ಎಲ್ಲ ಸಂಸದರನ್ನು ಮಾಜಿ ಪ್ರಧಾನಿಗಳು ಹಾಗೂ ಸಚಿವರು ಆತ್ಮೀಯವಾಗಿ ಸತ್ಕರಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಾ. ಸಿ.ಎನ್.ಮಂಜುನಾಥ್, ಕೋಲಾರ ಸಂಸದ ಮಲ್ಲೇಶ್ ಬಾಬು ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]