ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ (selection) ಪ್ರಕ್ರಿಯೆ ನಡೆಸಲಾಗುತ್ತಿದೆ.
ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಪ್ರವೇಶಕ್ಕೆ ಬೆಂಗಳೂರು ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಗೆ ಈ ಹಿಂದೆ ನಿಗದಿ ಪಡಿಸಿದ್ದ ದಿನಾಂಕಗಳನ್ನು ಪರಿಷ್ಕರಿಸಿದೆ.
ಫೆಬ್ರವರಿ 18 ರಂದು ಕಿರಿಯರ ವಿಭಾಗಕ್ಕೆ ಹಾಗೂ ಫೆಬ್ರವರಿ 19 ರಂದು ಹಿರಿಯರ ವಿಭಾಗಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದ್ದು ಶ್ರೀ ಕಂಠೀರವ ಕ್ರೀಡಾಂಗಣ, ಬೆಂಗಳೂರಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29787443 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.