ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

Bus-Bike Accident: 1-year-old child among five members of the same family killed

ಯಾದಗಿರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ (Accident) ಸಂಭವಿಸಿ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ನಡೆದಿದೆ.

ಹನುಮಂತ ಆಂಜನೇಯ (35 ವರ್ಷ), ಗಂಗಮ್ಮ (28 ವರ್ಷ), ಹಣಮಂತ (1 ವರ್ಷ), ಹನುಮಂತನ ಸಹೋ ದರನ ಮಕ್ಕಳಾದ ಪವಿತ್ರಾ (5 ವರ್ಷ) ಹಾಗೂ ರಾಯಪ್ಪ (3 ವರ್ಷ) ಸಾವನ್ನಪ್ಪಿದ ದುರ್ದೈವಿಗಳು.

ಮೃತರೆಲ್ಲರೂ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದವರು. ಒಂದೇ ಬೈಕ್ ನಲ್ಲಿ ಈ ಐವರೂ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ (Accident) ಸಂಭವಿಸಿದೆ.

ಘಟನೆ ವಿವರ: ಸುರಪುರದಿಂದ ತಿಂಥಣಿಯತ್ತ ಹೊರಟಿದ್ದ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಗುದ್ದಿದ ರಭಸಕ್ಕೆ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಉಳಿದ ಇಬ್ಬರು ಸುರಪುರ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಬೈಕ್ ಚಾಲಕ ಲಾರಿ ಹಿಂದಿಕ್ಕಲು ಹೋಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಎಸ್ಪಿ, ಸುರಪುರ ಡಿವೈಎಸ್ಪಿ, ಸಿಪಿಐ, ಸುರಪುರ, ಪಿಐ ಭೇಟಿ ನೀಡಿದ್ದರು.

ದೇವರ ಕಾರ್ಯಕ್ರಮಕ್ಕೆ ಹೊರಟವರು ಮಸಣ ಸೇರಿದರು. ಹನುಮಂತ ರಾಯಚೂರು ಜಿಲ್ಲೆಯ ಲಿಂಗಸೂಗೂರ ತಾಲ್ಲೂಕಿನ ಗುರುಗುಂಟಾದಿಂದ ಕೆಲ ವರ್ಷಗಳ ಹಿಂದೆ ಶಹಾಪುರ ತಾಲ್ಲೂಕಿನ ಹಳಿಸಗರ ಗ್ರಾಮಕ್ಕೆ ಬಂದು ಗಂಗಮ್ಮಳನ್ನು ವಿವಾಹವಾಗಿದ್ದರು.

ಶುಕ್ರವಾರ ನಡೆಯಲಿದ್ದ ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ರಾಜಕೀಯ

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬುಧವಾರ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆಯ ಕುಸಿದು ಏಳು ಮಂದಿ ಸಾವನಪ್ಪಿರುವ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121541"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]