ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಸೂಚನೆ ಹಿನ್ನೆಲೆಯಲ್ಲಿ, ನೆಲಮಂಗಲ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲ ತಾಲೂಕಿನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (EO), ಕ್ಷೇತ್ರ ಶಿಕ್ಷಣಾಧಿಕಾರಿ (Bro), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನಾಧಿಕಾರಿ (CDPO),
ಸಹಾಯಕ ಕಾರ್ಯಪಾಲಕ ಅಭಿಯಂತರರು (Are). ಸಹಾಯಕ ನಿರ್ದೇಶಕರು ಮತ್ತು ಜಿಲ್ಲಾ ಎಸ್ ಬಿ ಎಂ ಸಮಾಲೋಚಕರ ತಂಡ ಪರಿಶೀಲನೆ ನಡೆಸಿದೆ.

ದೊಡ್ಡಬಳ್ಳಾಪುರ 13 ಗ್ರಾಮಪಂಚಾಯಿತಿಗಳ ODF Plus Model Declare ಆಗಿರುವ 20 ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ಕಾರ್ಯ ನಡೆಸಿದ್ದಾರೆ.
ಇದರಲ್ಲಿ ಪ್ರಮುಖವಾಗಿ ಸ್ವಚ್ಛ ಸಂಕೀರ್ಣ ಘಟಕ, ಬೂದು ನೀರು ನಿರ್ವಹಣೆ ಕಾಮಗಾರಿಗಳು, ವೈಯಕ್ತಿಕ ಗೃಹ ಶೌಚಾಲಯ, ಶಾಲೆ, ಅಂಗನವಾಡಿ, ಗ್ರಾಮ ಪಂಚಾಯಿತಿಗಳ ಶೌಚಾಲಯ, ಸಮುದಾಯ ಶೌಚಾಲಯ, ಇನ್ಸಿ ನೇಟರ್ (ನ್ಯಾಪ್ ಕಿನ್ ಬರ್ನಿಂಗ್ ಮಿಷನ್ ) visual cleaneness, ನೈರ್ಮಲ್ಯ ಮತ್ತು ಸುಸ್ಥಿರತೆಯನ್ನು ಕಾಯ್ದುಕೊಂಡಿರುವ ಕುರಿತು ಪರಿಶೀಲಿಸಿದ್ದಾರೆ.

ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ತಾಲೂಕು ಪಂಚಾಯಿತಿ ಸಿಬ್ಬಂದಿ ಇದ್ದರು.