HD Deve Gowda insists on bringing treatment for heart attack and stroke under Ayushman Bharat

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ (HD Deve Gowda) ಅವರು, ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.

ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್‌ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಆ ಪಕ್ಷದ ಸರಕಾರ ಯಾವ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರಕಾರ ಎಂದು ಅವರು ಕಿಡಿಕಾರಿದರು.

ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ.

ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ದೇವೇಗೌಡರು ಗುಡುಗಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು; ಕಾಂಗ್ರೆಸ್ ಪಕ್ಷದ ಬಗ್ಗೆ ‘ಶೇಮ್‌ ಶೇಮ್‌’ ಎಂದು ಘೋಷಣೆಗಳನ್ನು ಕೂಗಿದರು. 

ಕಾಂಗ್ರೆಸ್‌ ಸರಕಾರದ ಸಚಿವರ ಕಾರ್ಯವೈಖರಿ ಬಗ್ಗೆಯೂ ಮಾಜಿ ಪ್ರಧಾನಿಗಳು ತಮ್ಮ ಅಸಮಾಧಾನವನ್ನು ಹೊರಹಾಕಿದರು. ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತ ಪತ್ರಿಕಾ ವರದಿಗಳನ್ನು ನಾನು ಈ ಸದನದಲ್ಲಿ ಓದಲೇ? ಎಂದು ಅವರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯರು ಮಾಜಿ ಪ್ರಧಾನಿಗಳ ಭಾಷಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಗಂಭೀರ

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಿನೇದಿನೆ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ.

ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, ಅಷ್ಟು ಪ್ರಮಾಣದ ನೀರು ಏನೇನಕ್ಕೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ಮಾಜಿ ಪ್ರಧಾನಿಗಳು ಒತ್ತಾಯ ಮಾಡಿದರು.

ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದರು. ಆದರೆ ಸಿಂಗ್ ಅವರು ಕೈ ಚೆಲ್ಲಿದ್ದರು. ಆದರೆ, ಈ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಮೋದಿ ಅವರಿಂದ ಸಾಧ್ಯ. ಇದು ನನ್ನ ಬಲವಾದ ನಂಬಿಕೆ ಎಂದು ಅವರು ಹೇಳಿದರು.

ಕೇಂದ್ರ ಬಿಜೆಪಿ ಸರಕಾರದ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯರ ಆಕ್ಷೇಪಗಳಿಗೆ ತಿರುಗೇಟು ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಲವಾಗಿ ಸಮರ್ಥಿಸಿಕೊಂಡರು.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!