Justice for the victims of micro-finance: R. Ashoka Agraha

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಮಂಡ್ಯ: ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದರು.

ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ (R Ashoka) ಭೇಟಿ ನೀಡಿ ಸಾಂತ್ವನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.

ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ.

ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್‌ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ 12% ರಂತೆ ಸಾಲ ನೀಡಿವೆ. ಒಬ್ಬರಿಗೆ ಒಂಬತ್ತು ಜನರು ಶೂರಿಟಿ ನೀಡಿದ್ದಾರೆ.

ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್‌ಗೆಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ 60 ಮೈಕ್ರೋ ಫೈನಾನ್ಸ್‌ಗಳಿದ್ದು, ಕೇವಲ 18 ಮಾತ್ರ ಅಧಿಕೃತವಾಗಿವೆ. ಉಳಿದವುಗಳಲ್ಲಿ ರೌಡಿಗಳಿದ್ದಾರೆ. ತಹಶೀಲ್ದಾರ್‌ ಹಾಗೂ ಪೊಲೀಸರು ಎಲ್ಲ ಹಳ್ಳಿಗೂ ಹೋಗಿ ಕ್ರಮ ಕೈಗೊಳ್ಳಬೇಕಿತ್ತು.

ಈ ಸಾವುಗಳಿಗೆ ನ್ಯಾಯ ನೀಡಲು ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು. ಅನಧಿಕೃತ ಮೈಕ್ರೋ ಫೈನಾನ್ಸ್‌ಗಳನ್ನು ಪತ್ತೆ ಮಾಡಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!