Big relief for CM, temporary relief for former CM..!

ಸಿಎಂಗೆ ಬಿಗ್ ರಿಲೀಫ್, ಮಾಜಿ ಸಿಎಂಗೆ ತಾತ್ಕಾಲಿಕ ರಿಲೀಫ್..!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yadyurappa) ವಿರುದ್ಧ ಅವರಿಗಿಂದು ಮಹತ್ವದ ದಿನವಾಗಿದ್ದು, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತೀರ್ಪು ಪ್ರಕಟವಾಗಿದೆ.

ಸಿಎಂಗೆ ಬಿಗ್ ರಿಲೀಫ್

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ನ್ಯಾಯಾಲಯ ನಿರಾಕರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್​ನಿಂದ ಬಿಗ್ ರಿಲೀಫ್​ ಸಿಕ್ಕಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವಹಿಸುವಂತೆ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಧಾರವಾಡ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಈ ಅರ್ಜಿ ವಿಚಾರಣೆ ಮಾಡಿದ್ದ ಹೈಕೋರ್ಟ್​ ತೀರ್ಪು ಅನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವುದು ಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ತನಿಖೆಗೆ ಕೊಡಲು ಇದೇನು ಅಪರೂಪದ ಕೇಸ್ ಅಲ್ಲ. ದೂರುದಾರ ಮೊದಲು ರಾಜ್ಯಪಾಲರ ಅನುಮತಿ ಕೇಳಿದರು.

ಆ ಮೇಲೆ ಲೋಕಾಯುಕ್ತ ತನಿಖೆ ಕೋರಿದರು. ಈ ಎರಡನ್ನು ಕೊಟ್ಟಿದ್ದರು. ಆದರೆ ಈಗ ತನಿಖೆ ಪೂರ್ಣಗೊಳ್ಳುವ ಮೊದಲೇ ಸಿಬಿಐಗೆ ತನಿಖೆ ವಹಿಸಿ ಎಂದು ಕೇಳುತ್ತಿದ್ದಾರೆ. ಇಲ್ಲಿ ಗಮನಿಸುವುದು ಏನೆಂದರೆ ಲೋಕಾಯುಕ್ತರು ಮಾಡಿದ ತನಿಖೆಯ ಲೋಪ ಏನು ಅಂತ ಹೇಳಿಲ್ಲ ಎಂದು ಕೋರ್ಟ್​ಗೆ ಮನವಿ ಮಾಡಿದರು.

ಇನ್ನು ದೂರದಾರ ಸ್ನೇಹಮಯಿ ಪರ ವಕೀಲ ಮಣಿಂದರ್ ಸಿಂಗ್ ಅವರು ವಾದ ಮಂಡನೆ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರ ರಕ್ಷಣೆಗೆ ಸಚಿವ ಸಂಪುಟ ಒಟ್ಟಾಗಿದೆ. ಸ್ಥಳೀಯ ಅಧಿಕಾರಿಗಳು ಸ್ವತಂತ್ರ ತನಿಖೆ ಸಾಧ್ಯವಾಗುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು ಎಂದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇದರಲ್ಲಿ ಸ್ವತಂತ್ರ ನ್ಯಾಯಸಮ್ಮತ ತನಿಖೆ ಆಗಬೇಕಿದೆ ಎಂದು ಕೋರ್ಟ್​ಗೆ ಮನವಿ ಮಾಡಿದರು.

ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರಾಕರಿಸಿದೆ.

ಮಾಜಿ ಸಿಎಂಗೆ ತಾತ್ಕಾಲಿಕ ರಿಲೀಫ್

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು (ಫೆಬ್ರವರಿ 07) ಆದೇಶ ಹೊರಡಿಸಿದೆ. ಆದರೆ, ಪ್ರಕರಣ ರದ್ದು ಮಾಡಲು ನಿರಾಕರಿಸಿದೆ.

ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದರೆ ಕಷ್ಟ ತಪ್ಪಿಲ್ಲ. ಏಕೆಂದರೆ ಕೋರ್ಟ್​ ಕೇವಲ ಜಾಮೀನು ನೀಡಿದೆ ಹೊರತು ಪ್ರಕರಣ ರದ್ದು ಮಾಡಿಲ್ಲ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು, ಇಂದಿಗೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

ಅದರಂತೆ ಇದೀಗ ಧಾರವಾಡ ಹೈಕೋರ್ಟ್​ ಪೀಠ, ಪ್ರಕರಣ ರದ್ದುಪಡಿಸಲು ನಿರಾಕರಿಸಿದ್ದು, ಕೇವಲ ನಿರೀಕ್ಷಣಾ ಜಾಮೀನು ನೀಡಿದೆ. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾಗಿದ್ದಾರೆ ಹೊರತೂ ವಿಚಾರಣೆ ಎದುರಿಸಲೇಬೇಕಾಗಿದೆ.

ಇನ್ನು ತಾಂತ್ರಿಕ ಕಾರಣಕ್ಕೆ ಈ ಪ್ರಕರಣವನ್ನು ಹೈಕೋರ್ಟ್​, ಪೋಕ್ಸೋ ಕೋರ್ಟ್​ಗೆ ವಾಪಸ್ ಮರಳಿಸಿದೆ. ಹೀಗಾಗಿ ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೋರ್ಟ್​​ನಲ್ಲಿ ವಿಚಾರಣೆ ಎದುರಿಸಬೇಕಿದೆ ಎಂದು ವರದಿಯಾಗಿದೆ.

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!