ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yedyurappa) ವಿರುದ್ಧ ಅವರಿಗಿಂದು ಮಹತ್ವದ ದಿನವಾಗಿದ್ದು, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತೀರ್ಪು ಪ್ರಕಟವಾಗಲಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ್ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಕೋರಿರುವ ಅರ್ಜಿ..
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಗಳ ಆದೇಶಗಳು ಶುಕ್ರವಾರ ದಂದು ಧಾರವಾಡ ಪೀಠದಲ್ಲಿ ಪ್ರಕಟವಾಗಲಿವೆ.
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹ ಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ಹಾಗೂ ತಮ್ಮ ಮೇಲಿನ ಪೋಕ್ಸೋ ಪ್ರಕರಣರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿರುವ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶ ಹೊರಬೀಳಲಿದೆ.