ಮುಡಾ ಹಗರಣ.. ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ

Increase in milk price; R. Ashoka said that BJP will fight

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka) ಹೇಳಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ.

ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಆಡಳಿತದ 20 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಇದನ್ನು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ.

ರಾಜ್ಯ ಸುಭದ್ರವಾಗಿರಬೇಕಾದರೆ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಆದರೆ ರಾಜ್ಯದಲ್ಲಿ ಬ್ಯಾಂಕ್ ದರೋಡೆಗಳು, ಗೋವುಗಳ ಕೆಚ್ಚಲು ಕೊಯ್ಯುವುದು, ಹೊಟ್ಟೆ ಸೀಳುವುದು, ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿವೆ. ಕಾನೂನು ಸುವವ್ಯಸ್ಥೆ ಹದಗೆಟ್ಟು ಹೋಗಿದೆ.

ಬೆಳಗಾವಿಯಲ್ಲಿ ಅಷ್ಟು ದೊಡ್ಡ ಅಧಿವೇಶನ ಮಾಡಲು ದುಡ್ಡು ಎಲ್ಲಿಂದ ಬಂತು? ಬ್ಯಾನರ್‌, ಬಸ್‌, ಊಟಕ್ಕೆ ದುಡ್ಡು ಎಲ್ಲಿಂದ? 60 ಪರ್ಸೆಂಟ್ ಕಮಿಷನ್ ಪಡೆದಿರುವುದನ್ನು ಸರ್ಕಾರ ಅಧಿವೇಶನಕ್ಕೆ ಬಳಕೆ ಮಾಡಿದೆ. ಆರು ತಿಂಗಳಿಗೊಮ್ಮೆ ಬಜೆಟ್ ಮಾಡಿ ಮತ್ತೆ ಬೆಲೆ ಏರಿಕೆ ಮಾಡುತ್ತಾರೆ ಎಂದು ದೂರಿದರು.

ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿಯಷ್ಟು ಸಾಲ ಪಡೆಯಲು ಅವಕಾಶ ಇದ್ದರೂ ಜನರ ಮೇಲೆ ಹೊರೆ ಬರಬಾರದು ಎಂದು ಸಾಲ ತೆಗೆದುಕೊಂಡಿಲ್ಲ. ಆದರೆ ಇವರು ಸಾಲಗಾರರ ರಾಜ್ಯ ಮಾಡಲು ಹೊರಟಿದ್ದಾರೆ. ಹೀಗೆ ಮಾಡಿದರೆ ಕೇರಳದಂತೆ ಭಿಕ್ಷೆ ಬೇಡುವ ಸ್ಥಿತಿ ರಾಜ್ಯಕ್ಕೆ ಬರಲಿದೆ.

ಸಿಎಂ ಸಿದ್ದರಾಮಯ್ಯ ನವೆಂಬರ್‌ನಲ್ಲಿ ಸಿಎಂ ಸ್ಥಾನ ಬಿಡಬೇಕಾಗಬಹುದು. ಹಾಗಾಗಿ ಅವರಿಗೂ ಆಸಕ್ತಿ ಇಲ್ಲ. ಆಡಳಿತ ಪಕ್ಷ ಅಧ್ವಾನವಾದರೆ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.

ಪಕ್ಷದ ಆಂತರಿಕ ವಿಚಾರವನ್ನು ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕು. ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಿದರೆ ಕಾಂಗ್ರೆಸ್ ಸರ್ಕಾರವನ್ನು ಬಗ್ಗು ಬಡಿಯಬಹುದಾಗಿತ್ತು.

ಹದಿನೈದು-ಇಪ್ಪತ್ತು ದಿನಗಳಲ್ಲಿ ಇದಕ್ಕೆ ಅಂತಿಮ ತೀರ್ಮಾನವನ್ನು ಕೇಂದ್ರದ ನಾಯಕರು ಕೊಡುತ್ತಾರೆ. ಒಟ್ಟಾಗಿ ಹೋಗಬೇಕು ಎನ್ನುವುದು ನನ್ನ ಅಭಿಪ್ರಾಯ.

ಕೆಲವು ಸಲ ಪ್ರಜಾಪ್ರಭುತ್ವದ ಮಾತಿನ ಸ್ವಾತಂತ್ರ್ಯದಲ್ಲಿ ಎಲ್ಲರೂ ಮಾತಾಡಲು ಶುರು ಮಾಡುತ್ತಾರೆ. ಪ್ರಾರಂಭದಲ್ಲೇ ಇದು ಕಡಿಮೆ ಆಗಿರುತ್ತಿದ್ದರೆ ಒಳ್ಳೆಯದಿತ್ತು. ಸರಿ ಪಡಿಸಿಕೊಂಡು ಹೋಗುವುದೇ ದೊಡ್ಡ ಗುಣ ಎಂದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]