Aero India 2025: Airshow starts today

Aero India 2025: ಏರ್‌ಶೋಗೆ ಇಂದು ಚಾಲನೆ.. ಟಿಕೆಟ್ ಪಡೆಯುವ ಲಿಂಕ್ ಇಲ್ಲಿದೆ

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ 15ನೇ ಆವೃತ್ತಿಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ (Aero India 2025) ಸಕಲ ಸಿದ್ದತೆ ನಡೆದಿದ್ದು, ಸೋಮವಾರ ಬೆಳಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಉದ್ಘಾಟನೆಯಿಂದ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ಸಿಗಲಿದೆ.

ಸುಮಾರು ನೂರು ದೇಶಗಳ ಪ್ರತಿನಿಧಿಗಳು, ಅಮೆರಿಕ, ರಷ್ಯಾ, ಐರೋಪ್ಯ ರಾಷ್ಟ್ರಗಳ ಅತ್ಯಾಧುನಿಕ ಯುದ್ಧ ವಿಮಾನಗಳಿಂದ ಪ್ರದರ್ಶನ ಹಾಗೂ ಭಾರತದ ವಾಯುಪಡೆಯ ಬಲಪ್ರದರ್ಶನಕ್ಕೆ (Aero India 2025) ವೇದಿಕೆ ಸಜ್ಜಾಗಿದೆ.

ಒಂದೆಡೆ ಸೋಮವಾರದಿಂದ ಲೋಹದ ಹಕ್ಕಿಗಳ ಕಲರವ, ಇನ್ನೊಂದೆಡೆ ರಾಜ್ಯಕ್ಕೆ ಕೈಗಾರಿಕೋದ್ಯಮಿ ಗಳನ್ನು ಸೆಳೆಯುವ ನಿಟ್ಟಿನಲ್ಲಿ ಮಂಗಳವಾರದಿಂದ ಹೂಡಿಕೆದಾರರ ಸಮ್ಮೇಳನ. ಈ ಎರಡೂ ಸಮಾವೇಶಗಳು ಜತೆಜತೆಗೆ ನಡೆಯುತ್ತಿರುವುದು ಕರ್ನಾಟಕದ ಪಾಲಿಗೆ ‘ಲಾಭ’ವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಐದು ದಿನಗಳ ಕಾಲ ನಡೆಯುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನಿರೀಕ್ಷೆಗಳನ್ನು ಹುಟ್ಟಿಸಿದೆ. ಬೃಹತ್ ಅಂತಾರಾಷ್ಟ್ರೀಯ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದ್ದು, ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ.

ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ ಮಾಡಲು ತುದಿಗಾಲಲ್ಲಿ ನಿಂತಿವೆ. ಈಗಾಗಲೇ 700ಕ್ಕೂ ಪ್ರದರ್ಶಕರು ನೋಂದಣಿ ಮಾಡಿಕೊಂಡಿದ್ದು, ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ತಮ್ಮ ಉತ್ಪನ್ನಗಳನ್ನು ಪ್ರದರ್ಶನ ಮಾಡಲು ತಯಾರಿ ನಡೆಯುತ್ತಿದೆ.

ಏ‌ರ್ ಶೋನಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಪಾಲಿಕೆ, ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.

ಟಿಕೆಟ್ ಪಡೆಯುವುದು ಹೇಗೆ?

ಏರೋ ಇಂಡಿಯಾ ಪ್ರದರ್ಶನದ ಮೊದಲ 3 ದಿನ ಎಕ್ಸಿಬಿಷನ್ ಹಾಗೂ ಮಳಿಗೆಗಳ ಭೇಟಿಗೆ ಸಾರ್ವಜನಿಕರಿಗೆ ಅವಕಾಶವಿಲ್ಲ. ಆದರೆ ವೈಮಾನಿಕ ಪ್ರದರ್ಶನದ ಭೇಟಿಗೆ ಅವಕಾಶ ನೀಡಲಾಗಿದೆ.

ವೈಮಾನಿಕ ಪ್ರದರ್ಶನದ ವೀಕ್ಷಣೆಗೆ ಒಂದು ಸಾವಿರ ರು. ನಿಗದಿಯಾಗಿದೆ. ಮಳಿಗೆಗಳ ಭೇಟಿಗೆ 2500 ರು. ಶುಲ್ಕ ನಿಗದಿಪಡಿಸಲಾಗಿದೆ. ಟಿಕೆಟ್ ಇಲ್ಲಿ ಲಭ್ಯವಿದೆ: www.aeroindia.gov.in

ರಾಜಕೀಯ

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ.

"ಹಿಮಂತ್ ಅವರು ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ವಾಪಸ್ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 44 ಸಾವಿರ ಅಕ್ರಮ ಬಾಂಗ್ಲಾ ವಲಸಿಗರನ್ನು ವಾಪಸ್ ಕಳುಹಿಸಲಾಗಿತ್ತು. ಈಗ ಬಿಜೆಪಿ ಸರ್ಕಾರದಲ್ಲಿ ಎಷ್ಟು ಅಕ್ರಮ ಬಾಂಗ್ಲಾ

[ccc_my_favorite_select_button post_id="120560"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!