ತಿರುಪತಿ: ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಸಿದ್ದ ದೇವಾಲಯವಾದ ತಿರುಮಲದ ವೆಂಕಟೇಶ್ವರ ಸ್ವಾಮಿಯ ಲಡ್ಡು (TirupatiLaddu) ಪ್ರಸಾದದಲ್ಲಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಪ್ಪ ಸರಬರಾಜು ಮಾಡುತ್ತಿದ್ದ ನಾಲ್ವರನ್ನು ಸಿಬಿಐ ತನಿಖಾ ತಂಡ ಬಂಧಿಸಿದೆ.
ಬಂಧಿತ ವ್ಯಕ್ತಿಗಳಲ್ಲಿ ಎಆರ್ ಡೈರಿ (ತಮಿಳುನಾಡು) ಪರಾಗ್ ಡೈರಿ (ಉತ್ತರ ಪ್ರದೇಶ್, ಪ್ರೀಮಿಯರ್ ಅಗ್ರಿ ಫುಡ್ಸ್ ಮತ್ತು ಅಲ್ಪಾ ಮಿಲ್ಕ್ ಪುಡ್ ಸೇರಿದಂತೆ ತುಪ್ಪ ಸರಬರಾಜು ಮಾಡುವ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಬಳಕೆಯ ಆರೋಪದ ತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸಿಬಿಐ ಐದು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿತು.
ಈ ತಂಡದಲ್ಲಿ ಕೇಂದ್ರ ಸಂಸ್ಥೆಯ ಇಬ್ಬರು ಅಧಿಕಾರಿಗಳು, ಆಂಧ್ರಪ್ರದೇಶ ಪೊಲೀಸರ ಇಬ್ಬರು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಒಬ್ಬರು ಅಧಿಕಾರಿಯನ್ನು ನೇಮಕ ಮಾಡಲಾಗಿತ್ತು.

ಈ ಬಗ್ಗೆ ತನಿಖೆ ಮಾಡಿದ ಸಿಬಿಐ, ತುಪ್ಪ ಪೂರೈಕೆಯ ಸಮಯದಲ್ಲಿ ಹಲವಾರು ಉಲ್ಲಂಘನೆಗಳು ನಡೆದಿದೆ. ಅಲ್ಲದೇ ಪ್ರತಿ ಹಂತದಲ್ಲೂ ಅಕ್ರಮಗಳು ನಡೆದಿದೆ. ವೈಷ್ಣವಿ ಡೈರಿಯ ಪ್ರತಿನಿಧಿಗಳು ತುಪ್ಪ ಪೂರೈಕೆಗಾಗಿ ಎಆರ್ ಡೈರಿಯ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡರು.
ವೈಷ್ಣವಿ ಡೈರಿ ಸುಳ್ಳು ದಾಖಲೆಗಳು ಮತ್ತು ಸೀಲುಗಳನ್ನು ತಯಾರಿಸಿದೆ ಎಂದು ವರದಿ ಮಾಡಿದೆ.
ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಖರೀದಿಸಲಾಗಿದೆ ಎಂದು ವೈಷ್ಣವಿ ಡೈರಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ತನಿಖೆಯ ವೇಳೆ ತಿಳಿದುಬಂದಿದೆ.
ವರದಿಯ ಪ್ರಕಾರ, ಇಂದು ಆರೋಪಿಗಳನ್ನು ತಿರುಪತಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.