Do you know how many micro-finances there are in Bengaluru district?

ಬೆಂ.ಗ್ರಾ.ಜಿಲ್ಲೆಯಲ್ಲಿ ಎಷ್ಟು ಮೈಕ್ರೋ ಫೈನಾನ್ಸ್ ಗಳು ಗೊತ್ತಾ..? DC ಕೊಟ್ಟ ಖಡಕ್ ಸೂಚನೆ ಓದಿ

ಬೆಂ.ಗ್ರಾ.ಜಿಲ್ಲೆ: ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರು ಪಾವತಿಸಲು ವಿಳಂಬ ಮಾಡುವ ಸಾಲಗಾರರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ (DC) ಎ.ಬಿ ಬಸವರಾಜು ಅವರು ಮೈಕ್ರೋ ಫೈನಾನ್ಸ್ ( micro finances) ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ರಾಜ್ಯದಲ್ಲಿ ಸುದ್ದಿ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಸುಖಾಸುಮ್ಮನೆ ಸಾಲಗಾರರ ಮೇಲೆ ಆಪಾದನೆ, ಕಿರುಕುಳ, ದೌರ್ಜನ್ಯ, ಬೈಗುಳ, ಬೆದರಿಕೆ, ಮನೆ ಸೀಜ್ ಮಾಡುವುದು, ಬಲವಂತವಾಗಿ ವಸೂಲಿ ಮಾಡುವುದುನ್ನು ನಿಲ್ಲಿಸಬೇಕು. ಕಾನೂನು ಚೌಕಟ್ಟಿನಲ್ಲಿ ಮೈಕ್ರೋ ಫೈನಾನ್ಸ್ಗಳು ಕೆಲಸ ಮಾಡಬೇಕು.

ಸಾಮಾನ್ಯವಾಗಿ ಮಧ್ಯಮ ಹಾಗೂ ಕೆಳ ವರ್ಗದವರು ವೈದ್ಯಕೀಯ ಚಿಕಿತ್ಸೆ, ಮದುವೆ ಇನ್ನಿತರ ಕೆಲಸಗಳಿಗೆ ಸಾಲ ಪಡೆದಿರುತ್ತಾರೆ. ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಮ್ಮ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಆಗದಿರಲಿ ಎಂದರು.

ಜಿಲ್ಲೆಯಲ್ಲಿ 348 ಲೇವಾದೇವಿ, ಗಿರವಿ ಸಂಸ್ಥೆಗಳು

2025 ರ ಜನವರಿ ಅಂತ್ಯಕ್ಕೆ 348 ಸಂಸ್ಥೆಗಳು ನೋಂದಣಿಯಾಗಿದ್ದು. ಅದರಲ್ಲಿ 105 ಲೇವಾದೇವಿದಾರರು, 243 ಗಿರವೀದಾರರು ವ್ಯವಹಾರ ನಡೆಸುತ್ತಿದ್ದಾರೆ. ನೆಲಮಂಗಲ ತಾಲ್ಲೂಕಿನಲ್ಲಿ 27 ಲೇವಾದೇವಿ, 45 ಗಿರವಿ ಸಂಸ್ಥೆಗಳು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 45 ಲೇವಾದೇವಿ, 47 ಗಿರವಿ ಸಂಸ್ಥೆಗಳು, ದೇವನಹಳ್ಳಿ ತಾಲ್ಲೂಕಿನಲ್ಲಿ 16 ಲೇವಾದೇವಿ, 75 ಗಿರವಿ ಸಂಸ್ಥೆಗಳು, ಹೊಸಕೋಟೆಯಲ್ಲಿ 17 ಲೇವಾದೇವಿ ಹಾಗೂ 76 ಗಿರವಿ ಸಂಸ್ಥೆಗಳು ವ್ಯವಹಾರ ನಡೆಸುತ್ತಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 184 ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಅದರ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.

ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು.ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು

  • ಸಾಲ ಪಡೆಯಲು ಅರ್ಜಿ ಸಲ್ಲಿಸುವವರ ಆದಾಯದ ಸಾಮರ್ಥ್ಯ ಪರಿಶೀಲಿಸಬೇಕು. ಅವರ ಪ್ರತಿ ತಿಂಗಳು ಹಣ ಕಟ್ಟುವ ಸಾಮರ್ಥ್ಯ ಮೀರಿ ಸಾಲ ವಿತರಣೆ ಮಾಡಬಾರದು.
  • ಸಾಲ ಕೊಡುವಾಗ ಅವರ ಮಾಸಿಕ ವೇತನ ಹಾಗೂ ಆದಾಯದ ಮೂಲ ಆಧರಿಸಿ ನೀಡಬೇಕು. ಅತಿ ಹೆಚ್ಚು ಇ.ಎಂ.ಐ ಪಾವತಿಸಲು ಸೂಚಿಸಬಾರದು.
  • ಮಾಸಿಕ ಆದಾಯ ಅಥವಾ ವೇತನದ ಶೇಕಡ 50ಕ್ಕಿಂತ ಹೆಚ್ಚು ಇರಬಾರದು. ಸಂಜೆ 06 ರಿಂದ ಬೆಳಗ್ಗೆ 09 ರವರೆಗೆ ಸಾಲ ಹಿಂಪಡೆಯುವ ಯಾವುದೇ ಪ್ರಕ್ರಿಯೆಗಳನ್ನು ಮಾಡಬಾರದು.
  • ಬೆಳಗ್ಗೆ 9:00 ರಿಂದ ಸಂಜೆ 06 ರೆವರೆಗೆ ಮಾತ್ರ ಕರೆ ಮಾಡಬೇಕು. ಕರೆ ಮಾಡುವಾಗ ಬೆದರಿಕೆ ಹಾಕಬಾರದು. ಕೆಟ್ಟ ಪದಗಳನ್ನು ಬಳಸಿ ನಿಂದಿಸಬಾರದು.
  • ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರ ಸಂಬಂಧಿಕರು, ಸ್ನೇಹಿತರು, ಸಹೋದ್ಯೋಗಿಗಳ ಮೂಲಕ ಸಾಲ ವಾಪಸ್ ಗೆ ಕಿರುಕುಳ ಕೊಡುವಂತಿಲ್ಲ. ಸಾಲ ಪಡೆದ ವಿವರವನ್ನು ಗೌಪ್ಯವಾಗಿಡಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಬಹಿರಂಗವಾಗಿ ಪ್ರಚಾರ ಆಗುವಂತೆ ಸಾಲ ತೀರಿಸಲು ಕೇಳಬಾರದು ಅವರ ಕುಟುಂಬಕ್ಕೆ ಆಸ್ತಿಗೆ ಹಾನಿ ಮಾಡಬಾರದು ರೌಡಿಗಳನ್ನು ಗೂಂಡಗಳನ್ನು ಸಾಲ ವಸೂಲಾತಿಗೆ ಕಳುಹಿಸಬಾರದು.
  • ಮೈಕ್ರೋ ಫೈನಾನ್ಸ್ ಗಳು ಮೇಲಿನ ಸರ್ಕಾರದ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸಬೇಕು. ವ್ಯಕ್ತಿಯ ಗೌರವ, ಘನತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಿರಲಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಡಿವೈಎಸ್ಪಿ ರವಿ, ಸಹಕಾರ ಸಂಘಗಳ ಡೆಪ್ಯುಟಿ ರಿಜಿಸ್ಟ್ರಾರ್ ಚಂದ್ರಶೇಖರ್, ಸಹಾಯಕ ಡೆಪ್ಯುಟಿ ರಿಜಿಸ್ಟ್ರಾರ್ ರಾಮಾಂಜನೇಯ, ಲೀಡ್ ಬ್ಯಾಂಕ್ ಮ್ಯಾನೇಜರ್ ಮಧುಕರ್ ಸೇರಿದಂತೆ ಜಿಲ್ಲೆಯ ಲೇವಾದೇವಿ, ಗಿರವಿ ಸಂಸ್ಥೆಗಳ ಮುಖ್ಯಸ್ಥರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!