We must work hard to stop the war: Basavaraja Bommai

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ

ನವದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ ನಮ್ಮ ಇಡೀ ದೇಶ ಹಾಗೂ ವ್ಯವಸ್ಥೆಯನ್ನೇ ಚಾಲೆಂಜ್ ಮಾಡುವ ರೀತಿ ಕಾರ್ಯ ಚಟುವಟಿಕೆ ಮಾಡುತ್ತಿವೆ.

ಪಿಎಫ್ ಐ ನಿಷೇಧ ಆಗಿದೆ. ಆದರೂ ಕೂಡ ಆ ಸಂಸ್ಥೆಯ ಕಾರ್ಯಕರ್ತರು ಬೇರೆ ಬೇರೆ ಹೆಸರಿನಲ್ಲಿ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ ಎಂದರು.

ಮಂಗಳೂರು, ಕೆಜಿ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆಗಳಿಗೂ ಮೈಸೂರಿನಲ್ಲಿ ನಡೆದ ಘಟನೆಗೂ ಸಾಮ್ಯತೆ ಇದೆ. ನಮ್ಮ ಸರ್ಕಾರ ಇದ್ದಾಗ ಕಠಿಣ ಕ್ರಮ ಕೈಗೊಂಡು ಹಲವಾರು ಜನರನ್ನು ಜೈಲಿಗೆ ಹಾಕಿದ್ದೇವು.

ಈ ಸರ್ಕಾರ ಬಂದ ಮೇಲೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ ಭಾಗಿಯಾದವರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆದು ಅವರೆಲ್ಲರೂ ಅಮಾಯಕರು ಎಂದು ಹೇಳಿದರು.

ಅವರು ಮಾಡಿದ ಘಟನೆಯ ವಿಡಿಯೊ ಸಿಸಿ ಟಿವಿಯಲ್ಲಿ ಸಿಕ್ಕರೂ ಅವರನ್ನು ಅಮಾಯಕರು ಎಂದರು. .ಅದರಿಂದ ಪ್ರೇರಣೆಗೊಂಡು ಈಗ ಮತ್ತೆ ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ದಾಳಿ, ಪೊಲಿಸ್ ವಾಹನದ ಮೇಲೆ ದಾಳಿ ಮಾಡಿದ್ದಾರೆ.

ಇದರಿಂದ ಪೊಲಿಸ್ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ, ಡಿಸಿಪಿ ಕಾರ್ ಮೇಲೂ ದಾಳಿ ಮಾಡುವಷ್ಟು ಧೈರ್ಯ ಬಂದಿದೆ.

ಈ ಧೈರ್ಯ ಎಲ್ಲಿಂದ ಬಂತು. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ, ರಾಜಕಾರಣಿಗಳ ಕುಮ್ಮಕ್ಕಿನಿಂದ ಈ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ ಎಂದು ಆರೋಪಿಸಿದರು.

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿಯೇ ಆಗಿದೆ. ಮುಖ್ಯಮಂತ್ರಿ ಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು.

ಅವರು ಯಾವಾಗಲೂ ಸಂವಿಧಾನ, ರೂಲ್ ಆಫ್ ಲಾ ಅಂತ ಹೇಳುತ್ತಾರೆ. ಇವತ್ತು ರೂಲ್ ಆಫ್ ಲಾ ಪ್ರಕಾರ ಕ್ರಮ ಕೈಗೊಳ್ಳುತ್ತಾರಾ ? ಅಥವಾ ತುಷ್ಡೀಕರಣಕ್ಕಾಗಿ ಸುಮ್ಮನಾಗುತ್ತಾರೊ ಎನ್ನುವುದನ್ನು ಜನರು ನೋಡುತ್ತಾರೆ.

ಇವರು ಸಂವಿಧಾನ ಬದ್ದವಾಗಿ ಆಡಳಿತ ಮಾಡುತ್ತಾರೊ ಅಥವಾ ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೊ ಎನ್ನುವನ್ನುದನ್ನು ನೋಡಿ ಜನರು ಮುಂದಿನ ತೀರ್ಮಾನ ಮಾಡುತ್ತಾರೆ‌.

ಘಟನೆಯ ವಿಡಿಯೊವನ್ನು ಇಡಿ ಜಗತ್ತೇ ನೋಡಿದರು ಕಾಂಗ್ರೆಸ್ ನವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆಂದರೆ ಅವರು ಎಷ್ಟು ಭಂಡತನಕ್ಕೆ ಬಿದ್ದಿದ್ದಾರೆ ನೋಡಿ ಎಂದರು.

ಹೈಕಮಾಂಡ್ ತೀರ್ಮಾನ ಅಂತಿಮ

ರಾಜ್ಯದ ಬಿಜೆಪಿ ಗೊಂದಲ ಬಗೆ ಹರಿಸಲು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನಾವು ಅದಕ್ಕೆ ಬದ್ದರಾಗಿದ್ದೇವೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಏನು ನೊಟಿಸ್ ಬಂದಿದೆ. ಅದಕ್ಕೆ ಅವರು ಏನು ಉತ್ತರ ಕೊಟ್ಟಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ.

ಆದರೆ, ಅಂತಿಮವಾಗಿ ಹೈಕಮಾಂಡ್ ಪ್ರವೇಶ ಮಾಡಿರುವುದರಿಂದ ಇದು ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ಮುಗಿಯುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!