Bengaluru shines as beacon of India’s future: Rajnath Singh

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದ್ದಾರೆ.

ಈ ಮೆಚ್ಚುಗೆಯ ಮಾತು ಮತ್ತು ಅದಮ್ಯ ಭರವಸೆಯ ಮೂಲಕ ಅವರು ಮಂಗಳವಾರ ಇಲ್ಲಿ `ಜಾಗತಿಕ ಹೂಡಿಕೆದಾರರ ಸಮಾವೇಶ’ವಾದ ಇನ್ವೆಸ್ಟ್ ಕರ್ನಾಟಕ-2025ಕ್ಕೆ (GIM Invest Karnatka 25) ಚಾಲನೆ ನೀಡಿ ಮಾತನಾಡಿದರು.

ಹೂಡಿಕೆದಾರರು ಬೆಂಗಳೂರಿನಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದರು.

ಫೆ.14ರವರೆಗೆ ನಡೆಯಲಿರುವ ಸಮಾವೇಶದಲ್ಲಿ ಜಗತ್ತಿನ ನಾನಾ ಭಾಗಗಳ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ.

ಇಲ್ಲಿರುವ ಶಕ್ತಿ, ಮಹತ್ತ್ವಾಕಾಂಕ್ಷೆ ಮತ್ತು ಇಲ್ಲಿ ನಡೆಯುತ್ತಿರುವ ನಿರ್ಣಾಯಕ ಕೆಲಸಗಳು ದೇಶವನ್ನು ಎತ್ತರಕ್ಕೆ ಕೊಂಡೊಯ್ಯುತ್ತಿವೆ. ಇಲ್ಲಿಂದ ಸದ್ಯದಲ್ಲೇ ಕೃತಕ ಬುದ್ಧಿಮತ್ತೆ ಕ್ಷೇತ್ರದ ಪ್ರಪ್ರಥಮ ಮಾದರಿ ಕೂಡ ಹೊರಬರಲಿದೆ. ಇದಕ್ಕೆಲ್ಲ ಇಲ್ಲಿರುವ ಮಾನವ ಸಂಪನ್ಮೂಲ ಮತ್ತು ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾರುಕಟ್ಟೆ ಆಧರಿತ ಆರ್ಥಿಕತೆ ಮಾತ್ರ ಸುಸ್ಥಿರ ಆರ್ಥಿಕತೆಯನ್ನು ಸೃಷ್ಟಿಸಬಲ್ಲದು. ಇದು ಸಾಧ್ಯವಾಗಬೇಕೆಂದರೆ ಖಾಸಗಿ ಉದ್ಯಮಿಗಳು ಬಹಳ ಮುಖ್ಯ. ಹಿಂದೆ ಹೂಡಿಕೆದಾರರಿಗೆ ಕೆಂಪುಪಟ್ಟಿಯ ತೊಂದರೆ ಎದುರಾಗುತ್ತಿತ್ತು, ಆದರೆ ಈಗ ರತ್ನಗಂಬಳಿಯ ಸ್ವಾಗತ ಸಿಗುತ್ತಿದೆ.

ಭಾರತವು ಜಗತ್ತಿನ ಅತಿದೊಡ್ಡ ಮಾರುಕಟ್ಟೆಯಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸರಕಾರದಿಂದ ಪ್ರಮುಖ ನಿರ್ಧಾರಗಳೂ ಹೊರಬರುತ್ತಿವೆ.

ಬೆಂಗಳೂರಿನ ನಿರ್ಣಾಯಕ ಪಾತ್ರದಿಂದ ಭಾರತವು ವೈಮಾಂತರಿಕ್ಷ ಕ್ಷೇತ್ರದಲ್ಲೂ ಅಸಾಧಾರಣ ಸಾಧನೆಗಳನ್ನು ಮಾಡುತ್ತಿದೆ ಎಂದು ರಾಜನಾಥ್ ಶ್ಲಾಘಿಸಿದ್ದಾರೆ.

1 ಲಕ್ಷ ಕೋಟಿ ರೂ. ಹೂಡಿಕೆ: ಸಜ್ಜನ್ ಜಿಂದಾಲ್

ತಮ್ಮ ನೇತೃತ್ವದ ಜಿಂದಾಲ್ ಸಮೂಹವು ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಒಟ್ಟು 1 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ತೊಡಗಿಸಲಿದೆ.

ಇದರಲ್ಲಿ ಉಕ್ಕು ಉತ್ಪಾದನೆ ವಲಯದಲ್ಲಿ 45 ಸಾವಿರ ಕೋಟಿ ರೂ. ಮತ್ತು ಆತಿಥ್ಯೋದ್ಯಮ, ಸೌರವಿದ್ಯುತ್, ಪರಿಸರಸ್ನೇಹಿ ಇಂಧನ ಮತ್ತು ಗ್ರೀನ್ ಹೈಡ್ರೋಜನ್ ಕ್ಷೇತ್ರಗಳಲ್ಲಿ 56 ಸಾವಿರ ಕೋಟಿ ರೂ. ಹೂಡಲಾಗುವುದು ಎಂದು ಉದ್ಯಮಿ ಸಜ್ಜನ್ ಜಿಂದಾಲ್ ಹೇಳಿದರು.

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ

ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು.

ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ.

ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು.

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ ಹೋಗಿದ್ದವು. ಇದರಿಂದ ಎಲ್ಲವೂ ಮಂದಗತಿಗೆ ಸಿಲುಕಿ ಸ್ತಬ್ಧವಾಗುತ್ತಿದ್ದವು.

ಈಗ ರಾಜ್ಯ ಸರಕಾರದ 30 ಇಲಾಖೆಗಳ ಎಲ್ಲ ಸೇವೆಗಳನ್ನೂ ಒಂದೆಡೆ ತರಲಾಗಿದೆ. ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ವಿನ್ಯಾಸಗೊಳಿಸಿರುವ ಚಾಟ್-ಬಾಟ್ ಸೌಲಭ್ಯದಲ್ಲಿ ಉದ್ಯಮಿಗಳು ತಮಗೆ ಬೇಕಾದ ಸೇವೆ/ಮಾಹಿತಿಗಳನ್ನು ತಮ್ಮ ಇಷ್ಟದ ಭಾಷೆಯಲ್ಲಿ ಬೆರಳತುದಿಯಲ್ಲೇ ಪಡೆದುಕೊಳ್ಳಬಹುದು.

ಈ ಸೇವೆಗಳು ಮೊಬೈಲಿನಲ್ಲಿ ಕೂಡ ಸಿಗಲಿವೆ ಎಂದು ವಿವರಿಸಿದ್ದಾರೆ.

ಈ ಏಕಗವಾಕ್ಷಿ ವ್ಯವಸ್ಥೆಯಡಿ `ಕರ್ನಾಟಕ ಉದ್ಯೋಗ ಮಿತ್ರ’ದ ಮೂಲಕ ಹೂಡಿಕೆದಾರರಿಗೆ ಪ್ರಮಾಣಪತ್ರ ಆಧರಿತ ಅನುಮೋದನೆ (ಎಬಿಸಿ) ನೀಡಲಾಗುವುದು.

ಹೀಗಾಗಿ ಉದ್ಯಮಿಗಳು  ಅನುಮೋದನೆಗಳಿಗೆ ಕಾಯದೆ, ತಕ್ಷಣವೇ ಕಟ್ಟಡ ಕಾಮಗಾರಿ ಮತ್ತು ಇತರೆ ಸಿದ್ಧತೆ ಆರಂಭಿಸಬಹುದು. ಈ ವ್ಯವಸ್ಥೆಯನ್ನು ರಾಷ್ಟ್ರ ಮಟ್ಟದ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಬೆಸೆಯಲಾಗಿದೆ.

ಈ ಪೋರ್ಟಲ್ಲಿನಲ್ಲಿ ಕೈಗಾರಿಕೆಗೆ ಬೇಕಾದ ಭೂಮಿಯ ಹುಡುಕಾಟ, ಮಂಜೂರಾತಿ, ಕಟ್ಟಡ ನಕಾಶೆಗೆ ಅನುಮೋದನೆ ಮುಂತಾದ ಕೆಐಎಡಿಬಿ ಸೇವೆಗಳೂ ಸಿಗಲಿವೆ ಎಂದು ಅವರು ನುಡಿದಿದ್ದಾರೆ.

ಹೊಸ ವ್ಯವಸ್ಥೆಯಲ್ಲಿ ಜಿಐಎಸ್ ಆಧರಿತ ಕೈಗಾರಿಕಾ ಮಾಹಿತಿಯನ್ನೂ ಒದಗಿಸಲಾಗುವುದು. ಹೀಗಾಗಿ ಕೈಗಾರಿಕೆಗೆ ತಮ್ಮ ಸ್ವಂತ ಅಥವಾ ಕಂದಾಯ ಭೂಮಿಯನ್ನು ಉಪಯೋಗಿಸಿಕೊಳ್ಳುವವರಿಗೆ ಅನುಕೂಲವಾಗಲಿದೆ. 

ನಿರಾಕ್ಷೇಪಣಾ ಪತ್ರ ಇತ್ಯಾದಿಗಳಿಗೆ ವಿಝರ್ಡ್ ತಂತ್ರಜ್ಞಾನವನ್ನುಳ್ಳ ಸಾಧನ ಇದರಲ್ಲಿದೆ. ಹಾಗೆಯೇ, ಉದ್ಯಮಿಗಳು ತಮಗೆ ಸಿಗಲಿರುವ ಪ್ರೋತ್ಸಾಹನಾ ಭತ್ಯೆ, ರಿಯಾಯಿತಿ ಮತ್ತು ವಿನಾಯಿತಿಗಳನ್ನು `ವಿಝರ್ಡ್ ಮತ್ತು ಕ್ಯಾಲ್ಕ್ಯುಲೇಟರ್’ ಮೂಲಕ ತಿಳಿದುಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

12 ವಿಶೇಷ ಹೂಡಿಕೆ ವಲಯ ಸ್ಥಾಪನೆ

ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು.

ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ’ ಎಂದರು.

ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ.

ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ.

ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದೀಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಸಲು 3,800 ಕೋಟಿ ರೂ. ಮೊತ್ತದ ಬೃಹತ್ ಯೋಜನೆ ರೂಪಿಸಲಾಗಿದೆ ಎಂದು ಅವರು ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಚೀನಾದಿಂದ ತೀವ್ರ ಸವಾಲು ಎದುರಾಗಿದ್ದು, ತಯಾರಿಕೆ ವಲಯದ ಚಿತ್ರಣವೇ ಬದಲಾಗಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಜಾಗತಿಕ ಅಸ್ಥಿರತೆಯ ಸಮಸ್ಯೆಯೂ ಇದೆ.

ಸರಕಾರವು ಪ್ರಗತಿಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ತಯಾರಿಕೆ ಮತ್ತು ನಾವೀನ್ಯತೆಯ ತೊಟ್ಟಿಲನ್ನಾಗಿ ಪ್ರತಿಷ್ಠಾಪಿಸಲಿದೆ ಎಂದರು.

ತಂತ್ರಜ್ಞಾನದ ಬಳಕೆ, ಹೂಡಿಕೆ ಆಕರ್ಷಣೆ ಮತ್ತು ಸ್ಪರ್ಧಾತ್ಮಕ ಉದ್ಯಮಗಳ ಸ್ಥಾಪನೆಯೇ ಭವಿಷ್ಯದ ಆರ್ಥಿಕ ಬೆಳವಣಿಗೆಯ ನಿರ್ಣಾಯಕ ಶಕ್ತಿಗಳಾಗಿವೆ. ಇದಕ್ಕಾಗಿ ಕೈಗಾರಿಕಾ ರಂಗದಲ್ಲಿ ಡಿಜಿಟಲ್ ಪರಿವರ್ತನೆಯನ್ನು ಅಳವಡಿಸಿ ಕೊಳ್ಳಲಾಗುತ್ತಿದೆ.

ಜತೆಗೆ ಇಂಗಾಲವನ್ನು ಕಡಿಮೆ ಹೊರಸೂಸುವ ಹಾಗೂ ಪರಿಸರಸ್ನೇಹಿ ಉಪಕ್ರಮಗಳಿಗೂ ಗಮನ ಹರಿಸಲಾಗಿದೆ. 55 ಲಕ್ಷ ಜನರಿಗೆ ಉದ್ಯೋಗ ನೀಡಿರುವ 8 ಲಕ್ಷ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ವಿಶೇಷ ಒತ್ತು ಕೊಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ/ತಾಲ್ಲೂಕಿಗೆ ಒತ್ತು

ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು.

ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ ದೇಶಕ್ಕೆ ನಂಬರ್ ಒನ್ ಆಗಿ ಪ್ರತಿಷ್ಠಾಪಿಸುವ ಹೆಗ್ಗುರಿಗಳನ್ನು ಹೊಂದಿದೆ.

ಇದನ್ನೆಲ್ಲ ಸಾಧಿಸಲು ಬೆಂಗಳೂರಿನ ಆಚೆಗೆ ಹಾಗೂ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆ/ತಾಲ್ಲೂಕುಗಳಿಗೆ ಆದ್ಯತೆ ಕೊಡಲಾಗಿದೆ. ಇದಕ್ಕಾಗಿ ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡಲಾಗುವುದು ಎಂದು ಹೊಸ‌ ನೀತಿಯಲ್ಲಿ ತಿಳಿಸಲಾಗಿದೆ.

ಹೊಸ‌‌ ನೀತಿಯಲ್ಲಿ ಅಂಶಗಳನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ವಿವರಿಸಿದ್ದಾರೆ.

ಈ ನೀತಿಯಲ್ಲಿ ಡಿಎಂ ನಂಜುಂಡಪ್ಪ ವರದಿ ಆಧರಿಸಿ ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲ್ಲೂಕುಗಳನ್ನು ಝೋನ್-1 ಮತ್ತು 2ರಡಿ ತರಲಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು `ಝೋನ್-3’ ಎಂದು ಗುರುತಿಸಲಾಗಿದೆ.

ಉದ್ಯಮಗಳ ಸಾಮರ್ಥ್ಯ ಮತ್ತು ಬೆಳವಣಿಗೆ ನಿಚ್ಚಳತೆಗೆ ಅನುಗುಣವಾಗಿ ವಲಯಗಳನ್ನಾಗಿ ಮಾಡಿದ್ದು, ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಉದ್ಯೋಗಸೃಷ್ಟಿಗೆ ಆದ್ಯತೆ ಇರುವಂತೆ ಎಚ್ಚರ ವಹಿಸಲಾಗಿದೆ ಎಂದು ಪಾಟೀಲ ಅವರು ನುಡಿದಿದ್ದಾರೆ.

ಹೈಟೆಕ್ ತಯಾರಿಕೆ ವಲಯದಲ್ಲಿ ರಾಜ್ಯವನ್ನು ದೇಶದಲ್ಲೇ ಪ್ರಥಮ ಸ್ಥಾನಕ್ಕೆ ಏರುವಂತೆ ಮಾಡಲಾಗುವುದು. ಜೊತೆಗೆ ಸುಸ್ಥಿರ, ಪರಿಸರಸ್ನೇಹಿ, ಸಮತೋಲಿತ ಮತ್ತು ಎಲ್ಲರನ್ನೂ ಒಳಗೊಳ್ಳಲಿರುವ ಪ್ರಾದೇಶಿಕ ಬೆಳವಣಿಗೆಯನ್ನು ಉತ್ತೇಜಿಸಲಾಗುವುದು.

ಕೈಗಾರಿಕಾ ಕ್ಷೇತ್ರದಲ್ಲಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದ ಮೂಲಕ ವಿಶ್ವ ದರ್ಜೆಯ ಮೂಲಸೌಕರ್ಯ ಅಭಿವೃದ್ಧಿ ಪಡಿಸುವಂತಹ ವ್ಯವಸ್ಥೆ ಮುಂದೆ ಬರಲಿದೆ. ಭಾರೀ ಹೂಡಿಕೆ ಇರುವ ಕೈಗಾರಿಕಾ ಯೋಜನಗೆಳ ವ್ಯಾಪ್ತಿಯಲ್ಲಿ ಡಾರ್ಮಿಟರಿ ಮತ್ತು ವಸತಿ ವ್ಯವಸ್ಥೆಗೆ ಸರಕಾರ ಕೈಜೋಡಿಸಲಿದೆ ಎಂದು ಅವರು ವಿವರಿಸಿದ್ದಾರೆ.

ಸಂಶೋಧನೆ ಮತ್ತು ಎಂಎಸ್ಎಂಇಗೆ ಗಮನ

ನೂತನ ಕೈಗಾರಿಕಾ ನೀತಿಯಲ್ಲಿ ಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿ, ನಾವೀನ್ಯತೆಯ ಅಭಿವೃದ್ಧಿಗೆ ಕ್ವಿನ್ ಸಿಟಿಯನ್ನು ಅಭಿವೃದ್ಧಿ ಪಡಿಸಲಾಗುವುದು.

ಕೆಐಎಡಿಬಿ ಮೂಲಕ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಶೇಕಡ 30ರಷ್ಟು ಜಾಗವನ್ನು ಮೀಸಲಿಟ್ಟು, ತಂತ್ರಜ್ಞಾನದ ಉನ್ನತೀಕರಣ, ಕೌಶಲ್ಯಾಭಿವೃದ್ಧಿ, ಉತ್ಕೃಷ್ಟತಾ ಪುರಸ್ಕಾರ, ಕ್ಲಸ್ಟರ್ಸ್ ಅಭಿವೃದ್ಧಿ, ಆಕರ್ಷಕ ಪ್ರೋತ್ಸಾಹನಾ ಭತ್ಯೆ ಮತ್ತು ರಿಯಾಯಿತಿಗಳಿಗೆ ಗಮನ  ಹರಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ನುಡಿದರು.

ಕೆಲವು ಪ್ರದೇಶಗಳನ್ನು `ವಿಶೇಷ ಹೂಡಿಕೆ ಪ್ರದೇಶ’ (ಸ್ಪೆಷಲ್ ಇನ್ವೆಸ್ಟ್ಮೆಂಟ್ ರೀಜನ್) ಆಗಿ ಘೋಷಿಸಿ, ಉದ್ಯಮಗಳ ಆರ್ & ಡಿ ವಿಭಾಗ ಮತ್ತು ಉತ್ಪಾದನಾ ಘಟಕಗಳು ಒಂದೇ ಕಡೆ ಇರುವುದನ್ನು ಉತ್ತೇಜಿಸಲಾಗುವುದು.

ಹೂಡಿಕೆದಾರರು ತಮ್ಮ ಕೇಪೆಕ್ಸ್ ಸಬ್ಸಿಡಿ ಅಥವಾ ಉತ್ಪಾದನೆ ಆಧರಿತ ಪ್ರೋತ್ಸಾಹನಾ ಭತ್ಯೆ ನಡುವೆ ತಮಗೆ ಯಾವುದು ಅನುಕೂಲವೋ ಅದನ್ನು ಆರಿಸಿಕೊಳ್ಳಲು ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಖಾಸಗಿ ಕೈಗಾರಿಕಾ ಪ್ರದೇಶಗಳಿಗೂ ಅವಕಾಶ

ನೂತನ ಕೈಗಾರಿಕಾ ನೀತಿಯಡಿಯಲ್ಲಿ ಖಾಸಗಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೂ ಅವಕಾಶ ಇರಲಿದೆ. ಇದರಂತೆ ಸಮಗ್ರ ಕೈಗಾರಿಕಾ ಪಾರ್ಕ್, ವಲಯವಾರು ಪಾರ್ಕ್, ಲಾಜಿಸ್ಟಿಕ್ಸ್ ಪಾರ್ಕ್ ಇತ್ಯಾದಿಗಳ ಅಭಿವೃದ್ಧಿ ಮಾಡಲಾಗುವುದು.

ಜತೆಗೆ ಕೈಗಾರಿಕಾ ಪ್ರದೇಶಗಳ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಈಗಿರುವ ನಿರ್ಬಂಧಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶ ಎರಡರಲ್ಲೂ ತೆಗೆದು ಹಾಕಲಾಗುವುದು. ಜತೆಗೆ ನೇರ ಉದ್ಯೋಗ ಸೃಷ್ಟಿಗೆ ನೀತಿಯು ಒತ್ತು ಕೊಟ್ಟಿದೆ.

ಹಿಂದುಳಿದ ಜಿಲ್ಲೆ/ತಾಲ್ಲೂಕಿಗೆ ರಿಯಾಯಿತಿ/ಭತ್ಯೆ

ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲ್ಲೂಕುಗಳಲ್ಲಿ ಹೂಡಿಕೆ ಮಾಡಿ, ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ನೂತನ ಕೈಗಾರಿಕಾ ನೀತಿಯಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು. ಅವು ಹೀಗಿವೆ.

  • ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಶೇ 10ರಿಂದ 30ರಷ್ಟು ಕ್ಯಾಪಿಟಲ್ ಸಬ್ಸಿಡಿ
  • ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿನಾಯಿತಿ
  • ಭೂ ಪರಿವರ್ತನೆ ಶುಲ್ಕ ವಾಪಸ್
  • ಎಂಎಸ್ಎಂಇಗಳಿಗೆ ವಿದ್ಯುತ್ ಬಿಲ್ ಮೇಲಿನ ತೆರಿಗೆಯಿಂದ ವಿನಾಯಿತಿ
  • ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳಿಗೆ ವಿದ್ಯುತ್ ಸಬ್ಸಿಡಿ
  • ಮಳೆ ನೀರು ಸಂಸ್ಕರಣೆ ಮತ್ತು ತ್ಯಾಜ್ಯ ನೀರು ಮರುಪೂರಣಕ್ಕೆ ಪ್ರೋತ್ಸಾಹನ ಭತ್ಯೆ
  • ತ್ಯಾಜ್ಯ ಸಂಸ್ಕರಣೆ ಘಟಕ ಸ್ಥಾಪನೆಗೆ ಪ್ರೋತ್ಸಾಹನ ಭತ್ಯೆ

ಮೆಗಾ ಯೋಜನೆಗಳಿಗೆ ಸಿಗುವ ಸೌಲಭ್ಯ

  • ಪಿಎಲ್ಐ ಅಥವಾ ವಿಎಫ್ಎನ ಶೇ 10ರಿಂದ 25ರಷ್ಟು ಬಂಡವಾಳ ವೆಚ್ಚ ಸಬ್ಸಿಡಿ
  • ನಂಜುಂಡಪ್ಪ ವರದಿಯಲ್ಲಿ ಗುರುತಿಸಿರುವ ಹಿಂದುಳಿದ ಮತ್ತು ಅತೀ ಹಿಂದುಳಿದ ತಾಲ್ಲೂಕುಗಳಲ್ಲಿನ ಹೂಡಿಕೆಗೆ ಕ್ರಮವಾಗಿ ಶೇಕಡ 3 ಮತ್ತು ಶೇಕಡ 5ರಷ್ಟು ಹೆಚ್ಚುವರಿ ಸಬ್ಸಿಡಿ
  • ಖಾಸಗಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಗೆ ಪ್ರೋತ್ಸಾಹನ ಭತ್ಯೆ ಮತ್ತು ರಿಯಾಯಿತಿ
  • ಉದ್ಯೋಗಸೃಷ್ಟಿ ಮತ್ತು ಮಹಿಳಾ ಉದ್ಯೋಗಿಗಳ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಸಬ್ಸಿಡಿ
  • ಆರ್ & ಡಿ ಜತೆಗೆ ಉತ್ಪಾದನಾ ಘಟಕ ಸ್ಥಾಪನೆಗೆ ಉತ್ತೇಜನ
  • ಮುದ್ರಾಂಕ ಮತ್ತು ನೋಂದಣಿ ಶುಲ್ಕದಿಂದ ವಿನಾಯಿತಿ
  • ಭೂ ಪರಿವರ್ತನೆ ಶುಲ್ಕ ವಾಪಸ್.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!