AeroIndia2025 has created a new milestone in defense products: Defense Minister Rajnath Singh

AeroIndia2025 ಯಲಹಂಕದಲ್ಲಿ ಕಣ್ಮನ ಸೆಳೆದ ವೈಮಾನಿಕ ಪ್ರದರ್ಶನ| Video

ಯಲಹಂಕ (AeroIndia2025): ರಕ್ಷಣಾ ಉತ್ಪನ್ನಗಳನ್ನು ದೇಶೀಯವಾಗಿ ನಾವೇ ಉತ್ಪಾದನೆ ಮಾಡುತ್ತಿದ್ದು, ಹೊಸ ಮೈಲಿಗಲ್ಲನ್ನೇ ಸೃಷ್ಟಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.

ಇಂದು ಯಲಹಂಕದ ವಾಯು ನೆಲೆಯಲ್ಲಿ ಆಯೋಜಿಸಿದ್ದ ಏರೋ ಇಂಡಿಯಾ – 2025ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು‌

ಒಂದು ದಶಕದ ಹಿಂದೆ ಶೇಕಡ 65-70 ರಷ್ಟು ರಕ್ಷಣಾ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದ್ದು, ಈಗ ನಾವೇ ಶೇಕಡ 65-70 ರಷ್ಟು ಉತ್ಪನ್ನಗಳನ್ನು ದೇಶೀಯವಾಗಿ ಉತ್ಪಾದಿಸುತ್ತಿದ್ದೇವೆ. ಪ್ರಧಾನಿಗಳ ಆತ್ಮನಿರ್ಭರ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದೇವೆ ಎಂದು ತಿಳಿಸಿದರು.

ಸ್ಪೂರ್ತಿ ನೀಡಿದ ಏರೋ ಇಂಡಿಯಾ – 2025

ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾದ ಏರೋ ಇಂಡಿಯಾ – 2025 ಅಗಾಧ ಶಕ್ತಿ ಹಾಗೂ ಸ್ಫೂರ್ತಿಯನ್ನು ತಂದಿದೆ. ಇದರಿಂದ ಉದ್ದಿಮೆಗಳು, ಸ್ಟಾರ್ಟ್ ಆಪ್ ಕಂಪನಿಗಳು ಮುಂತಾದವುಗಳಿಗೆ ಪ್ರೋತ್ಸಾಹ ದೊರೆತಂತಾಗಿದೆ ಎಂದರು.

ರಕ್ಷಣಾ ಉತ್ಪನ್ನಗಳನ್ನು ಇದೀಗ ವಿದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಈ ವಲಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಾವು ಇನ್ನೂ ಹೆಚ್ಚು ಸಾಧನೆ ಮಾಡಬೇಕಿದೆ.

ಹೆಚ್ಚು ಜನ ಭಾಗೀದಾರರನ್ನು ಆಕಷಿಸುವಂತೆ ನಾವು ಮುನ್ನಡೆಯಬೇಕು. ದೇಶದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ದೇಶ ಕಾಯುವ ಸೈನಿಕರನ್ನು ನಾವು ಸಶಕ್ತಿಕರಣಗೊಳಿಸಬೇಕು ಎಂದು ತಿಳಿಸಿದರು.

ನಾವು ಜಾಗತೀಕ ನಾಯಕ ಪಟ್ಟ ಏರಲಿದ್ದೇವೆ

ಏರೋ ಇಂಡಿಯಾ – 2025 ಹಲವು ಕಂಪನಿಗಳು, ಪ್ರಮುಖ ಸಂಸ್ಥೆಗಳು, ಕೈಗಾರಿಕೆಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದೆ. ವಿವಿಧ ರಕ್ಷಣಾ ಸಚಿವರ, ವಿವಿಧ ಕಂಪನಿ ಮುಖ್ಯಸ್ಥರ ಸಮಾವೇಶಗಳು ಇದಕ್ಕೆ ಹೊಸ ಆಯಾಮ ನೀಡಿದೆ. ಆದರೂ ನಾವು ಮಾಡಬೇಕಾದ ಕೆಲಸ ಬಹಳಷ್ಟಿದೆ.

ಇಲ್ಲಿ ಹಲವು ದೇಶಗಳು, ಪ್ರದರ್ಶಕರು, ಗಣ್ಯರುಗಳು ಭಾಗವಹಿಸಿ ಸಮಾವೇಶಕ್ಕೆ ಮೆರಗು ನೀಡಿದ್ದಾರೆ. ಇದರಿಂದ ನಮ್ಮ ಸಾಮರ್ಥ್ಯವನ್ನು ದೇಶ ವಿದೇಶಗಳ ಎದರು ತೋರಿಸಿದಂತಾಗಿದೆ. ಇದರಿಂದ ನಾವು ಜಾಗತೀಕ ನಾಯಕ ಪಟ್ಟ ಏರುವುದರಲ್ಲಿ ಸಂಶಯವಿಲ್ಲ ಎಂದರು.

ಕಣ್ಮನ ಸೆಳೆದ ವೈಮಾನಿಕ ಪ್ರದರ್ಶನ

ಏರೋ ಇಂಡಿಯಾ – 2025 ರಲ್ಲಿ ಪ್ರದರ್ಶನ ನೀಡಿದ ವೈಮಾನಿಕ ವಿಮಾನಗಳು ಎಲ್ಲರ ಕಣ್ಮನ ಸೆಳೆದವು. ವೈಯಕ್ತಿವಾಗಿ ನನಗೆ ಬಹಳ ಹುರುಪು ನೀಡಿದೆ. ಇಸ್ರೋ, ಹೆಚ್.ಎ.ಎಲ್, ಡಿ.ಆರ್.ಡಿ.ಓ ಮುಂತಾದ ಸಂಸ್ಥೆಗಳ ಸಹಕಾರದಿಂದ ನಾವು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುತ್ತೇವೆ ಎಂಬುವುದರಲ್ಲಿ ಸಂಶವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ರಾಜ್ಯ ಮಂತ್ರಿಗಳಾದ ಸಂಜಯ್ ಸೇಠ್, ಕೇಂದ್ರ ರಕ್ಷಣಾ ಇಲಾಖೆ (ಉತ್ಪಾದನೆ) ಕಾರ್ಯದರ್ಶಿಗಳಾದ ಸಂಜೀವ್ ಕುಮಾರ್, ನೌಕಪಡೆ ಮುಖ್ಯಸ್ಥರಾದ ಅಡ್ಮೀರಲ್ ದಿನೇಶ್ ಕೆ. ತ್ರಿಪಾತಿ.

ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಅನಿಲ್ ಚವ್ಹಾಣ, ಸೇನಾ ಸಿಬ್ಬಂದಿ ಮುಖ್ಯಸ್ಥರಾದ ಉಪೇಂದ್ರ ದ್ವಿವೇದಿ, ಕರ್ನಾಟಕ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿಗಳಾದ ಎನ್. ಮಂಜುಳ ಸೇರಿದಂತೆ ರಕ್ಷಣ ಪಡೆ, ನೌಕಪಡೆ, ವಾಯುಪಡೆಯ ಅಧಿಕಾರಿಗಳು, ವಿವಿಧ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!