Commission orders to issue purchase order to Golden Homes Builders for breach of contract

ಕೋರ್ಟ್ ಸುದ್ದಿ: ತಿಳಿಯದೇ ಅಪರಾಧಿಗೆ ಆಶ್ರಯ ನೀಡಿದ್ದಾಗ ಅಪರಾಧವಲ್ಲ..!

ಬೆಂಗಳೂರು: ಕೊಲೆ (Murder) ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ (Life imprisonment) ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ.

ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮದ ಉದಯ್ ಕುಮಾರ್ ಶೆಟ್ಟಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ಪ್ರಕಟಿಸಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಐಪಿಸಿ ಸೆಕ್ಷನ್ 216 ರ (ಅಪರಾಧಿಗೆ ಉದ್ದೇಶಪೂರ್ವಕವಾಗಿ ಆಶ್ರಯ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಬೇಕಾದರೆ ಆಶ್ರಯ ನೀಡಿದ ವ್ಯಕ್ತಿಗೆ ಅಪರಾಧಿಯು ಶಿಕ್ಷೆಗೆ ಗುರಿಯಾಗಿರುವುದರ ಸಂಪೂರ್ಣ ಮಾಹಿತಿ ಇರಬೇಕು.

ಉದ್ದೇಶಪೂರ್ವಕವಾಗಿ ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸುವಂತಹ ಅಂಶಗಳಿರಬೇಕು ಮತ್ತು ಅದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳಿರಬೇಕು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಮೊಬೈಲ್ ಫೋನ್ ದಾಖಲೆಗಳು ಲಭ್ಯವಾಗಿವೆ.

ಅದರಂತೆ ಉದ್ದೇಶಪೂರ್ವಕವಾಗಿ ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಸೂಚಿಸುವ ಯಾವುದೇ ಸಂದೇಶ ಅಥವಾ ಸಂವಹನ ನಡೆದಿಲ್ಲ.

ಅಪರಾಧಿಯನ್ನು ಅರ್ಜಿದಾರರ ಮನೆಯಿಂದ ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ಹೊರತುಪಡಿಸಿ, ಅರ್ಜಿದಾರರಿಗೆ ಅಪರಾಧಿಯ ಶಿಕ್ಷೆಯ ಬಗ್ಗೆ ತಿಳಿದಿತ್ತು ಮತ್ತು ಅವರು ಉದ್ದೇಶಪೂರ್ವಕವಾಗಿ ಅಪರಾಧಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ.

ಸಾಕ್ಷ್ಯಾಧಾರಗಳಿಲ್ಲದೆ ಅವರ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜತೆಗೆ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ: ಕೊಲೆ ಆರೋಪದ ಪ್ರಕರಣದಲ್ಲಿ ಶರಣ್ ಅಲಿಯಾಸ್ ಶರಣ್ ಪೂಜಾರಿ ಎಂಬಾತನಿಗೆ ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

ಅಪರಾಧಿ ಶರಣ್ ತಲೆ ಮರೆಸಿಕೊಂಡಿದ್ದರಿಂದ ಆತನನ್ನು ಬಂಧಿಸಲು ಬರ್ಕೆ ಠಾಣಾ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ಅಂತಿಮವಾಗಿ ಉದಯ್ ಕುಮಾರ್ ಶೆಟ್ಟಿ ಮನೆಯಲ್ಲಿ ಅಪರಾಧಿಯನ್ನು ಬಂಧಿಸಿದ್ದರು.

ನಂತರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಆಶ್ರಯ ನೀಡಿದ ಆರೋಪದಡಿ ಉದಯ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನು ಪ್ರಶ್ನಿಸಿ ಉದಯ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅರ್ಜಿದಾರ ಉದಯ್ ಪರ ವಕೀಲರು ವಾದ ಮಂಡಿಸಿ, ಅಪರಾಧಿಗೆ ಉದ್ದೇಶಪೂರ್ವಕವಾಗಿ ಸಹಾಯ ಮಾಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳು ಹಾಜರುಪಡಿಸಿಲ್ಲ.

ಅರ್ಜಿದಾರರ ಮನೆಗೆ ಅಪರಾಧಿ ಬಂದಾಗ ಅವರಿಗೆ ಆತನ ವಿರುದ್ಧದ ಪ್ರಕರಣದ ಕುರಿತಂತೆ ಮತ್ತು ಕಾನೂನು ಸಂಘರ್ಷದ ಕುರಿತಂತೆ ಯಾವುದೇ ಮಾಹಿತಿ ಇರಲಿಲ್ಲ. ಹೀಗಾಗಿ ಅವರಿಗೆ ಆಶ್ರಯ ನೀಡಿದ್ದರು ಎಂದು ಪೀಠಕ್ಕೆ ವಿವರಿಸಿದ್ದರು.
(CRIMINAL PETITION NO. 14164 OF 2024)

ಲೇಖಕರು: ಮಂಜೇಗೌಡ ಕೆ.ಜಿ, ವಕೀಲರು, 9980178111

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!