Doddaballapura; Sri Prasanna Venkataramanaswamy Brahmarathotsava

ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು.

ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿರುವ ವೊಲ್ವೊ ಸಂಸ್ಥೆ, ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, `ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತು. ಈಗ ನಮ್ಮಲ್ಲಿ ವೋಲ್ವೊ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ.

ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೊ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ.

ಕಂಪನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು’ ಎಂದರು.

ವೋಲ್ವೊ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, `ಕರ್ನಾಟಕದಲ್ಲಿ ಕಂಪನಿಯು ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್/ಟ್ರಕ್ ತಯಾರಿಸುತ್ತಿದ್ದೇವೆ.

ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್/ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಜತೆಗೆ ಸ್ಥಳೀಯ ಮಾರುಕಟ್ಟೆ ಅಗತ್ಯಗಳನ್ನೂ ಸರಾಗವಾಗಿ ಪೂರೈಸಲು ಸಾಧ್ಯವಾಗಲಿದೆ’ ಎಂದರು.

ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ. ಇಲ್ಲಿರುವ ನಮ್ಮ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು, ಇಲ್ಲಿ ಆರ್ & ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆಗಳನ್ನು ನಿರ್ವಹಿಸಲಾಗುತ್ತಿದೆ.

ಇದಲ್ಲದೆ ಮಧ್ಯಪ್ರದೇಶದಲ್ಲಿ ಕೂಡ ಜಂಟಿ ಸಹಭಾಗಿತ್ವದ ಯೋಜನೆ ಜಾರಿಯಲ್ಲಿದೆ. ಕಂಪನಿಯ ವಹಿವಾಟು ಈಗ ವರ್ಷಕ್ಕೆ 50 ಬಿಲಿಯನ್ ಡಾಲರ್ ದಾಟಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!