ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನ‌.. ಸಿಎಂ ಸಂತಾಪ

Famous folk singer Sukri Bommagowda passed away

ಬೆಂಗಳೂರು: ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ (Sukri Bommagowda) ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಸುಕ್ರಜ್ಜಿ ಎಂದು ಪ್ರಸಿದ್ದರಾಗಿದ್ದ ಅವರು, ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ಇನ್ನೂ ಸುಕ್ರಜ್ಜಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ.

ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು.

ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು.

ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದು:ಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ ಎಂದಿದ್ದಾರೆ.

ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಲು ಜನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿರ್ಧರಿಸಿದ್ದರು.

ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಇದೀಗ ಹಾಲಕ್ಕಿ ಸಮುದಾಯ ತುಳಸಿ ಗೌಡ ಬೆನ್ನಲ್ಲೇ ಇದೀಗ ಸುಕ್ರಿ ಬೊಮ್ಮಗೌಡ ಅವರನ್ನೂ ಸಹ ಕಳೆದುಕೊಂಡಿದೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]