Sri Renuka Yallamma Temple developed on Dharmasthala, Tirupati model

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿ

ಬೆಳಗಾವಿ DC: ಸವದತ್ತಿಯ ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ (Shri Renuka Yallamma) ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ಯ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ.

ಒಂದೇ ದಿನದಲ್ಲಿ ಸರಿಸುಮಾರು 10 ಲಕ್ಷ ಜನರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಭಕ್ತಾದಿಗಳಿಗೆ ತೊಂದರೆಯಾಗದಂತೆ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ರಸ್ತೆಗಳನ್ನು ಮಾರ್ಪಡಿಸಿ ಟ್ರಾಫಿಕ್ ನಿಯಂತ್ರಣ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಬುಧವಾರ (ಫೆ.12) ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಚಕ್ಕಡಿಗಾಡಿ, ಜೀಪ್, ಟೆಂಪೋ, ಟ್ರ್ಯಾಕ್ಟರ್, ಬೈಕ್, ಕಾರ್, ಬಸ್ ಸೇರಿದಂತೆ ಎಲ್ಲ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸರಿಸುಮಾರು 1500 ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರು, ಪ್ರವಾಸೋದ್ಯಮ ಮಂಡಳಿ ಅಧ್ಯಕರು, ಈ ಭಾಗದ ಶಾಸಕರ ಸಲಹೆಯಂತೆ ವಿವಿಧ ಭಾಗಗಳಿಂದ ಆಗಮಿಸುವ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಇದಲ್ಲದೇ ಮೊದಲ ಬಾರಿಗೆ ಮಂಡಳಿ ಹಾಗೂ ಪ್ರಾಧಿಕಾರದ ವತಿಯಿಂದ ಭಕ್ತಾಧಿಗಳಿಗಾಗಿ ಮಜ್ಜಿಗೆ ದಾಸೋಹ ಮಾಡಲಾಗಿದೆ. ಮುಂದಿನ ವರ್ಷದಲ್ಲಿ ದಾಸೋಹ ಭವನ ಮಾಡಬೇಕು ಎಂದು ಯೋಜನೆ ರೂಪಿಸಲಾಗಿದೆ.

ತಿರುಪತಿ ಧರ್ಮಸ್ಥಳದ ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಅನುದಾನ ಲಭ್ಯವಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.

ದನಕರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಪಾರ್ಕಿಂಗ್ ಮತ್ತು ಟ್ರಾಫಿಕ್ ಮೂಲ ಸಮಸ್ಯೆಯಾಗಿತ್ತು. ಚಕ್ಕಡಿ ಗಾಡಿ ಹಾಗೂ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ಮಾಡಲಾಗಿದೆ.

ಗುಣಮಟ್ಟದ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಮಂಡಳಿಯಿಂದ ಯೋಜನೆ ಸಿದ್ಧಗೊಳ್ಳುತ್ತಿದೆ. ಜೋಗುಳಬಾವಿ, ಉಗರಗೋಳ ಹಾಗೂ ಸವದತ್ತಿ ರಸ್ತೆಯಿಂದ ಬರುವ ವಾಹನಗಳಿಗೆ ನೇರವಾಗಿ ಪಾರ್ಕಿಂಗ್ ಹೋಗಲು ರಸ್ತೆಗಳನ್ನು ಗುರುತಿಸಲಾಗಿದೆ. ಇದರಿಂದ ಟ್ರಾಫಿಕ್ ನಿಯಂತ್ರಣಕ್ಕೆ ಸಹಾಯವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ವಿವಿಧ ಭಾಗಗಳಿಂದ ಬರುವ ಭಕ್ತರಿಗೆ ಮುಖ್ಯವಾಗಿ ಪಾರ್ಕಿಂಗ್, ಲೈಟಿಂಗ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.

ದೇವಸ್ಥಾನದ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರು ವಾಹನಗಳನ್ನು ಪಾರ್ಕ್ ಮಾಡಿದಾಗ ಟ್ರಾಫಿಕ್ ಸಮಸ್ಯೆಯಾಗುತ್ತಿದೆ ಅದಕ್ಕೆ 15 ಟೊಯಿಂಗ್ ವಾಹನಗಳ ಮೂಲಕ ಪಾರ್ಕ್ ಮಾಡಿದ ವಾಹನಗಳನ್ನು ಸ್ಥಳಾಂತರಿಸಲಾಗುತ್ತಿದೆ.

ದೇವಸ್ಥಾನದ ಬದಿಯ ರಸ್ತೆಗಳಲ್ಲಿ ಕೂಡ ಯಾವುದೇ ವಾಹನಗಳ ಪಾರ್ಕಿಂಗ್ ಅವಕಾಶ ಕೊಟ್ಟಿಲ್ಲ. ರಸ್ತೆಗಳ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.

ಇದರಿಂದ ದೇವಸ್ಥಾನದ ಸುತ್ತ ಮುತ್ತ ಒಳ್ಳೆಯ ಸ್ವಚ್ಛ ವಾತಾವರಣ ನಿರ್ಮಾಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ತಿಳಿಸಿದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!