Working women to get one day of paid leave per month..!

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ.. ಮುಖ್ಯಾಂಶಗಳು ಇಲ್ಲಿವೆ

ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ (microfinance) ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ.

ಮೈಕ್ರೋಫೈನಾನ್ಸ್ (microfinance) ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು.

ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ.

ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ.

ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯವಾಗಿದೆ.

ಈ ಸಂಸ್ಥೆಗಳು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ ಹಾಗೂ ಸುಸ್ತಿ ಸಾಲಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು.

ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಲ್ಲಿಸದಿದ್ದರೆ 6 ತಿಂಗಳ ಕಾರಗೃಹವಾಸ ಅಥವಾ 10 ಸಾವಿರ ರೂ ವರೆಗೆ ದಂಡ ಅಥವಾ ಎರಡೂ ಶಿಕ್ಷೆಗೆ ಗುರಿಯಾಗುತ್ತಾರೆ.

ವಿವಾದಗಳನ್ನು ಇತ್ಯರ್ಥಗಳನ್ನು ಒಂಬುಡ್ಸ್‍ಮನ್‍ಗಳನ್ನು ಸರ್ಕಾರ ಅಧಿಸೂಚನೆ ಮೂಲಕ ನೇಮಕ ಮಾಡುವ ಅಧಿಕಾರ ಹೊಂದಿರುತ್ತದೆ.

ಬಲವಂತದ ವಸೂಲಾತಿಗಳನ್ನು ಕೈಗೊಳ್ಳುವ ವ್ಯಕ್ತಿಯು ವಿಚಾರಣೆಗೆ ಒಳಪಡುತ್ತಾನೆ, ಹತ್ತು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಗೃಹವಾಸ ಶಿಕ್ಷೆ ಹಾಗೂ 5 ಲಕ್ಷ ರೂ ವರೆಗೆ ವಿಧಿಸಬಹುದಾದ ಜುಲ್ಮಾನೆಗೆ ಒಳಪಡುತ್ತಾನೆ.

ಈ ಅಪರಾಧಗಳು ಸಂಜ್ಞೆಯ (ಕಾಗ್ನಿಜಿಬಲ್) ಹಾಗೂ ಜಾಮೀನು ರಹಿತ (ನಾನ್ ಬೇಲೆಬಲ್) ಪ್ರಕರಣಗಳಾಗಿರುತ್ತವೆ.

ಯಾವುದೇ ಪೊಲೀಸ್ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲು ನಿರಾಕರಿಸಬಾರದು. ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್‍ಪಿ) ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯು ಸ್ವತಃ (ಸುಮೊಟೊ) ಪ್ರಕರಣ ದಾಖಲಿಸಬಹುದು.

ಸರ್ಕಾರವು ಈ ಅಧ್ಯಾದೇಶದ ಅನುಷ್ಠಾನಕ್ಕೆ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

ಈ ಆದೇಶದಿಂದ ಆರ್.ಬಿ.ಐ ಮತ್ತು ಕೇಂದ್ರ / ರಾಜ್ಯ ಸರ್ಕಾರಗಳಿಂದ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚಿಸಲು ಹಾಗೂ ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ನೀಡುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹೇಳಿದ್ದಾರೆ.

ರಾಜಕೀಯ

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಿನ್ನೆಯಷ್ಟೇ ನೇಕಾರರ (Weavers) ಭವನ ಶಂಕುಸ್ಥಾಪನೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮವನ್ನೆ ಸೃಷ್ಟಿಸಿ ತಣ್ಣಗಾಗಿದೆ.

[ccc_my_favorite_select_button post_id="118262"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!