JDS demands withdrawal of metro fare hike

ಮೆಟ್ರೋ ಪ್ರಯಾಣ ದರ ಏರಿಕೆ ಹಿಂಪಡೆಯಲು ಜೆಡಿಎಸ್ ಆಗ್ರಹ: ರಮೇಶ್ ಗೌಡ ಬಂಧನದ ವೇಳೆ ಪೊಲೀಸರಿಗೆ ನಗು

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಜೆಡಿಎಸ್ (JDS) ಕಾರ್ಯಕರ್ತರು, ಮುಖಂಡರು ಶುಕ್ರವಾರ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದ ಈ ಪ್ರತಿಭಟನೆಯಲ್ಲಿ ಮೆಟ್ರೋ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಕೂಡಲೇ ದರ ಏರಿಕೆ ವಾಪಸ್ ಪಡೆಯಬೇಕು. ಇಲ್ಲವಾದರೆ ಉಗ್ರ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಅನೇಕ ಹಿರಿಯ ಮುಖಂಡರು ಭಾಗಿಯಾಗಿದ್ದ ಈ ಪ್ರತಿಭಟನೆಯಲ್ಲಿ, ತಕ್ಷಣವೇ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ರಮೇಶ್ ಗೌಡ ಅವರು, ದರ ಏರಿಕೆ ವಾಪಸ್ ಪಡೆಯುವಂತೆ ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಎರಡು ಸಲ ಮನವಿ ಸಲ್ಲಿಸಲಾಗಿದೆ.

ಜನರ ಆಕ್ರೋಶ, ಭಾವನೆಗಳನ್ನು ಲೆಕ್ಕಿಸದೆ ನಮ್ಮ ಮನವಿಯನ್ನು ಕಡೆಗಣಿಸಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸಿದ್ದೇವೆ. ತಕ್ಷಣವೇ ದರ ಏರಿಕೆ ವಾಪಸ್ ಪಡೆಯದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರಕಾರ ನೀಡುತ್ತಿರುವ ಉಚಿತ ಕೊಡುಗೆಗಳಿಂದ ಆರ್ಥಿಕವಾಗಿ ದಿವಾಳಿಯಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಖಜಾನೆಯಲ್ಲಿ ಹಣ ಇಲ್ಲ.

ರಾಜ್ಯ ಸರಕಾರ ನೀಡುತ್ತಿರುವ ಚೆಕ್ ಗಳೇ ಬೌನ್ಸ್ ಆಗುತ್ತಿವೆ. ಅಲ್ಲಿಗೆ ಸರಕಾರದ ಆರ್ಥಿಕತೆ ಎಲ್ಲಿಗೆ ಬಂದು ನಿಂತಿದೆ ಎಂಬುದನ್ನು ಗಮನಿಸಬಹುದು.

ಈ ಮುಜುಗರದಿಂದ ಪಾರಾಗಲು, ಸಂಪನ್ಮೂಲ ಕ್ರೋಢೀಕರಣ ಮಾಡಲು ಜನರ ಮೇಲೆ ಮೇಲಿಂದ ಮೇಲೆ ಹೊರೆ ಹೇರಿಕೆ ಮಾಡುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

₹41,360 ಕೋಟಿ ಹೆಚ್ಚುವರಿ ತೆರಿಗೆ

ಈ ಸರಕಾರ ಬಂದ ಮೇಲೆ ₹41,360 ಕೋಟಿ ಹೆಚ್ಚುವರಿ ತೆರಿಗೆ ವಿಧಿಸಲಾಗಿದೆ. ವಿದ್ಯುತ್, ಇಂಧನ, ಮುದ್ರಾಂಕ ಶುಲ್ಕ, ಮಾರ್ಗದರ್ಶಿ ಮೌಲ್ಯ ಹೆಚ್ಚಳ, ಬಸ್ ಪ್ರಯಾಣ ದರ ಏರಿಕೆ ಸೇರಿದಂತೆ ಅನೇಕ ರೀತಿಯಲ್ಲಿ ಸುಲಿಗೆ ಮಾಡಲಾಗುತ್ತಿದೆ.

ಇಲ್ಲಿ ಸುಲಿಗೆ ಮಾಡಿ ಅಲ್ಲಿ ಕೊಡುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಮಗೆ ಏನಾದರೂ ಒಳ್ಳೆಯದು ಮಾಡುತ್ತಾರೆ ಎಂದು ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಪ್ರಮಾಣದಲ್ಲಿ ಬಹುಮತ ಕೊಟ್ಟು ಅಧಿಕಾರ ನೀಡಿದರು. ಆದರೆ, ಈ ಸರಕಾರ ನೋಡಿದರೆ ಬಹು ವಿಧದಲ್ಲಿ ಜನರನ್ನು ಲೂಟಿ ಮಾಡುತ್ತಿದೆ.

ಕೂಡಲೇ ಮೆಟ್ರೋ ಏರಿಕೆ ಮಾಡಿರುವ ದರ ವಾಪಸ್ ಪಡೆಯದಿದ್ದರೆ ಜನರೇ ದಂಗೆ ಏಳಬೇಕಾಗುತ್ತದೆ ಎಂದು ರಮೇಶ್ ಗೌಡ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳಿಂದ ರಾಜ್ಯದ ಜನರು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. ಈಗ ಚುನಾವಣೆ ನಡೆದರೆ ಆ ಪಕ್ಷಕ್ಕೆ ಐವತ್ತು ಸ್ಥಾನ ಬರುವುದಿಲ್ಲ. ಜನ ರೋಸಿ ಹೋಗಿದ್ದಾರೆ.

ಮೆಟ್ರೋ ರೈಲು ಡೀಸೆಲ್, ಪೆಟ್ರೋಲ್ ನಿಂದ ನಡೆಯುವುದಿಲ್ಲ. ವಿದ್ಯುತ್ ನಿಂದ ನಡೆಯುತ್ತದೆ.

ಈಗಾಗಲೇ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ದುಬಾರಿ ದರದಿಂದ ಈಗಾಗಲೇ ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋ ತೊರೆದಿದ್ದಾರೆ.

ಬೆಂಗಳೂರಿನ ಟ್ರಾಫಿಕ್ ಕಡಿಮೆ ಮಾಡಬೇಕು ಎನ್ನುವ ಉದ್ದೇಶದಿಂದ ಅನುಷ್ಠಾನಕ್ಕೆ ಬಂದ ಈ ಯೋಜನೆ ತನ್ನ ಮೂಲ ಆಶಯವನ್ನೇ ಮರೆತು ವರ್ತನೆ ಮಾಡುತ್ತಿದೆ ಎಂದು ಅವರು ಆರೋಪ ಮಾಡಿದರು.

ಜೆಡಿಎಸ್ ರಾಜ್ಯ ವಕ್ತಾರ ಹೆಚ್.ಎನ್.ದೇವರಾಜು, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ತಿಮ್ಮೇಗೌಡ, ನಗರ ಘಟಕದ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣ ಸ್ವಾಮಿ, ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್, ಕೇಂದ್ರ ಲೋಕಸಭಾ ಕ್ಷೇತ್ರ ಅಧ್ಯಕ್ಷ ನಾಗೇಶ್ವರ ರಾವ್, ದಕ್ಷಿಣ ಲೋಕಸಭಾ ಅಧ್ಯಕ್ಷ ತುಳಸೀ ರಾಮ್, ನಗರ ಅಲ್ಪಸಂಖ್ಯಾತ ಅಧ್ಯಕ್ಷ ಅಫ್ರೋಜ್ ಬೇಗ್ ಹಾಗೂ ಬೆಂಗಳೂರು ನಗರ ಕ್ಷೇತ್ರದ ಅಧ್ಯಕ್ಷರು ಉಪಸ್ಥಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!