ಗಮನಿಸಿ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

Application Invitation for Prime Minister's Internship Scheme

ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿಯಲ್ಲಿ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ (Application Invitation for Recruitment).

ಹೊಸಕೋಟೆ ಟೌನ್ ನಗರಸಭೆಯಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಹುದ್ದೆ-01, ಹೊಸಕೋಟೆ ತಾಲೂಕಿನ ದೇವನಗುಂದಿ ಗ್ರಾಮ ಪಂಚಾಯಿತಿ.

ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ, ನರಸೀಪುರ, ಸೋಲದೇವನಹಳ್ಳಿ ಹಾಗೂ ಹಸಿರುವಳ್ಳಿ ಗ್ರಾಮ ಪಂಚಾಯಿತಿ.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ, ಹೊನ್ನಾವರ ಹಾಗೂ ಕೊನಘಟ್ಟ ಗ್ರಾಮ ಪಂಚಾಯಿತಿ.

ದೇವನಹಳ್ಳಿ ತಾಲ್ಲೂಕಿನ ಅವತಿ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಮಾರ್ಚ್ 14 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಷರತ್ತುಗಳು

  • ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.)
  • ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನ ಪರಿಗಣಿಸಲಾಗುವುದು.
  • 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು.
  • ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.
  • ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ.
  • ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.
  • ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ವಿಕಲಚೇತನರಾಗಿರಬಾರದು.
  • ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ಕಂದಾಯ ಇಲಾಖೆಯಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.
  • ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮಾಹೆಯಾನ ಗೌರವಧನ ರೂ.9000 ನೀಡಲಾಗುವುದು. ಇಲಾಖೆಯಿಂದ ಕಾಲಕಾಲಕ್ಕೆ ವಿಧಿಸುವ ಷರತ್ತುಗಳಿಗೆ ಬದ್ಧರಾಗಿರಬೇಕು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!