Former Prime Minister H.D. Deve Gowda wishes the people of the country on the occasion of Gauri Ganesh festival.

ರಾಜ್ಯಕ್ಕೆ ಆಗಿರುವ ನೀರಾವರಿ ಅನ್ಯಾಯ ಸರಿ ಹೋಗಬೇಕು; ಇದೇ ನನ್ನ ಜೀವನದ ಕೊನೆಯ ಆಸೆ ಎಂದು ಭಾವುಕರಾದ ಹೆಚ್‌ಡಿ ದೇವೇಗೌಡ

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಹೇಳಿದ್ದಾರೆ.

25 ಟಿಎಂಸಿ ಅಡಿ ನೀರು ಪಡೆಯುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್ ಸಂಸದರ ಜತೆಗೂಡಿ ಹೋರಾಟ ನಡೆಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ ಎಂದ ಅವರು, ನಾಡಿನ ವಿಷಯ ಬಂದಾಗ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನುವ ಭೇಧ ಮರೆತು ಒಟ್ಟಾಗಿ ಕೆಲಸ ಮಾಡಬೇಕು. ಇಂತಹ ಸಂಘಟಿತ ಪ್ರಯತ್ನಕ್ಕೆ ನಾನು ಹಿಂಜರಿಯುವುದಿಲ್ಲ ಎಂದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನೀರಾವರಿ ಯೋಜನೆಗಳ ಜಾರಿ ವಿಷಯದಲ್ಲಿ ಜೆಡಿಎಸ್ ಸುಮ್ಮನೆ ಕೂತಿಲ್ಲ, ಕೂರುವುದೂ ಇಲ್ಲ ಎಂದು ಹೇಳಿದ ದೇವೇಗೌಡರು, ನದಿ ಜೋಡಣೆ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದರು.

ನೀರಾವರಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಅದು ಸರಿಯಲ್ಲ. ಹಿಂದೆ ಸಿದ್ದರಾಮಯ್ಯ ಅವರು ನೀರಾವರಿ ಬಗ್ಗೆ ಚರ್ಚೆ ಮಾಡುವುದಕ್ಕೆ ನಮ್ಮ‌ ಮನೆಗೆ ಬಂದಿದ್ದರು. ಆಗ ನನಗೂ ಅವರಿಗೂ ಮಾತೇ ಇರಲಿಲ್ಲ. ಆದರೂ ನಾನು ಅವರ ಹಿಂದೆ ಹೋದೆ. ನನಗೇನು ಬೇಸರ ಇಲ್ಲ. ನೀರಾವರಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಬೇಡ.

ಸಂಸತ್ ಅಧಿವೇಶನದಲ್ಲಿ ಇದೇ ವಿಷಯ ಪ್ರಸ್ತಾಪ ಮಾಡಿ ಚರ್ಚೆ ಮಾಡಿದ್ದೇನೆ. ಗೋದಾವರಿ- ಕೃಷ್ಣ-ಕಾವೇರಿ ಯೋಜನೆ ವಿಚಾರವಾಗಿ ರಾಜ್ಯಕ್ಕೆ ನೀರಿನ ಹಂಚಿಕೆ ಹೆಚ್ಚಳ ಮಾಡುವಂತೆ ನಾನು ಪ್ರಧಾನಿಗಳು ಹಾಗೂ ಕೇಂದ್ರದ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದೇನೆ.

ಈ ಬಗ್ಗೆ 2022, 2024ರಲ್ಲಿ ಜಲಶಕ್ತಿ ಸಚಿವರಿಗೆ ಪತ್ರ ಬರೆದಿದ್ದೆ. ಸದ್ಯ ಈ ಯೋಜನೆಯಲ್ಲಿ ಕರ್ನಾಟಕಕ್ಕೆ 15.891 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಆದರೆ, ಈ ಪ್ರಮಾಣವನ್ನು 25 ಟಿಎಂಸಿಗೆ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದ್ದೇನೆ ಎಂದು ಅವರು ಪುನರುಚ್ಚಾರ ಮಾಡಿದರು.

ಗೋದಾವರಿ ನದಿಯಿಂದ ರಾಜ್ಯಕ್ಕೆ 15.91 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಿ, ಆ ನೀರನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಯಾವ ರೀತಿ ಸಾಧ್ಯ ಮಾಡುತ್ತೀರಿ? ಎನ್ನುವ ಪ್ರಶ್ನೆಯನ್ನು ನಾನು ಸಂಸತ್ತಿನಲ್ಲಿ ಕೇಳಿದ್ದೇನೆ. ಜತೆಗೆ, ಕರ್ನಾಟಕಕ್ಕೆ ಗೋದಾವರಿಯಿಂದ ಹರಿಸುವ ನೀರನ್ನು ಕಾವೇರಿಗೆ ಎಲ್ಲಿ ಜೋಡಿಸುತ್ತೀರಿ? ಎಂದು ಸಹ ಕೇಳಿದ್ದೇನೆ.

ಈ ಬಗ್ಗೆ ಯೋಜನೆಯಲ್ಲಿ ಸ್ಪಷ್ಟವಾಗಿ ತೋರಿಸಿಲ್ಲ. ಆ ಬಗ್ಗೆ ರಾಜ್ಯಕ್ಕೆ ನಿಖರವಾದ ಮಾಹಿತಿ ಬೇಕಿದೆ. ಇದರ ಕುರಿತಂತೆ ಪ್ರಧಾನಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯದ ಪರವಾಗಿ ನೀರಾವರಿ ಯೋಜನೆಗಳ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ಗಮನ ಸೆಳೆದಾಗ ಮಾಜಿ ಪ್ರಧಾನಿಗಳು, ಕಾಂಗ್ರೆಸ್ ನವರು ಅನೇಕ ನೀರಾವರಿ ಯೋಜನೆಗಳನ್ನು ಮಾಡಿದರು. ಆದರೆ, ಅನುಷ್ಠಾನಕ್ಕೆ ಹಣ ಇಡಲಿಲ್ಲ. ಅದರ ಬಗ್ಗೆ ನಾನು ಯಾಕೆ ಚರ್ಚೆ ಮಾಡಲಿ? ನಾನೇನು ಮಾಡಿದ್ದೇನೆ ಎಂಬುದಕ್ಕೆ ದಾಖಲೆ ಇದೆ.

ಕಾವೇರಿ ನೀರು ಸದ್ವಿನಿಯೋಗ ಮಾಡಿಕೊಳ್ಳಲು ನಾನೇನು ಮಾಡಿದ್ದೇನೆ ಎನ್ನುವುದಕ್ಕೆ ದೊಡ್ಡ ಇತಿಹಾಸ ಇದೆ. ಸದನದಲ್ಲಿ ನಾನು ಏನೆಲ್ಲಾ ಹೋರಾಟ ನಡೆಸಿದ್ದೇನೆ ಎನ್ನುವುದಕ್ಕೆ ದಾಖಲೆ ಇದೆ. ಪರಿಶೀಲನೆ ಮಾಡಬಹುದು.

ಭದ್ರಾ ಮೇಲ್ದಂಡೆಗೆ ಅನುಮತಿ ಕೊಡಿ ಎಂದು ಕೇಂದ್ರಕ್ಕೆ ಪತ್ರ ಬರೆದು ಒತ್ತಾಯ ಮಾಡಿದ್ದೇನೆ. ನಾನು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಯಲ್ಲ. ಮಹದಾಯಿ ಬಗ್ಗೆ ಕೂಡ ನಾನು ಹೋರಾಟ ನಡೆಸಿದ್ದೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ರಾಜ್ಯಕ್ಕೆ 25 ಟಿಎಂಸಿ ನೀರು ಕೊಡಬೇಕು. ಇದು ನಮ್ಮ ಡಿಮ್ಯಾಂಡ್. ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ 25 ಟಿಎಂಸಿ ನೀರು ಕರ್ನಾಟಕಕ್ಕೆ ಹಂಚಿಕೆ ಆಗಬೇಕು. ಇದು ದೊಡ್ಡ ಗುರಿ. ರಾಜಕೀಯದ ಅಗತ್ಯ ಇಲ್ಲ. ನಮ್ಮ ನಮ್ಮ ನಡುವೆಯೇ ಭಿನ್ನಾಭಿಪ್ರಾಯ ಬೇಡ. ಒಟ್ಟಾಗಿ ರಾಜ್ಯಕ್ಕಾಗಿ ಹೊರಾಟ ಮಾಡೋಣ ಎಂದು ಅವರು ಒತ್ತಿ ಹೇಳಿದರು.

ತಮಿಳುನಾಡಿಗೆ ನೀರಿನ ಸಮಸ್ಯೆ ಇಲ್ಲ‌

ತಮಿಳುನಾಡಿಗೆ ನೀರಿನ ಸಮಸ್ಯೆ ಇಲ್ಲ‌. ಯಥೇಚ್ಚವಾಗಿ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಈ ಬಗ್ಗೆ ಸಂಸತ್ ನಲ್ಲಿ ಮಾತಾಡೋವಾಗ ತಮಿಳುನಾಡಿನವರು ವಿರೋಧ ಮಾಡಲಿಲ್ಲ.

ನೀರು ಪಡೆಯಲು ನಾವು ಪಕ್ಷಬೇಧ ಮರೆತು ಒಟ್ಟಾಗಿ ಹೋರಾಟ ಮಾಡುತ್ತೇವೆ. ನನಗೆ ಆ ವಿಶ್ವಾಸ ಇದೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಗೋದಾವರಿ-ಕಾವೇರಿ ಬಗ್ಗೆ ಸಂಸತ್ ನಲ್ಲಿ ನಾನು ಮಾತಾಡಿದ್ದೇನೆ. ತಮಿಳುನಾಡಿನ ಎಲ್ಲಾ ರಾಜ್ಯಸಭೆ ಸದಸ್ಯರು ಒಕ್ಕೊರಳಿನಿಂದ ಗೋದಾವರಿ, ಕಾವೇರಿ ಅಂತ ಕೂಗಿದರು. ಇದರಲ್ಲಿ ಕರ್ನಾಟಕದ ಹೋರಾಟ ಮೊದಲಿನಿಂದಲೂ ಇದೆ. ನಾನು ನೀರಾವರಿ ಮಂತ್ರಿ ಆಗಿದ್ದಾಗಿನಿಂದ ಹೋರಾಟ ನಡೆಯುತ್ತಲೇ ಇದೆ. ಕಾವೇರಿ ನೀರು ಹಂಚಿಕೆಯಲ್ಲಿ ನಮಗೆ ಅನ್ಯಾಯವಾಗಿದೆ.

ಇದನ್ನು ಮೋದಿ ಅವರ ಗಮನಕ್ಕೆ ತಂದಿದ್ದೇನೆ. ನಮ್ಮ ರಾಜ್ಯದ ಒಬ್ಬರು ಪುಣ್ಯಾತ್ಮರು ನೀರು ಕೊಡುತ್ತೇನೆ ಎಂದು ಹೇಳಿದ್ದಾರೆ. ಅವರು ನೀರು ಕೊಟ್ಟರೆ ಸಂತೋಷ. ಚಿತ್ರದುರ್ಗ, ತುಮಕೂರು ಸೇರಿದಂತೆ ನೀರೇ ಕಾಣದ ಪ್ರದೇಶಗಳಿಗೆ ನೀರು ಹೋಗಬೇಕು. ಎಲ್ಲಿಂದಾದರೂ ನೀರು ಕೊಡಲಿ ಎಂದು ಅವರು ಹೇಳಿದರು.

ಕೊನೆಯ ಆಸೆ ಎಂದು ಭಾವುಕರಾದರು

ರಾಜ್ಯಕ್ಕೆ ನೀರಿನ ವಿಷಯದಲ್ಲಿ ನ್ಯಾಯ ಸಿಗಬೇಕು. ಅದೇ ನನ್ನ ಜೀವನದ ಕೊನೆಯ ಆಸೆ. ಈ ದೇಹ ಅಂತ್ಯ ಆಗುವುದರ ಒಳಗಾಗಿ ನಮ್ಮ ರಾಜ್ಯಕ್ಕೆ ನೀರಾವರಿ ವಿಷಯದಲ್ಲಿ ಆಗಿರುವ ಅನ್ಯಾಯ ಸರಿ ಹೋಗಬೇಕು.

ನಾನು ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ. ಅಷ್ಟರಲ್ಲಿ ಈ ನೀರಿನ ಸಮಸ್ಯೆ ಬಗೆಹರಿಸಬೇಕು ಎನ್ನುವ ಛಲವಿದೆ, ಬಗೆಹರಿಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಸೇರಿಸಿಕೊಂಡು ನಾನು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಭಾವುಕರಾಗಿ ಹೇಳಿದರು.

ಅನ್ಯಾಯ ಸರಿ ಮಾಡಬೇಕಿದೆ

ಕಾವೇರಿ, ಕಳಸಾ ಬಂಡೂರಿ ಯೋಜನೆಗಳಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ ಆಗಿದೆ. ಈಗ ಗೋದಾವರಿ – ಕಾವೇರಿ ಜೋಡಣೆ ಯೋಜನೆಯಲ್ಲಿಯೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ನಾವು ದನಿಯೆತ್ತಬೇಕಿದೆ.

ಕಳಸಾ ಬಂಡೂರಿ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಆದರೆ, ಈ ವಿವಾದ ಸುಪ್ರೀಂ ಕೋರ್ಟಿನಲ್ಲಿದೆ. ಹೀಗಾಗಿ ಪ್ರಧಾನಿಗಳು ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ.

ನಮ್ಮ ವಕೀಲರು ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಿ ಗೆಲ್ಲಬೇಕು. ರಾಜ್ಯ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಸಿಕ್ಕಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು; ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಮೊದಲು ಬಿಡುಗಡೆ ಮಾಡಲಿ. ರಾಜ್ಯ ಸರ್ಕಾರ ಅನೇಕ ನೀರಾವರಿ ಯೋಜನೆಗಳನ್ನು ಘೋಷಣೆ ಮಾಡಿದೆ. ಆದರೆ, ಹಣ ಕೊಡಲು ಸಾಧ್ಯವಾಗಿಲ್ಲ. ಅವರು ಮೊದಲು ಆ ಕೆಲಸ ಮಾಡಲಿ ಎಂದು ಎಂದು ತಿರುಗೇಟು ನೀಡಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಕೆ.ಎ.ತಿಪ್ಪೇಸ್ವಾಮಿ, ಜವರಾಯಿ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

ಜೆಡಿಎಸ್ ನಿಂದ ಬೃಹತ್ ಸಮಾವೇಶ

ಜೆಡಿಎಸ್ ಪಕ್ಷದಿಂದ ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಪಕ್ಷದ ರಾಷ್ಟ್ರಾಧ್ಯಕ್ಷರೂ ಆಗಿರುವ ದೇವೇಗೌಡರು ಹೇಳಿದರು.

ಪಕ್ಷ ಸಂಘಟನೆ ಹಾಗೂ ಜನಪರ ವಿಷಯಗಳನ್ನು ಇಟ್ಟುಕೊಂಡು ಸಮಾವೇಶ ನಡೆಸಬೇಕು ಎನ್ನುವುದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಉದ್ದೇಶ. ಅದಕ್ಕಾಗಿ ಮಾರ್ಚ್ 6ರಂದು ಪಕ್ಷದ ಕಚೇರಿಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದೇವೆ. ಅಂದು ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ ಎಂದು ಅವರು ಹೇಳಿದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!