Don't play like Modi cheerleader.. Kannadigas want to see Mutsaddi Deve Gowda: CM

ಮೋದಿಯವರ ಚಿಯರ್ ಲೀಡರ್‌ ತರ ಆಡಬೇಡಿ.. ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (HD Deve Gowda) ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Cmsiddaramaiah) ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದಿದ್ದಾರೆ.

ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.

ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ.

ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿ

ನೀರಾವರಿ ವಿಚಾರದಲ್ಲಿ ನ್ಯಾಯಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ಸನ್ಮಾನ್ಯ ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ತಿಳಿದುಕೊಂಡಿದ್ದೇನೆ.

ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ.

ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್  ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂದಾಗಿ ಕುಂಟುತ್ತಾ ಸಾಗಿದೆ.

ಪ್ರಸ್ತುತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (ಎನ್ ಬಿಡಬ್ಯುಎಲ್ ) ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ)ದ ಪರಿಶೀಲನೆಯಲ್ಲಿದೆ.

ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಾಗಿದೆ.

ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ‍್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.

ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ.

ಆದರೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ.

ಈ ಯೋಜನೆಯ ಅನಿವಾರ್ಯತೆಯನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ.

ಈ ಘೋಷಣೆಯ ಪ್ರಸ್ತಾವಕ್ಕೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಾ ಕೂತಿದೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ  ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯ ವಿವರಗಳೆಲ್ಲ ನಿಮಗೆ ಬಾಯಿಪಾಠದಲ್ಲಿರಬಹುದು.

ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ದೊರಕಿಸಿಕೊಟ್ಟರೆ ಬೆಂಗಳೂರು ನಿವಾಸಿಗಳು ಸದಾ ನಿಮಗೆ ಋಣಿಯಾಗಿರುತ್ತಾರೆ.

ಕೃಷ್ಣಾ ಮತ್ತು ಕಾವೇರಿ ನದಿಗಳ ಜೋಡಣೆಯ ನೀರಾವರಿ ಯೋಜನೆಯ ಬಗ್ಗೆ ನಿಮ್ಮ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಮಾತ್ರವಲ್ಲ ಸಮಸ್ತ ಕರ್ನಾಟಕ ನಿಮ್ಮ ಜೊತೆ ಇರುತ್ತದೆ.

ಆದರೆ ಹೊಸ ನೀರಾವರಿ ಯೋಜನೆಗಳನ್ನು ಪ್ರಾರಂಭಿಸುವ ಮೊದಲು ಅಪೂರ್ಣ ಸ್ಥಿತಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿಕೊಳ‍್ಳುತ್ತಿದ್ದೇನೆ.

ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸುತ್ತಿದ್ದೇನೆ.

ಚಿಯರ್ ಲೀಡರ್

ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ.

ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್ ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು.

ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು.

ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ.

ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ.

ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ.

ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ ಎಂದಿದ್ದಾರೆ.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!