Important instruction of CM to prevent micro finance harassment

ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಯಲು ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌(microfinance) ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ.

Guarantee scheme
ಎನ್ ವಿಶ್ವನಾಥ್

ಈ ಸಂವಾದದಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದ್ದು, ಅವರು ಈ ರೀತಿಯಲ್ಲಿವೆ.

• ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

• ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು.

• ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು.

• ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ.

• ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

• ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ ಅಹ್ಮದ್‌, ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ದರ್ಶಿ ಎಲ್.ಕೆ.ಅತೀಕ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಹ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!