ಬೆಂ.ಗ್ರಾ.ಜಿಲ್ಲೆ: ಕೃಷಿ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರ ಪುರಸ್ಕೃತ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಸಹಾಯಧನಕ್ಕಾಗಿ ಕೃಷಿ ಇಲಾಖೆಯಿಂದ ನೊಂದಾಯಿತರಾದ ರೈತರು/ ರೈತ ಉತ್ಪಾದಕರ ಸಂಸ್ಥೆ/ಸ್ವಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited).
ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗ ಸೃಜಿಸಲು, ದ್ವಿದಳಧಾನ್ಯ ಮತ್ತು ಸಿರಿಧಾನ್ಯ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ.
- ದ್ವಿದಳಧಾನ್ಯ ಉತ್ಪನ್ನಗಳ ಖರೀದಿ ಕೇಂದ್ರ ಸ್ಥಾಪಿಸಲು, ಗ್ರೇಡಿಂಗ್ ಮತ್ತು ಸಂಸ್ಕರಣಾ ಘಟಕಗಳಿಗೆ ಗರಿಷ್ಠ ರೂ.5 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
- ಸಿರಿಧಾನ್ಯ ಮತ್ತು ದ್ವಿದಳಧಾನ್ಯಗಳಿಗೆ ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಗರಿಷ್ಠ ರೂ.5 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
- ಸಿರಿಧಾನ್ಯಗಳ ಸಾವಯವ ಪ್ರಮಾಣೀಕರಣ ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಗರಿಷ್ಠ ರೂ.5ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
- ರೈತ/ ರೈತ ಉತ್ಪಾದಕರ ಸಂಸ್ಥೆ/ಸ್ವಸಹಾಯ ಗುಂಪುಗಳಿಗೆ ಸಿರಿಧಾನ್ಯದ ಪ್ರಾಥಮಿಕ ಮತ್ತು ದ್ವಿತೀಯ ಸಂಸ್ಕರಣಾ ಘಟಕಗಳೊಂದಿಗೆ ಶೇಖರಣಾ ಗೋದಾಮು ಸೌಲಭ್ಯಕ್ಕೆ ಗರಿಷ್ಠ ರೂ.50 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.