Daily story: Mandodari

ಹರಿತಲೇಖನಿ ದಿನಕ್ಕೊಂದು ಕಥೆ: ಮಂಡೋದರಿ

Daily story; ಮಂಡೋದರಿ ರಾಮಾಯಣದ ಅನುಸಾರ ರಾವಣನ ಪತ್ನಿ ಹಿಂದೂ ಆಚರಣೆಯ ಅನುಸಾರ ನಿತ್ಯವೂ ಪ್ರಾರ್ಥನೆ ಸಲ್ಲಿಸಬೇಕಾದ ಐದು ಜನ ಪತಿವ್ರತಾ ಮಹಿಳೆಯರಲ್ಲಿ ಒಬ್ಬಳು. ರಾಮಾಯಣವು ಅವಳನ್ನು ಸುಂದರಿ, ಧಾರ್ಮಿಕಳು ಹಾಗೂ ನೀತಿವಂತಳು ಎಂದು ಚಿತ್ರಿಸುತ್ತದೆ.

ಈಕೆ ಮಯಾಸುರ ಮತ್ತು ಗಂಧರ್ವ ಕನ್ಯೆ ಹೇಮಾ ಅವರ ಮಗಳು. ಇವಳಿಗೆ ಮೇಘನಾದ ಮತ್ತು ಅಕ್ಷಯ ಕುಮಾರ ಎಂಬ ಇಬ್ಬರು ಮಕ್ಕಳು.

ಮಯನು ಹೇಮೆಯೊಂದಿಗೆ ಒಂದು ಸಾವಿರ ವರ್ಷ ಪರ್ಯಂತ ಸಂಸಾರ ನಡೆಸಿದ. ಅವಳಿಗೋಸ್ಕರ ತನ್ನ ಮಾಯಾಶಕ್ತಿಯಿಂದ ವಜ್ರವೈಡೂರ್ಯ ಖಚಿತವಾದ ಸುವರ್ಣ ನಗರವನ್ನೇ ನಿರ್ಮಿಸಿದ.

ಕೊನೆಯಲ್ಲಿ ಹೇಮ ಮಯನನ್ನು ತೊರೆದು ಹೊರಟು ಹೋದಳು. ಅಷ್ಟರಲ್ಲಿ ಇವರಿಗೆ ಮಾಯಾವಿ, ದುಂದುಭಿ ಎಂಬ ಇಬ್ಬರು ಗಂಡುಮಕ್ಕಳೂ ಮಂಡೋದರಿ ಎಂಬ ಒಬ್ಬ ಹೆಣ್ಣುಮಗಳೂ ಹುಟ್ಟಿದ್ದರು.

ಮಯ ಹೇಮೆಯ ವಿರಹದಿಂದ ದುಃಖಿತನಾಗಿ ತನ್ನ ಮಗಳು ಮಂಡೋದರಿಯನ್ನು ಕರೆದುಕೊಂಡು ಕಾಡಿಗೆ ಬಂದುಬಿಟ್ಟ.

ರಾವಣ ಒಮ್ಮೆ ಆಕಸ್ಮಿಕವಾಗಿ ಮಯನಿಗೆ ಭೇಟಿಯಾದ. ತನ್ನ ಮಗಳನ್ನು ಮದುವೆಯಾಗುವಂತೆ ಮಯ ರಾವಣನನ್ನು ಕೇಳಿದಾಗ ರಾವಣ ಒಪ್ಪಿಕೊಂಡ.

ಆ ಕೂಡಲೇ ಮಯ ಅಗ್ನಿಯನ್ನು ಪ್ರತಿಷ್ಠಾಪಿಸಿ ವಿಧ್ಯುಕ್ತವಾಗಿ ಮಂಡೋದರಿಯನ್ನು ರಾವಣನಿಗೆ ಪಾಣಿಗ್ರಹಣ ಮಾಡಿಕೊಟ್ಟ. ಅದ್ಭುತವೂ ಅಮೋಘವೂ ಆದ ಒಂದು ಶಕ್ತ್ಯಾಯುಧವನ್ನೂ ರಾವಣನಿಗೆ ಕೊಟ್ಟ. ಅದು ಪರಮ ತಪೋಬಲದಿಂದ ಮಯನಿಗೆ ಲಭಿಸಿತ್ತು.

ಮಂಡೋದರಿಗೆ ಮಂಡೋಪರಿ ಎಂಬುದು ಇನ್ನೊಂದು ಹೆಸರು. ಮಂದ ಉಪರೀ ಎಂದರೆ ಕೃಶವಾದ ಉದರವುಳ್ಳವಳು ಎಂದರ್ಥ. ಮಂಡ ಉದರೀ ಎಂದರೆ ಸುಂದರವಾದ ಉದರವುಳ್ಳವಳು ಎಂದು ಅರ್ಥ.

ರಾವಣನನ್ನು ಮದುವೆಯಾದ ಮೇಲೆ ಇಂದ್ರಜಿತು, ಅಕ್ಷಯಕುಮಾರ ಎಂಬ ಮಹಾವೀರರನ್ನು ಮಕ್ಕಳಾಗಿ ಪಡೆದಳು. ಅನಂತರ ರಾವಣ ರಾಮಚಂದ್ರನ ಪತ್ನಿ ಸೀತೆಯನ್ನು ಅಪಹರಿಸಿಕೊಂಡು ತಂದ.

ರಾಮಲಕ್ಷ್ಮಣರು ವಾನರ ಸೈನ್ಯವನ್ನು ಕಟ್ಟಿಕೊಂಡು ರಾವಣನ ಮೇಲೆ ಯುದ್ಧಕ್ಕೆ ಬಂದರು. ಆ ಯುದ್ದದಲ್ಲಿ ರಾವಣ ಕುಂಭಕರ್ಣ ಇಂದ್ರಜಿತು ಎಲ್ಲರೂ ಸತ್ತುಹೋದರು.

ಇಂದ್ರಾದಿಗಳಿಗೂ ಅಜೇಯರಾದ ಇವರು ನಾಶವಾಗಬೇಕಾದರೆ ರಾಮ ಮಾನವನಲ್ಲ ದೇವಾಂಶ ಸಂಭೂತನೇ ಆಗಿರಬೇಕೆಂದು ಮಂಡೋದರಿ ಊಹಿಸಿದ್ದಳು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!