ದೊಡ್ಡಬಳ್ಳಾಪುರ, (Doddaballapura): ವಾಹನವೊಂದನ್ನು ಓವರ್ ಟೇಕ್ ಮಾಡಲು ಮುಂದಾದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ದುರ್ಗ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಮೃತ ದುರ್ದೈವಿಗಳನ್ನು ಬೆಂಗಳೂರಿನ ಕೋಣನಕುಂಟೆ ನಿವಾಸಿ ವಸಂತ್ (28 ವರ್ಷ), ಆವಲಹಳ್ಳಿ ನಿವಾಸಿ ವಸಂತ್ (26 ವರ್ಷ) ಎಂದು ಗುರುತಿಸಲಾಗಿದೆ.
ಗಾಯಗೊಂಡ ಕಿರಣ್ ಮತ್ತು ಯಶವಂತ ಎನ್ನುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೌರಿಬಿದನೂರು ಕಡೆಯಲ್ಲಿ ಬರ್ತ್‌ಡೇ ಪಾರ್ಟಿ ಮುಗಿಸಿ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಮಾಕಳಿ ದುರ್ಗದ ಬಳಿ ವಾಹನವೊಂದನ್ನು ಹಿಂದಿಕ್ಕುವ ಆತುರದಲ್ಲಿ ಎದುರೆಗಡೆ ಬರ್ತಿದ್ದ ಪೆಟ್ರೋಲ್ ಟ್ಯಾಂಕರ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕಾರಿನ ಚಾಲಕ ಹಾಗೂ ಆತನ ಹಿಂಭಾಗದಲ್ಲಿದ್ದ ಇಬ್ಬರು ಸಾವನಪ್ಪಿದ್ದು, ಎಡಭಾಗದಲ್ಲಿ ಕುಳಿತವರಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ದೇಹಗಳನ್ನು ಹರಸಾಹಸ ಪಟ್ಟು ಕಾರಿನಿಂದ ಮೃತದೇಹ ಹೊರತೆಗೆಯಲಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ: Doddaballapura: ಬೆಡ್‌ಶೀಟ್ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.