Dr. BR Ambedkar's knowledge and study made the Constitution of India great

ಭಾರತದ ಸಂವಿಧಾನ ಶ್ರೇಷ್ಠವಾಗಲು ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಮತ್ತು ಅಧ್ಯಯನ ಕಾರಣ; ಉಪನ್ಯಾಸಕ ಎನ್.ಮಹೇಶ್

ದೊಡ್ಡಬಳ್ಳಾಪುರ (Doddaballapura); ಭಾರತದ ಸಂವಿಧಾನ ಶ್ರೇಷ್ಠವಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರ  ಅಪಾರ ಜ್ಞಾನ ಮತ್ತು ಅಧ್ಯಯನ ಕಾರಣವಾಗಿದೆ‌ ಎಂದು ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎನ್.ಮಹೇಶ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು  ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು  ಸಂವಿಧಾನಾತ್ಮಕವಾಗಿ ದೊರಕಿಸಿ ಕೊಟ್ಟವರು. ಮಹಿಳೆಯರ ಹಕ್ಕುಗಳಿಗಾಗಿ ತಮ್ಮ ಕಾನೂನು ಮಂತ್ರಿಯ ಪದವಿಗೆ ರಾಜೀನಾಮೆಯನ್ನು ನೀಡಿದವರು ಎಂದರು.

ಡಾ. ಬಿ.ಆರ್.ಅಂಬೇಡ್ಕರ್‌ ಅವರು  ಮಹಿಳಾ ಪರವಾದ ಹಿಂದೂ ಕೋಡ್‌ಬಿಲ್, ಮಹಿಳಾ ಕಾರ್ಮಿಕರ ಕಲ್ಯಾಣ, ಸಮಾನ ವೇತನ, ತಾಯ್ತನದ ಸೌಲಭ್ಯ, ಮಹಿಳಾ ಶಿಕ್ಷಣ ಮುಂತಾದ ಹಕ್ಕುಗಳನ್ನು ದೊರೆಯುವಂತೆ ಮಾಡಲು ಶ್ರಮಿಸಿದರು. ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲಗೊಳ್ಳಬೇಕು ಎಂಬ ವಿಚಾರಗಳನ್ನು ಅಂಬೇಡ್ಕರ್ ಅವರು ಪ್ರಬಲವಾಗಿ ಪ್ರತಿಪಾದಿಸಿದ್ದರು.

ಮಹಿಳೆಯರ ಹಲವು ವಿಚಾರಗಳನ್ನು ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳಲ್ಲಿ ನಾವು ಕಾಣಬಹುದಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುತ್ತವೆ.   ಸಾಮಾಜಿಕ ನ್ಯಾಯವನ್ನು ಜಾರಿ ಮಾಡುವ ಸಲುವಾಗಿ ಸಂವಿಧಾನದಲ್ಲಿ ಸಾಮಾಜಿಕ ನ್ಯಾಯದ ‌ಅಂಶಗಳನ್ನು‌     ಅಳವಡಿಸಿದರು.

ಸಮಸಮಾಜ ನಿರ್ಮಾಣವೇ ಅಂಬೇಡ್ಕರ್ ಅವರ ಮುಖ್ಯ ಗುರಿಯಾಗಿತ್ತು. ವಿಶ್ವದಲ್ಲಿ ನಮ್ಮ ಭಾರತ ದೇಶಕ್ಕೆ ವಿಶೇಷ ಗೌರವ, ಘನತೆ, ಕೀರ್ತಿ ಲಭಿಸುತ್ತಿರುವುದೇ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಿಂದಾಗಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್ ಮಾತನಾಡಿ,
ಡಾ.ಅಂಬೇಡ್ಕರ್ ಅವರ ಚಿಂತನೆಗಳು, ಬರಹ ಭಾಷಣಗಳು, ಜೀವನ ಚರಿತ್ರೆ  ಎಲ್ಲರಿಗೂ ಸುಲಭವಾಗಿ ತಲುಪುವ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ಓದು  ಕಾರ್ಯಕ್ರಮ ನಡೆಯುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಘಟಕ ಯೋಜನೆಯಡಿ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮಗಳನ್ನು   ಜಿಲ್ಲೆಯ ಕಾಲೇಜುಗಳಲ್ಲಿ ನಡೆಸುತ್ತಿದೆ. 

ವಿಶೇಷ ಉಪನ್ಯಾಸಗಳ ಜೊತೆಗೆ   ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ  ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಾಮಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀನಿವಾಸ್, ರವಿ ಮುಂತಾದವರು ಭಾಗವಹಿಸಿದ್ದರು. 

ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಅಂಗವಾಗಿ ನಡೆದ ರಸಪ್ರಶ್ನೆ, ಪ್ರಬಂಧ, ಭಾಷಣ ಮತ್ತು ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ   ಬಹುಮಾನ ವಿತರಣೆ ನಡೆಯಿತು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!