ಫೆ.20 ರಂದು ತುರ್ತು ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನ

Emergency Chemical Spill Mock Demonstration

ಬೆಂ. ಗ್ರಾ ಜಿಲ್ಲೆ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫೆಬ್ರವರಿ 20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಅಫ್ ಸೈಟ್ ತುರ್ತು ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನ (Mock Demonstration) ನಡೆಸಲಾಗುವುದು.

ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ಮತ್ತು ಟೇಬಲ್ ಟಾಪ್ ಎಕ್ಸರ್ಸೈಜ್ ಸಭೆಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಾಡಲಾಯಿತು.

ಜಿಲ್ಲೆಯಲ್ಲಿ ಒಟ್ಟು 15 ಅಪಾಯಕಾರಿ ಕಾರ್ಖಾನೆಗಳು ಅಸ್ತಿತ್ವದಲ್ಲಿ ಇದ್ದು, ಅ ಕಾರ್ಖಾನೆಗಳಲ್ಲಿ ಎಲ್ಪಿಜಿ ಮತ್ತು ಪೆಟ್ರೋಲಿಯಂ ಗಳನ್ನು ಸ್ವೀಕರಣೆ,ಸಾಗಾಣಿಕೆ ಮಾಡಿ ಸಿಲಿಂಡರ್ ಅಥವಾ ಟ್ಯಾಂಕರ್ ಗಳಲ್ಲಿ ತುಂಬಿಸಿ ಗ್ರಾಹಕರಿಗೆ ನೀಡಲಾಗುತ್ತದೆ.

ಈ ಕಾರ್ಖಾನೆಗಳಲ್ಲಿ ಒಂದಾದ ಎಮ್/ಎಸ್ ಎಲ್.ಪಿ.ಜಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್. ಬಿ.ಪಿ.ಸಿ.ಎಲ್ ಎಲ್.ಟಿ.ಡಿ, ಎಂ.ಪಿ.ಸಿ.ಎಲ್ ಎಲ್.ಟಿ.ಡಿ ಬಾಟ್ಲಿಂಗ್ ಪ್ಲಾಂಟ್ ಎಲ್.ಟಿ.ಡಿ ಕಾರ್ಖಾನೆಯಲ್ಲಿ ಒಟ್ಟು 6650 ಮೆಟ್ರಿಕ್ ಟನ್ ಶೇಖರಣೆ ಮಾಡಿ ಸರಬರಾಜು ಮಾಡಲಾಗುತ್ತದೆ.

ಹಾಗಾಗಿ ಈ ಕಾರ್ಖಾನೆಯು ಜಿಲ್ಲೆಯಲ್ಲಿ ಅತೀ ಅಪಾಯಕಾರಿಯಾಗಿದ್ದು, ಈ ಅಣುಕು ಪ್ರದರ್ಶನದಲ್ಲಿ ಎಮ್/ಎಸ್ ಎಲ್.ಪಿ.ಜಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್. ಬಿ.ಪಿ.ಸಿ.ಎಲ್ ಎಲ್.ಟಿ.ಡಿ, ಎಂ.ಪಿ.ಸಿ.ಎಲ್ ಎಲ್.ಟಿ.ಡಿ ಕಾರ್ಖಾನೆಯ 20 ಕಾರ್ಮಿಕರಿಗೆ ತೊಂದರೆ ಆಗುವಂತೆ ಘಟನಾವಳಿಯನ್ನು ರೂಪಿಸಲಾಗುತ್ತದೆ.

ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ 3 ಕಾರ್ಖಾನೆಗಳಿಂದ ಸುಮಾರು 200 ಕಾರ್ಮಿಕರನ್ನು ಸ್ಥಳಾಂತರಿಸಿ ಹತ್ತಿರದ ಪುನರ್ನಿರ್ಮಾಣ ಕೇಂದ್ರ (ರಿಹಾಬಿಲೇಶನ್ ಸೆಂಟರ್)ಅಲ್ಲಿ ಇರಿಸಲು ನಿರ್ಧರಿಸಲಾಗಿದೆ.

ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ಡಿಸೆಂಬರ್ 04 ರಾಸಾಯನಿಕ ಸೋರಿಕೆ ನಿರ್ವಹಣಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಅಣಕು ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಣಕು ಪ್ರದರ್ಶನ ಆಗುವಂತಹ ಸಂದರ್ಭದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ, ಅಗ್ನಿ ಶಾಮಕದಳ, ಟ್ರಾಫಿಕ್ (ವಾಹನ ದಟ್ಟಣೆ)ನಿಯಂತ್ರಣ ಹಾಗೂ ಬಂದೋಬಸ್ತ್ ವ್ಯವಸ್ಥೆಗೆ, ಇತರೆ ಇಲಾಖೆಗಳ ಜವಾಬ್ದಾರಿಗಳನ್ನು ತಿಳಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಹಾಯಕರಾದ ರಾಜೀವ್ ಸುಲೋಚನ, ಕಾರ್ಖಾನೆಗಳು ಹಾಗೂ ಬಾಯ್ಲರ್ ಗಳ ಜಂಟಿ ನಿರ್ದೇಶಕರಾದ ನವನೀತ್ ಮೋಹನ್, ಹೊಸಕೋಟೆ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹ ಮೂರ್ತಿ, ಕಾರ್ಖಾನೆಗಳ ದೇವನಹಳ್ಳಿ ವ್ಯಾಪ್ತಿಯ ಉಪನಿರ್ದೇಶಕರಾದ ಸೋಮಶೇಖರ್, ನೆಲಮಂಗಲ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ತಿಮ್ಮರಾಜು, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]