ಪ್ರಯಾಗರಾಜ್: ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ (Maha Kumbhamela) ಅವಧಿ ವಿಸ್ತರಣೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವದಂತಿಗಳಿಗೆ ಪ್ರಯಾಗರಾಜ್ ಜಿಲ್ಲಾಧಿ ಕಾರಿ ರವೀಂದ್ರ ಮಂದರ್ ತೆರೆ ಎಳೆದಿದ್ದಾರೆ.
ಮಹಾ ಕುಂಭದ ಅವಧಿಯು ಧಾರ್ಮಿಕ ಮುಹೂರ್ತಗಳ ಮೇಲೆ ನಿರ್ಧರಿತವಾಗಿದ್ದು, ಫೆ.26ರ ಶಿವರಾತ್ರಿ ಯಂದು ಕೊನೆಗೊಳ್ಳಲಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ.
ಕುಂಭಮೇಳದ ದಿನಾಂಕ ವಿಸ್ತರಿಸುವ ಯಾವುದೇ ಪ್ರಸ್ತಾಪ ಜಿಲ್ಲಾಡಳಿತದ ಮುಂದಿಲ್ಲ ಎಂದು ಇದೇ ವೇಳೆ ಅವರು ಹೇಳಿದ್ದಾರೆ.
ಇತ್ತೀಚೆಗೆ ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಅವಧಿ ವಿಸ್ತರಣೆಗೆ ಮನವಿ ಮಾಡಿದ್ದರು. ಕುಂಭಮೇಳದಲ್ಲಿ ಈವರೆಗೆ 55 ಕೋಟಿ ಜನರು ಮಿಂದೆದ್ದಿದ್ದಾರೆ.