ಬೆಂಗಳೂರು: ಬಿಜೆಪಿಯಲ್ಲಿನ ಬಣ ಬಡಿದಾಟ ಮತ್ತೊಂದು ಸುತ್ತು ಆರಂಭವಾಗುತ್ತಿದೆ. ನಾಳೆ ಭಿನ್ನಮತೀಯರು ಸಭೆ ನಡೆಸಲು ನಿರ್ಧರಿಸಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ (Vijayendra) ಅವರು ಇಂದು ಬೆಳಗ್ಗೆ 11.30ಕ್ಕೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.
ಸುದ್ದಿಗಾರರ ಜೊತೆ ಮಾತನಾಡಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬುಧವಾರ ಸುದೀರ್ಘ ಪತ್ರಿಕಾಗೋಷ್ಠಿ ಕರೆಯಲಿದ್ದೇನೆ. ರಾಜ್ಯ ಸರ್ಕಾರದ ಗ್ಯಾರಂಟಿ ಕುರಿತ ಬಿಕ್ಕಟ್ಟು, ರಾಜಕೀಯ ಬಿಕ್ಕಟ್ಟಿನ ಕುರಿತು ಮಾತನಾಡುವ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕುತೂಹಲ ಸೃಷ್ಟಿಸಿದ್ದಾರೆ.
ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಿಸ್ತು ಸಮಿತಿ ನೀಡಿದ್ದ ನೋಟೀಸ್‌ಗೆ ಸುದೀರ್ಘ ಉತ್ತರ ನೀಡಿದ್ದು, ಯಾವ ಶಿಸ್ತು ಉಲ್ಲಂಘನೆ ಮಾಡಿಲ್ಲ ಎಂಬುಂವಂತೆ, ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಆರೋಪಗಳ ಪಟ್ಟಿ ನೀಡಿರುವುದಾಗಿ ತಿಳಿದು ಬಂದಿದೆ.
ಈ ಮೂಲಕ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಎಂದು ವಿಜಯೇಂದ್ರ ಬಣಕ್ಕಿಂತ ಹೆಚ್ಚಾಗಿ ಒತ್ತಾಯಿಸುತ್ತಿದ್ದ, ಕೆಲ ಖಾಸಗಿ ಸುದ್ದಿವಾಹಿನಿಗಳಿಗೆ ನಿರಾಸೆ ಎದುರಾಗಿದೆ.