ಬಮೂಲ್ ಚುನಾವಣೆ; ನಾನು ಪ್ರಬಲ ಆಕಾಂಕ್ಷಿ ಎಂದ ಅಪ್ಪಯ್ಯಣ್ಣ ಸಹೋದರ..!

Bamul election; Appayyanna brother said that I am a strong aspirant..!

ದೊಡ್ಡಬಳ್ಳಾಪುರ; ಮೇ.25 ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟ (Bamul) ಚುನಾವಣೆ ರಂಗೇರಲಾರಂಭಿಸಿದ್ದು, ಜೆಡಿಎಸ್ ಹಿರಿಯ ಮುಖಂಡರಾದ ದಿವಂಗತ ಹೆಚ್.ಅಪ್ಪಯ್ಯಣ್ಣ. (H Appayanna) ಅವರ ಸಹೋದರ ಹೆಚ್.ನಾರಾಯಣಪ್ಪ (H Narayanappa) ಅವರು ಸ್ಪರ್ಧೆ ಮಾಡುವುದಾಗಿ ಘೋಷಿಸುವ ಮೂಲಕ ಮತ್ತಷ್ಟು ತೀವ್ರತೆ ಹೆಚ್ಚಿಸಿದ್ದಾರೆ.

ಈಗಾಗಲೇ ಬಿಜೆಪಿಯ ಹಾಲಿ ನಿರ್ದೇಶಕ ಬಿಸಿ ಆನಂದ್ ಕುಮಾರ್ (BC Ananad Kumar) ಅವರು ರೈತ ಪರ ಕಾರ್ಯಗಳ ಮೂಲಕ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮತ್ತೊಂದೆಡೆ ಜೆಡಿಎಸ್ ಹಿರಿಯ ಮುಖಂಡ ಹುಸ್ಕೂರು ಆನಂದ್ (Huskur Ananad) ಅವರು ನಾನು ಸ್ಪರ್ಧಿ ಎನ್ನುತ್ತಿರುವ ಬೆನ್ನಲ್ಲೇ, ಅಪ್ಪಯ್ಯಣ್ಣ ಅವರ ಸಹೋದರ ನಾರಾಯಣಪ್ಪ ಅವರು ನಾನು ಆಕಾಂಕ್ಷಿ ಎಂದು ಘೋಷಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಇಂದು ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ನಾರಾಯಣಪ್ಪ (Narayanappa) ಅವರು, ಸಹೋದರರಾದ ಅಪ್ಪಯ್ಯಣ ಅವರ ಅಕಾಲಿಕ ನಿಧನದಿಂದಾಗಿ ಸ್ಪರ್ಧೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಸ್ನೇಹಿತರು, ಹಿತೈಷಿಗಳು ಸ್ಪರ್ಧೆ ಮಾಡಲೇ ಬೇಕೆಂದು ಒತ್ತಡ ಹೇರುತ್ತಿದ್ದಾರೆ.

ಈಗಾಗಲೇ ಡೈರಿ ಕ್ಷೇತ್ರದಲ್ಲಿ ಕಾರ್ಯದರ್ಶಿಯಾಗಿ, ಮುಖ್ಯ ಕಾರ್ಯನಿರ್ವಾಹಕನಾಗಿ 38 ವರ್ಷ ಅನುಭವ ಹೊಂದಿದ್ದೇನೆ. ಅಲ್ಲದೆ ಹಾಡೋನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಡೈರಿಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ.

ಬಮೂಲ್ ನಿರ್ದೇಶಕ ಸ್ಥಾನದ ಆಯ್ಕೆ ಕುರಿತು, ಈಗಾಗಲೇ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಮುಖಂಡರಾದ ಹರೀಶ್ ಗೌಡ ಅವರೊಂದಿಗೆ ಚರ್ಚೆ ನಡೆಸಲಾಗಿದೆ.

ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್ ನನಗೆ ಸಿಗುವ ವಿಶ್ವಾಸವಿದೆ. ಹುಸ್ಕೂರು ಆನಂದ್ ಅವರಿಗೆ ಯಾರು ಒತ್ತಡ ಹೇರಿದ್ದಾರೋ ಗೊತ್ತಿಲ್ಲ, ಅಪ್ಪಯ್ಯಣ್ಣ ಕುಟುಂಬದಿಂದ ಯಾರು ಒತ್ತಡ ಹೇರಿಲ್ಲ.

ಬಮೂಲ್ ನಿರ್ದೇಶಕ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ದನಾಗಿರುವುದಾಗಿ ನಾರಾಯಣಪ್ಪ ಅವರು ಇದೇ ವೇಳೆ ಸ್ಪಷ್ಟ ಪಡಿಸಿದ್ದಾರೆ.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ.8 ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121780"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]